HOME » NEWS » State » AAM AADMI PARTY DEMANDS RESIGNATION OF MINISTER RAMESH JARKIHOLI MAK

Ramesh Jarkiholi: ರಮೇಶ್​ ಜಾರಕಿಹೊಳಿ ರಾಸಲೀಲೆ ಪ್ರಕರಣ; ಸಚಿವರ ರಾಜೀನಾಮೆಗೆ ಆಮ್​ ಆದ್ಮಿ ಪಕ್ಷ ಒತ್ತಾಯ

ಮಹಿಳಾ ದಿನಾಚರಣೆ ಹತ್ತಿರ ಇರುವಾಗಲೇ ಇಂತಹ ಘಟನೆ ಹೊರಬಂದಿರುವುದು ನಾಚಿಕೆಗೇಡು. ಬಿಜೆಪಿ ಸರ್ಕಾರಕ್ಕೆ ಮಹಿಳಾ ದಿನಾಚರಣೆ ನಡೆಸಲು ನೈತಿಕತೆ ಇದೆಯೇ ಎಂದು ಆಮ್​ ಆದ್ಮಿ ಪಕ್ಷದ ನಾಯಕರು ಪ್ರಶ್ನಿಸಿದ್ದಾರೆ.

news18-kannada
Updated:March 2, 2021, 9:33 PM IST
Ramesh Jarkiholi: ರಮೇಶ್​ ಜಾರಕಿಹೊಳಿ ರಾಸಲೀಲೆ ಪ್ರಕರಣ; ಸಚಿವರ ರಾಜೀನಾಮೆಗೆ ಆಮ್​ ಆದ್ಮಿ ಪಕ್ಷ ಒತ್ತಾಯ
ಸಚಿವ ರಮೇಶ್​ ಜಾರಕಿಹೊಳಿ.
  • Share this:
ಬೆಂಗಳೂರು (ಮಾರ್ಚ್​ 02); ಯುವತಿಗೆ ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಸಚಿವ ರಮೇಶ್ ಜಾರಕಿಹೊಳಿ ಅವರಿಂದ ಈ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ಪಡೆಯಬೇಕು ಹಾಗೂ ಕರ್ನಾಟಕ ಭವನವನ್ನು ಕೆಟ್ಟ ಉದ್ದೇಶಕ್ಕೆ ಬಳಸಿಕೊಂಡಿರುವ ರಮೇಶ್ ಜಾರಕಿಹೊಳಿ ಅವರು ನಮ್ಮ ಕರ್ನಾಟಕದ ಘನತೆಗೆ ಕಪ್ಪು ಚುಕ್ಕೆ. ಈ ಕೂಡಲೇ ಶಾಸಕ ಸ್ಥಾನದಿಂದಲೂ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಜಾ ಗೊಳಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ‌ಕುಶಾಲ ಸ್ವಾಮಿ ಆಗ್ರಹಿಸಿದ್ದಾರೆ.

ಮಹಿಳಾ ದಿನಾಚರಣೆ ಹತ್ತಿರ ಇರುವಾಗಲೇ ಇಂತಹ ಘಟನೆ ಹೊರಬಂದಿರುವುದು ನಾಚಿಕೆಗೇಡು. ಬಿಜೆಪಿ ಸರ್ಕಾರಕ್ಕೆ ಮಹಿಳಾ ದಿನಾಚರಣೆ ನಡೆಸಲು ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು.

ಸದನದಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದವರಿಗೆ ಸಚಿವ ಸ್ಥಾನ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನಿಮ್ಮ ಸರ್ಕಾರದ ಮೇಲೆ ಮಹಿಳೆಯರಿಗೆ ಕಿಂಚಿತ್ತೂ ನಂಬಿಕೆ ಇಲ್ಲ. ಈ ಕೂಡಲೇ ರಮೇಶ್ ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆಯದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಿಡಿ ಬಾಂಬ್​; ಸಚಿವರ ರಾಸಲೀಲೆ ವಿಡಿಯೋ ವಿರುದ್ಧ ದೂರು

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೇ, ನೀವು ಈ ಕೂಡಲೇ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಹಾಗೂ ಯುವತಿಯ ಕುಟುಂಬಸ್ಥರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಎಎಪಿ ವತಿಯಿಂದ ಆಗ್ರಹಿಸಲಾಗಿದೆ.
Published by: MAshok Kumar
First published: March 2, 2021, 9:32 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories