ಚಾಮರಾಜನಗರ: ಇಡ್ಲಿ ಕೊಡಿಸುವ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರ

ಅಸ್ವಸ್ಥಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.  ಪೈಶಾಚಿಕ ಕೃತ್ಯ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಮಗುವನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. 

news18-kannada
Updated:December 2, 2019, 9:18 PM IST
ಚಾಮರಾಜನಗರ: ಇಡ್ಲಿ ಕೊಡಿಸುವ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರ
ಪ್ರಾತಿನಿಧಿಕ ಚಿತ್ರ
  • Share this:
ಚಾಮರಾಜನಗರ(ಡಿ.02): ಕಾಮುಕನೊಬ್ಬ 5 ವರ್ಷದ ಹೆಣ್ಣು ಮಗುವಿಗೆ ಇಡ್ಲಿ ಕೊಡಿಸುವ ಆಸೆ ತೋರಿಸಿ ಅತ್ಯಾಚಾರ ಎಸಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.   

ಆರೋಪಿಯನ್ನು ಬಸವರಾಜು(35) ಎಂದು ಗುರುತಿಸಲಾಗಿದೆ. ಆಟವಾಡುತ್ತಿದ್ದ ಬಾಲಕಿಯನ್ನು ಕರೆದು ಇಡ್ಲಿ ಕೊಡಿಸುವುದಾಗಿ ಆಸೆ ತೋರಿಸಿದ್ದಾನೆ. ಬಳಿಕ ಮಗುವನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ಧಾನೆ ಎಂದು ಪೊಲೀಸರು ತಿಳಿಸಿದ್ದಾರೆ.

4 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ವಿಕೃತ ಕಾಮಿಗೆ ಥಳಿಸಿ, ಊರ ಬೀದಿಯಲ್ಲಿ ಬೆತ್ತಲೆ ಮೆರವಣಿಗೆ

ಅಸ್ವಸ್ಥಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.  ಪೈಶಾಚಿಕ ಕೃತ್ಯ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಮಗುವನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಗ್ರಾಮಕ್ಕೆ ಕೊಳ್ಳೇಗಾಲ ಡಿವೈಎಸ್ಪಿ ನವೀನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ನನ್ನ ಮಗ ಅತ್ಯಾಚಾರಿ ಆತನನ್ನು ಗುಂಡಿಟ್ಟು ಕೊಲ್ಲಿ; ತೆಲಂಗಾಣ ಪಶುವೈದ್ಯೆಯ ಕೊಲೆ ಆರೋಪಿ ತಾಯಿಯ ಆಕ್ರೋಶ

First published: December 2, 2019, 9:17 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading