ಮಂಗಳೂರು: ಪುತ್ತೂರಿನಲ್ಲಿ (Puttur) ಹಿಂದೂ ಸಂಘಟನೆಯ ಕಾರ್ಯಕರ್ತರ (Pro-Hindu Activists) ಮೇಲಿನ ಹಲ್ಲೆ ಪ್ರಕರಣಕ್ಕೆ ನೇರ ಕಾರಣ ಕಲ್ಲಡ್ಕ ಪ್ರಭಾಕರ್ ಭಟ್ (Kalkad Prabhakar Bhat) ಮತ್ತು ನಳಿನ್ ಕುಮಾರ್ ಕಟೀಲ್ (Nalin Kumar Kateel ). ಆದರೆ ಕಲ್ಲಡ್ಕ ಭಟ್ ಅವರು ಘಟನೆಗೆ ಕಾಂಗ್ರೆಸ್ (Congress) ಕಾರಣ ಅಂತಾ ಹೇಳುತ್ತಾರೆ. ಸಿದ್ದರಾಮಯ್ಯ (Siddaramaiah) ಅವರು ನಾಳೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಬೇಕಿದೆ. ಆದರೆ ಕಟೀಲ್ ಲೋಕಸಭಾ ಸದಸ್ಯನಾಗಿ ಕಾರ್ಯಕರ್ತರಿಗೆ ಸಾಯುವ ಹಾಗೆ ಹೊಡೆಸುತ್ತಾರೆ ಅಂದರೆ ಅವರಿಗೆ ಮಾನವೀಯತೆ ಇದ್ಯಾ ಎಂದು ಪ್ರಶ್ನಿಸಿ ಮಾಜಿ ಸಚಿವ ಅಭಯಚಂದ್ರ ಜೈನ್ (Abhayachandra Jain) ಆಕ್ರೋಶ ಹೊರ ಹಾಕಿದ್ದಾರೆ.
ಆಸ್ಪತ್ರೆಯಲ್ಲೇ ಹೈಡ್ರಾಮಾ!
ಬಿಜೆಪಿ ಮುಖಂಡರ ಅವಹೇಳನಕಾರಿ ಬ್ಯಾನರ್ ಅಳವಡಿಕೆ ಪ್ರಕರಣದಲ್ಲಿ ಆರೋಪಿಗಳ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದರು ಎಂಬ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತರನ್ನು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ಮಾಡಿದ್ದರು. ಈ ವೇಳೆ ಯತ್ನಾಳ್ ಭೇಟಿ ನೀಡಿದ ಸಂದರ್ಭದಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಹೈಡ್ರಾಮಾ ನಡೆಯಿತು. ಬಿಜೆಪಿ ಕಾರ್ಯಕರ್ತರನ್ನು ಪಕ್ಷೇತರ ಅಭ್ಯರ್ಥಿ ಪುತ್ತಿಲ ಪರ ಹಿಂದೂ ಕಾರ್ಯಕರ್ತರು ತಳ್ಳಿ ಯತ್ನಾಳ್ ಅವರಿಗೆ ಮಾತ್ರ ಒಳಗೆ ಬರಲು ಅವಕಾಶ ನೀಡಿದರು.
ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಘಟನೆಯ ವಾಸ್ತವಿಕ ತನಿಖೆಯಾಗಬೇಕು. ಊಹಾಪೋಹಗಳನ್ನು ಮಾಡಿ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಪೊಲೀಸರು ಕಾನೂನು ಪ್ರಕಾರ ಕೆಲಸ ಮಾಡಲಿ, ಯಾರೋ ಒತ್ತಡ ಹಾಕಿದರೆಂದು ಈ ರೀತಿ ಕೆಲಸ ಮಾಡಬಾರದು. ನಾಳೆ ಕಾಂಗ್ರೆಸ್ ನವರು ಕೊಲೆ ಮಾಡಿ ಎಂದರೆ ಪೊಲೀಸರು ಕೊಲೆ ಮಾಡುತ್ತಾರೆಯೇ? ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಕೆಲವು ಪೊಲೀಸ್ ಅಧಿಕಾರಿಗಳು ಈ ರೀತಿ ನಡೆದುಕೊಳ್ಳಲು ಆರಂಭಿಸಿದ್ದಾರೆ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ