ಮೈಸೂರು(ಜ.29) : ಮ್ಯಾನ್ ವರ್ಸಸ್ ವೈಲ್ಡ್ ಸಾಕ್ಷ್ಯ ಚಿತ್ರದಲ್ಲಿ ಪಾಲ್ಗೊಳ್ಳಲು ಖ್ಯಾತ ಬಾಲಿವುಡ್ ನಟ ಅಕ್ಷಯ್ ಕುಮಾರ್ ಬಂಡೀಪುರಕ್ಕೆ ಆಗಮಿಸಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ವಿಮಾನದಲ್ಲಿ ಬಂದ ನಟ ಅಕ್ಷಯ್ ಕುಮಾರ್ ಮೈಸೂರಿನಿಂದ ರಸ್ತೆ ಮಾರ್ಗವಾಗಿ ಚಾಮರಾಜನಗರ ಜಿಲ್ಲೆಯ ಬಂಡೀಪುರಕ್ಕೆ ಆಗಮಿಸಿ ಇಲ್ಲಿನ ಸೆರಾಯ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಚಾಮರಾಜಗರ ಜಿಲ್ಲೆ ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಖ್ಯಾತ ವನ್ಯ ಸಾಹಸಿ ಬೇರ್ ಗ್ರಿಲ್ಸ್ ನಿರ್ದೇಶನದಲ್ಲಿ 'ಮ್ಯಾನ್ ವರ್ಸಸ್ ವೈಲ್ಡ್' ಕುರಿತ ಸಾಕ್ಷ್ಯಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ ಸೂಪರ್ ಸ್ಟಾರ್ ರಜನೀಕಾಂತ್ ಅವರು ಬೇರ್ ಗ್ರಿಲ್ಸ್ ಅವರೊಂದಿಗೆ ಬಂಡೀಪುರದ ಚಮ್ಮನಹಳ್ಳ ಪ್ರದೇಶದಲ್ಲಿ ಚಿತ್ರೀಕರಣ ಮುಗಿಸಿ ಚೆನೈಗೆ ವಾಪಸ್ ತೆರಳಿದ್ದಾರೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಸಹ ಬಂಡೀಪುರದಲ್ಲಿ ನಾಳೆ ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಬೇರ್ ಗ್ರಿಲ್ಸ್ ಅವರೊಂದಿಗೆ ಚಿತ್ರೀಕರಣದಲ್ಲಿ ಪಾಲ್ಗೊಳ್ಖಲಿದ್ದಾರೆ.
ಬೇರ್ ಗ್ರಿಲ್ಸ್ ಅವರು ಜಿಮ್ ಕಾರ್ಬೆಟ್ ದಟ್ಟಾರಣ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸುತ್ತಾಡಿ ಅರಣ್ಯ ಹಾಗೂ ವನ್ಯಜೀವಿಗಳನ್ನು ಕುರಿತು ಸಂವಾದ ನಡೆಸಿದ್ದರು. ಅದೇ ರೀತಿ ಬಂಡೀಪುರ ಹುಲಿರಕ್ಷಿತಾರಣ್ಯದಲ್ಲಿ ಅವರು ರಜನೀಕಾಂತ್ ಹಾಗು ಅಕ್ಷಯ್ ಕುಮಾರ್ ಅವರೊಂದಿಗೆ ವನ್ಯಜೀವಿ ಹಾಗು ಅರಣ್ಯ ಸಂರಕ್ಷಣೆ ಕುರಿತು ಸಾಕ್ಷ್ಯಚಿತ್ರ ನಿರ್ದೇಶನ ಮಾಡುತ್ತಿರುವುದು ಕುತೂಹಲ ಮೂಡಿಸಿದೆ.
ಇದನ್ನೂ ಓದಿ : ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ರಜನಿ, ಅಕ್ಷಯ್; ಸಾಕ್ಷ್ಯಚಿತ್ರ ಚಿತ್ರೀಕರಣಕ್ಕೆ ತೀವ್ರ ಆಕ್ರೋಶ
ಬೆನಿಜಾಯ್ ಏಷ್ಯಾ ಗ್ರೂಪ್ ನ ಸೆವೆನ್ ಟಾರಸ್ ಸ್ಟುಡಿಯೋ ಪ್ರೈವೇಟ್ ಲಿಮಿಟೆಡ್ ಈ ಸಾಕ್ಷ್ಯ ಚಿತ್ರ ತಯಾರಿಸುತ್ತಿದ್ದು, ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಚಿತ್ರೀಕರಣಕ್ಕೆ ಅರಣ್ಯ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ.ಶಬ್ದಮಾಲಿನ್ಯ,ವಾಯು ಮಾಲಿನ್ಯವಾಗದಂತೆ ಷರತ್ತು ವಿಧಿಸಲಾಗಿದ್ದು, ಜವಾಬ್ದಾರಿಯುತ ಅರಣ್ಯಾಧಿಕಾರಿಗಳ ಸಮಕ್ಷಮ ಚಿತ್ರೀಕರಣ ನಡೆಸಬೇಕು ವನ್ಯಜೀವಿಗಳಿಗೆ ಹಾಗೂ ಅರಣ್ಯ ಸಂಪತ್ತಿಗೆ ಯಾವುದೇ ರೀತಿಯ ದಕ್ಕೆಯಾಗದಂತೆ ಚಿತ್ರೀಕರಣ ಮಾಡಬೇಕು ಎಂದು ಷರತ್ತು ವಿಧಿಸಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ