• Home
  • »
  • News
  • »
  • state
  • »
  • Savarkar Photo: ಮಂಗಳೂರಲ್ಲೂ ಸಾವರ್ಕರ್ ಫೋಟೋ ವಿವಾದ, ಸ್ವಾತಂತ್ರ್ಯ ಸಂಭ್ರಮದ ನಡುವೆ ಪರ-ವಿರೋಧ!

Savarkar Photo: ಮಂಗಳೂರಲ್ಲೂ ಸಾವರ್ಕರ್ ಫೋಟೋ ವಿವಾದ, ಸ್ವಾತಂತ್ರ್ಯ ಸಂಭ್ರಮದ ನಡುವೆ ಪರ-ವಿರೋಧ!

ವಿನಾಯಕ್ ದಾಮೋದರ್ ಸಾರ್ವಕರ್

ವಿನಾಯಕ್ ದಾಮೋದರ್ ಸಾರ್ವಕರ್

ದೇಶ ಭಕ್ತಿಗೀತೆಯ ನೃತ್ಯ ಪ್ರದರ್ಶನ ಸಂದರ್ಭ ವೀರ ಸಾವರ್ಕರ್ ಫೋಟೋ ಪ್ರದರ್ಶಿಸಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಪಂಚಾಯತ್ನ ಎಸ್‌ಡಿಪಿಐ ಮತ್ತು ಕಾಂಗ್ರೆಸ್ ಸದಸ್ಯರ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.

  • Share this:

ಮಂಗಳೂರು: ರಾಜ್ಯದಲ್ಲಿ ಮತ್ತೆ ಐತಿಹಾಸಿಕ ವ್ಯಕ್ತಿಗಳ (Historical Persons) ಪರ ವಿರುದ್ಧ ಘರ್ಷಣೆಗಳು (collision) ಜೋರಾಗುತ್ತಿವೆ. ಶಿವಮೊಗ್ಗದ (Shivamogga) ಮಾಲ್ (mall) ಒಂದರಲ್ಲಿ ಮೊನ್ನೆ ವಿನಾಯಕ ದಾಮೋದರ್ ಸಾವರ್ಕರ್ (Vinayak Damodar Savarkar) ಫೋಟೋ (Photo) ವಿಚಾರವಾಗಿ ಗಲಾಟೆ ನಡೆದಿತ್ತು. ಇದಾದ ಮೇಲೆ ಇಂದು ಶಿವಮೊಗ್ಗದಲ್ಲೇ ಟಿಪ್ಪು ಸುಲ್ತಾನ್ (Tipu Sultan) ಹಾಗೂ ಸಾವರ್ಕರ್ ವಿಚಾರಕ್ಕೆ ಗಲಾಟೆ ನಡೆದಿದ್ದು, ಓರ್ವ ಯುವಕನಿಗೆ ಚಾಕು (Knif) ಇರಿಯಲಾಗಿದೆ. ಇದೀಗ ಮಂಗಳೂರಲ್ಲೂ ಸಾವರ್ಕರ್ ಫೋಟೋ ವಿಚಾರಕ್ಕೆ ಕಿರಿಕ್ ನಡೆದಿರುವ ಬಗ್ಗೆ ವರದಿಯಾಗಿದೆ.


ಸಾವರ್ಕರ್ ಫೋಟೋ ಪ್ರದರ್ಶಿಸಿದ್ದಕ್ಕೆ ಆಕ್ಷೇಪ


ದೇಶ ಭಕ್ತಿಗೀತೆಯ ನೃತ್ಯ ಪ್ರದರ್ಶನ ಸಂದರ್ಭ ವೀರ ಸಾವರ್ಕರ್ ಫೋಟೋ ಪ್ರದರ್ಶಿಸಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಪಂಚಾಯತ್ನ ಎಸ್‌ಡಿಪಿಐ ಮತ್ತು ಕಾಂಗ್ರೆಸ್ ಸದಸ್ಯರ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.


ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ವೇಳೆ ಕಿರಿಕ್


ಇಂದು ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಗುರುಪುರ ಗ್ರಾ‌ಮ ಪಂಚಾಯತ್‌ನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.. ಕಾರ್ಯಕ್ರಮದಲ್ಲಿ ಗುರುಪುರ ಬೆಥನಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ನೃತ್ಯ ಮಾಡಿದರು. ನೃತ್ಯದ ವೇಳೆ ವಿದ್ಯಾರ್ಥಿಗಳು ಸಾವರ್ಕರ್ ಫೋಟೋ ಹಿಡಿದು ನೃತ್ಯ ಮಾಡಿದ್ದಾರೆ. ಇದಕ್ಕೆ ಅಲ್ಲಿದ್ದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: Shivamogga: ಮನೆಮುಂದೆ ನಿಂತಿದ್ದ ಯುವಕನಿಗೆ ಚಾಕು ಇರಿತ, ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ


 ಎಸ್‌ಡಿಪಿಐ, ಕಾಂಗ್ರೆಸ್ ಸದಸ್ಯರಿಂದ ಆಕ್ಷೇಪ


ಈ ವೇಳೆ SDPI ಹಾಗೂ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ಕಿರಿಕ್ ಮಾಡಿದ್ದಾರೆ. ಗ್ರಾ.ಪಂ. ಸಿಬ್ಬಂದಿ ಜೊತೆ SDPI ಮುಖಂಡರು ವಾಗ್ವಾದ ನಡೆಸಿದ್ದಾರೆ. ಶಾಲಾ ಮುಖ್ಯೋಪಾಧ್ಯಾಯರನ್ನು ಕರೆಸಿದ ಪಂಚಾಯತ್ ಸದಸ್ಯರು, ಬಹಿರಂಗ ಕ್ಷಮಾಪಣೆ ಕೇಳಿಸಿದ್ದಾರೆ ಎನ್ನಲಾಗಿದೆ. ಕೊನೆಗೆ ಸ್ಥಳದಲ್ಲಿ ಹಾಜರಿದ್ದ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಇನ್ನು ಪಂಚಾಯತ್ ಸದಸ್ಯರ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಮನೆಮುಂದೆ ನಿಂತಿದ್ದ ಯುವಕನಿಗೆ ಚಾಕು ಇರಿತ


ಶಿವಮೊಗ್ಗದ ಬಜಾರ್‌ನಲ್ಲಿ (Bazaar) ಓರ್ವನಿಗೆ ಚಾಕು (Knif) ಇರಿಯಲಾಗಿದೆ. ಅಮೃತ ಮಹೋತ್ಸವದ (Amrit Mahitsava) ಆಚರಣೆ ದಿನದಂದೇ ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಹಾಗೂ ಟಿಪ್ಪು ಸುಲ್ತಾನ್ (Tipu Sultan) ಭಾವಚಿತ್ರ ವಿವಾದ (Photo Controversy) ತೀವ್ರ ಸ್ವರೂಪ ಪಡೆದುಕೊಂಡಿದೆ. ಶಿವಮೊಗ್ಗದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಹಿಂದೂಪರ ಸಂಘಟನೆ ಕಾರ್ಯ ಕಾರ್ಯಕರ್ತರು ವೀರ ಸಾವರ್ಕರ್ ಭಾವಚಿತ್ರ ಹಾಕಿದ್ದರು. ಇದಕ್ಕೆ ವಿರೋಧವಾಗಿ ಮುಸ್ಲಿಂ ಸಮುದಾಯದವರು ಟಿಪ್ಪು ಭಾವಚಿತ್ರ ಹಾಕಿದ್ದರು. ಆಗ ಗಲಾಟೆ ಶುರುವಾಗಿತ್ತು. ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೇ ಗಲಾಟೆಯ ಮುಂದುವರೆದ ಭಾಗವಾಗಿ ಮನೆ ಮುಂದೆ ನಿಂತಿದ್ದ ಯುವಕನಿಗೆ ಚಾಕು ಇರಿಯಲಾಗಿದೆ ಅಂತ ಹೇಳಲಾಗುತ್ತಿದೆ.


ಯುವಕನಿಗೆ ಚಾಕು ಇರಿತ


ಶಿವಮೊಗ್ಗದ ಬಜಾರ್‌ನಲ್ಲಿ 20 ವರ್ಷದ ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿಯಲಾಗಿದೆ. ಆತ ತನ್ನ ಮನೆ ಮುಂದೆ ನಿಂತಿದ್ದಾಗ ದುಷ್ಕರ್ಮಿಗಳು ಪ್ರೇಮ್‌ ಸಿಂಗ್‌ಗೆ ಚಾಕು ಇರಿದಿದ್ದಾರೆ ಎನ್ನಲಾಗಿದೆ.  ಚಾಕು ಇರಿತದಿಂದ ಯುವಕ ಪ್ರೇಮ್ ಸಿಂಗ್ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಕುಟುಂಬಸ್ಥರು ಹಾಗೂ ಸ್ಥಳೀಯರು ಸೇರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.


ಫ್ಲೆಕ್ಸ್ ವಿಚಾರಕ್ಕೆ ಗಲಾಟೆ


ಶಿವಮೊಗ್ಗದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಹಿಂದೂಪರ ಸಂಘಟನೆ ಕಾರ್ಯ ಕಾರ್ಯಕರ್ತರು ವೀರ ಸಾವರ್ಕರ್ ಭಾವಚಿತ್ರ ಹಾಕಿದ್ದರು. ಇದಕ್ಕೆ ವಿರೋಧವಾಗಿ ಮುಸ್ಲಿಂ ಸಮುದಾಯದವರು ಟಿಪ್ಪು ಭಾವಚಿತ್ರ ಹಾಕಿದ್ದರು.  ಅಲ್ಲದೇ ಹಿಂದೂ ಸಂಘಟನೆ ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಪರಸ್ಪರ ಪರ-ವಿರೋಧದ ಘೋಷಣೆ ಕೂಗಿದ್ದರು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಲಾಠಿಚಾರ್ಜ್ ಮಾಡಿದ್ದರು.


ಇದನ್ನೂ ಓದಿ: Independence day: ಧ್ವಜಾರೋಹಣಕ್ಕೆ ತೆರಳಿದ್ದ ವೇಳೆ ಕಳ್ಳತನ, ಮತ್ತೊಂದೆಡೆ ಸೈನಿಕ ಸಾವು!


ಗಲಾಟೆ ಕೇಸ್‌ನಲ್ಲಿ 10 ಜನರು ಪೊಲೀಸ್ ವಶಕ್ಕೆ


ಈಗಾಗಲೇ ಫ್ಲೆಕ್ಸ್ ಗಲಾಟೆ ವಿಚಾರಕ್ಕೆ 19 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಚಾಕು ಇರಿತಗೊಂಡ ಯುವಕನಿಗೆ ಮೆಗ್ಗಾನ್ ಆಸ್ಪತ್ರೆಯ ತುರ್ತು ವಿಭಾಗದಲ್ಲಿ ತಕ್ಷಣವೇ ಚಿಕಿತ್ಸೆಗೊಳಿಸಲಾಗಿದೆ.

Published by:Annappa Achari
First published: