• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka Oath Taking Ceremony: ಸಿದ್ದರಾಮಯ್ಯ, ಜಾರಕಿಹೊಳಿ ಪ್ರಮಾಣ ವಚನ ಟೀಕಿಸಿದ ನಟ; ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ

Karnataka Oath Taking Ceremony: ಸಿದ್ದರಾಮಯ್ಯ, ಜಾರಕಿಹೊಳಿ ಪ್ರಮಾಣ ವಚನ ಟೀಕಿಸಿದ ನಟ; ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ

ಸಿದ್ದರಾಮಯ್ಯ ಮತ್ತು ಸತೀಶ್ ಜಾರಕಿಹೊಳಿ ಪ್ರಮಾಣ ವಚನ

ಸಿದ್ದರಾಮಯ್ಯ ಮತ್ತು ಸತೀಶ್ ಜಾರಕಿಹೊಳಿ ಪ್ರಮಾಣ ವಚನ

Actor Chetan Kumar: ಸಿದ್ದರಾಮಯ್ಯ ಮತ್ತು ಸಚಿವ ಸತೀಶ್ ಜಾರಕಿಹೊಳಿ ಅವರ ಪ್ರಮಾಣ ವಚನ ತೆಗೆದುಕೊಂಡಿದ್ದನ್ನು ಟೀಕಿಸಿ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಸದ್ಯ ಚೇತನ್ ಟೀಕೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.

  • Share this:

ಬೆಂಗಳೂರು: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯಮ (CM Siddaramaiah) ಶನಿವಾರ ಕಂಠೀರವ ಸ್ಟೇಡಿಯಂನಲ್ಲಿ (Kantheerava Stadium) ಪ್ರಮಾಣ ವಚನ ಸ್ವೀಕರಿಸಿದರು. ಸಿದ್ದರಾಮಯ್ಯ ಅವರ ಜೊತೆಯಲ್ಲಿ ಡಿಸಿಎಂ ಆಗಿ ಡಿಕೆ ಶಿವಕುಮಾರ್ (DK Shivakumar, DCM) ಹಾಗೂ ಎಂಟು ಜನರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಟ ಚೇತನ್ (Actor Chetan Kumar) ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್ ಜಾರಕಿಹೊಳಿ (Minister Satish Jarkiholi) ಅವರ ಪ್ರಮಾಣ ವಚನ ತೆಗೆದುಕೊಂಡಿದ್ದನ್ನು ಟೀಕಿಸಿ ಸೋಶಿಯಲ್ ಮೀಡಿಯಾದಲ್ಲಿ (Social Media) ಬರೆದುಕೊಂಡಿದ್ದಾರೆ. ಸದ್ಯ ಚೇತನ್ ಟೀಕೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.


ಸಿದ್ದರಾಮಯ್ಯ ಪ್ರಮಾಣ ವಚನಕ್ಕೆ ಚೇತನ್ ಹೇಳಿದ್ದೇನು?


‘ವಿಚಾರವಾದಿ’ ಎಂದು ಕರೆಸಿಕೊಳ್ಳುವ ಸಿದ್ದರಾಮಯ್ಯ ಅವರು ಕರ್ನಾಟಕದ ಸಿಎಂ ಆಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರಾ? ಯಾವ/ಯಾರು ದೇವರು? ದೇವರು ಎಲ್ಲಿದ್ದಾನೆ/ಳೆ/ರೆ? ಇದು ನಿರ್ದಿಷ್ಟವಾದ ಸೈದ್ಧಾಂತಿಕ ಆರಂಭವಲ್ಲ ಎಂದು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ.


ಚೇತನ್ ಕುಮಾರ್, ನಟ


ಸತೀಶ್ ಜಾರಕಿಹೊಳಿ ಬಗ್ಗೆ ಹೇಳಿದ್ದೇನು?


ಶಾಸಕ ಸತೀಶ ಜಾರಕಿಹೊಳಿ ಅವರು ‘ಬುದ್ಧ-ಬಸವ-ಅಂಬೇಡ್ಕರ್’ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ಪಕ್ಷವು ತನ್ನ ಸ್ವ-ಲಾಭದಾಯಕ ರಾಜಕೀಯ ಅಧಿಕಾರಕ್ಕಾಗಿ ನಮ್ಮ ಸಮಾನತೆಯ ಐಕಾನ್ಗಳನ್ನು ಯಾವಾಗಲೂ ಹೈಜಾಕ್ ಮಾಡಿದೆ.
ಇದನ್ನೂ ಓದಿ: Karnataka Oath Taking Ceremony: ಸಿದ್ದು, ಡಿಕೆಶಿ ಸೇರಿದಂತೆ ಯಾರು ಯಾರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ರು? ಇಲ್ಲಿದೆ ಕುತೂಹಲಕಾರಿ ಮಾಹಿತಿ


ಎಸ್​​ಟಿ ನಾಯಕ ಸಮುದಾಯದ ಸತೀಶ್ ಜಾರಕಿಹೊಳಿ ಶೋಷಿತ ಎಸ್​​ಟಿಗಳಿಗೆ ಒಳಮೀಸಲಾತಿಯನ್ನು ಬೆಂಬಲಿಸುತ್ತಾರೆಯೇ? ಅಥವಾ ಬುದ್ಧ-ಬಸವ-ಅಂಬೇಡ್ಕರ್ ಕೇವಲ ಗಿಮಿಕ್ ಮಾತ್ರವೇ ಎಂದು ಚೇತನ್ ಪ್ರಶ್ನೆ ಮಾಡಿದ್ದಾರೆ.

First published: