ಅಶ್ಲೀಲ ವಿಡಿಯೋ ತೋರಿಸಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಿಕ್ಷಕನ ಬಂಧನ

ಆರೋಪಿಯು ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ. ಜೊತೆಗೆ ನಾಲ್ಕನೇ ತರಗತಿ ಮಕ್ಕಳಿಗೆ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಮೈ-ಕೈ ಮುಟ್ಟಿ ಮಾತನಾಡುತ್ತಿದ್ದ ಎಂದು ವಿದ್ಯಾರ್ಥಿನಿಯರು ಗಂಭೀರ  ಆರೋಪ ಮಾಡಿದ್ದಾರೆ.

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

 • Share this:
  ಮಂಡ್ಯ(ಫೆ.06): ಶಿಕ್ಷಕನೊಬ್ಬ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಮಂಡ್ಯ ಜಿಲ್ಲೆಯ ಶಾಲೆಯೊಂದರಲ್ಲಿ ಕೇಳಿ ಬಂದಿದೆ. ಸದ್ಯ ಗ್ರಾಮಸ್ಥರು ಶಿಕ್ಷಕನನ್ನು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

  ಕೆ.ಆರ್​.ಪೇಟೆಯ ವಡ್ಡರಹಳ್ಳಿ ಸರ್ಕಾರಿ ಶಾಲೆ ಶಿಕ್ಷಕ ಭಾಸ್ಕರ್​ ರಾವ್​​ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ. ಆರೋಪಿಯು ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ. ಜೊತೆಗೆ ನಾಲ್ಕನೇ ತರಗತಿ ಮಕ್ಕಳಿಗೆ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಮೈ-ಕೈ ಮುಟ್ಟಿ ಮಾತನಾಡುತ್ತಿದ್ದ ಎಂದು ವಿದ್ಯಾರ್ಥಿನಿಯರು ಗಂಭೀರ  ಆರೋಪ ಮಾಡಿದ್ದಾರೆ.

  ‘ಪಕ್ಷ ದ್ರೋಹಿಗಳು ಮಂತ್ರಿಯಾಗಿದ್ದು ಸಂತಸ ತಂದಿಲ್ಲ; ನನ್ನ ಪಾಲಿಗವರು ಅನರ್ಹರು‘ - ಸಿದ್ದರಾಮಯ್ಯ

  ಶಿಕ್ಷಕನ ಅನುಚಿತ ವರ್ತನೆಯನ್ನು ಕಂಡು ವಿದ್ಯಾರ್ಥಿನಿಯರು ತಮ್ಮ ಪೋಷಕರಿಗೆ ದೂರು ನೀಡಿದ್ದರು. ಶಿಕ್ಷಕನ ವಿರುದ್ಧ ಕೋಪಗೊಂಡ ವಿದ್ಯಾರ್ಥಿನಿಯರ ಪೋಷಕರು ಇಂದು ಶಾಲೆಗೆ ದಿಢೀರ್ ಭೇಟಿ ನೀಡಿದ್ದರು. ಈ ವೇಳೆ ಶಿಕ್ಷಕ ವಿದ್ಯಾರ್ಥಿನಿಯರ ಜೊತೆ ಅಶ್ಲೀಲವಾಗಿ ವರ್ತಿಸುತ್ತಿದ್ದ ಎಂದು ತಿಳಿದು ಬಂದಿದೆ. ಕೂಡಲೇ ಪೋಷಕರು ಶಿಕ್ಷಕನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

  ಕಿಕ್ಕೇರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕಾಮುಕ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

   

   
  First published: