ಮಂಗಳೂರು: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ (BK Hariprasad) ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕು ಎಂಬ ಕೂಗು ಕೇಳಿಬಂದಿದೆ. ಮಂಗಳೂರಿನಲ್ಲಿ (Mangaluru) ಮಾಜಿ ಸಚಿವ ಅಭಯಚಂದ್ರ ಜೈನ್ (Abhayachandra jain) ಅವರು ಬಿಕೆ ಹರಿಪ್ರಸಾದ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡುವಂತೆ ಒತ್ತಾಯ ಮಾಡಿದ್ದಾರೆ.
ಇದನ್ನೂ ಓದಿ: Puttur BJP: ಯತ್ನಾಳ್ ಸಮ್ಮುಖದಲ್ಲೇ ಪುತ್ತೂರಿನಲ್ಲಿ ಹಿಂದೂಪರ-ಬಿಜೆಪಿ ಕಾರ್ಯಕರ್ತರ ಮಧ್ಯೆ ತಳ್ಳಾಟ!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ನಲ್ಲಿ ನಾಯಕತ್ವದ ಕೊರತೆ ಇದೆ ಎಂದಿರುವ ಅಭಯಚಂದ್ರ ಜೈನ್, ವೀರಪ್ಪ ಮೊಯ್ಲಿ, ಆಸ್ಕರ್ ಫೆರ್ನಾಂಡಿಸ್, ಜನಾರ್ಧನ ಪೂಜಾರಿಯವರಂತಹ ನಾಯಕ ನಮಗೆ ಬೇಕು. ಈ ಜಿಲ್ಲೆಗೆ ಬಲಿಷ್ಠ ನಾಯಕ ಬೇಕು. ಇದನ್ನು ಹೈಕಮಾಂಡ್ ಮತ್ತು ಕಾಂಗ್ರೆಸ್ ಪ್ರಮುಖರು ಅರಿಯಬೇಕು ಎಂದು ಹೇಳಿದರು.
ಬಿಕೆ ಹರಿಪ್ರಸಾದ್ ಅವರನ್ನು ಗೃಹ ಸಚಿವರನ್ನಾಗಿ ಮಾಡಬೇಕು ಎಂದ ಅಭಯಚಂದ್ರ ಜೈನ್, ಇಲ್ಲದಿದದ್ರೆ ದ.ಕ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿಯೂ ಮಾಡಬೇಕು. ಹರಿಪ್ರಸಾದ್ ಶಕ್ತಿವಂತ, ಆಡಳಿತದಲ್ಲಿ ತಿಳುವಳಿಕೆಯುಳ್ಳ ವ್ಯಕ್ತಿಯಾಗಿದ್ದಾರೆ. ಹರಿಪ್ರಸಾದ್ ಉಸ್ತುವಾರಿ ಮಂತ್ರಿ ಆದರೆ ಜಿಲ್ಲೆಯ ಅಭಿವೃದ್ಧಿಯಾಗುತ್ತದೆ. ಅವರು ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರದ ಜನರನ್ನು ಸಮಾನವಾಗಿ ಕಾಣುತ್ತಾರೆ. ಹರಿಪ್ರಸಾದ್ ಅವರು ಗಡುಸಾಗಿ ಆಡಳಿತ ನಡೆಸುವ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: Karnataka Politics: ಸಿದ್ದರಾಮಯ್ಯ-ಡಿಕೆಶಿ ಪ್ರಮಾಣವಚನಕ್ಕೆ 8 ರಾಜ್ಯದ ಸಿಎಂ, ಘಟಾನುಘಟಿ ನಾಯಕರಿಗೆ ಆಹ್ವಾನ!
ಬಿಕೆ ಹರಿಪ್ರಸಾದ್ ಅವರು ಛಲದಂಕ ಮಲ್ಲ, 1978 ರಿಂದ ರಾಜಕೀಯದಲ್ಲಿ ಸಕ್ರೀಯವಾಗಿದ್ದಾರೆ ಎಂದ ಅಭಯಚಂದ್ರ ಜೈನ್, ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಕೊಟ್ಟರೆ ಜನ ಸಾಮರಸ್ಯದ ಜೀವನ ಮಾಡಬಹುದು. ಜಿಲ್ಲೆಗೆ ಶಕ್ತಿ ತುಂಬುವ ಕೆಲಸವನ್ನು ಬಿಕೆ ಹರಿಪ್ರಸಾದ್ ಮಾಡಲಿದ್ದಾರೆ. ಯುಟಿ ಖಾದರ್ ಗೂ ಒಳ್ಳೆಯ ಮಂತ್ರಿ ಸ್ಥಾನ ಸಿಗಬೇಕು. ಬಿಕೆ ಹರಿಪ್ರಸಾದ್ ಗೆ ಉಸ್ತುವಾರಿ ಸ್ಥಾನ ಮತ್ತು ಯುಟಿ ಖಾದರ್ ಗೆ ಮಂತ್ರಿ ಸ್ಥಾನ ಕೊಡಬೇಕು ಎಂದು ಒತ್ತಾಯಿಸಿದರು.
ಇನ್ನು ಕಾಂಗ್ರೆಸ್ ನ ಐದು ಗ್ಯಾರಂಟಿ ಜಿಲ್ಲೆಯಲ್ಲಿ ಯಶಸ್ವಿಯಾಗಿಲ್ಲ ಎಂದ ಅಭಯಚಂದ್ರ ಜೈನ್, ಆದರೆ ಈ ಜಿಲ್ಲೆಗೂ ಆ ಯೋಜನೆಯನ್ನು ಜಾರಿ ಮಾಡಬೇಕು. ಯುಟಿ ಖಾದರ್ ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದಾರೆ. ಯುಟಿ ಖಾದರ್ ರಲ್ಲಿ ಡ್ಯಾಶಿಂಗ್ ನೇಚರ್ ಇಲ್ಲ. ಖಾದರ್ ಮೇಲೆ ಕೋಮು ಭಾವನೆ ತೋರಿಸಿ ಅವರನ್ನು ಸ್ತಬ್ಧ ಮಾಡುತ್ತಾರೆ. ಹೀಗಾಗಿ ಬಿಕೆ ಹರಿಪ್ರಸಾದ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕು ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ