ಬೆಂಗಳೂರು: ರಾಜ್ಯದಲ್ಲಿ ಉಂಟಾಗಿದ್ದ ಉರಿಗೌಡ ಮತ್ತು ನಂಜೇಗೌಡ ವಿವಾದದ (Urigowda And Nanje Gowda) ತಣ್ಣಗಾಗಿದೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ (Nirmalanandanatha Swamiji) ಎಚ್ಚರಿಕೆ ಬೆನ್ನಲ್ಲೇ ಈ ಬಗ್ಗೆ ಸಿನಿಮಾ ಮಾಡಲು ಹೊರಟಿದ್ದ ಸಚಿವ ಮುನಿರತ್ನ ಹಿಂದೆ ಸರಿದಿದ್ದಾರೆ. ಇತ್ತ ಉರಿಗೌಡ ಮತ್ತು ನಂಜೇಗೌಡರ ಪರ ಹೇಳಿಕೆ ನೀಡುತ್ತಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (CT Ravi) ಮತ್ತು ಸಚಿವ ಅಶ್ವತ್ಥ ನಾರಾಯಣ್ (Ashwath Narayan) ಸೇರಿದಂತೆ ಬಿಜೆಪಿ ನಾಯಕರು (BJP Leaders) ಸಹ ಈ ವಿಷಯವಾಗಿ ಮೌನವಾಗಿದ್ದಾರೆ. ಚಂದನವನದ ನಟ ಕಿಶೋರ್ (Kannada Actor Kishore) ಸೋಶಿಯಲ್ ಮೀಡಿಯಾ ಮೂಲಕ ಉರಿಗೌಡ ಮತ್ತು ನಂಜೇಗೌಡ ವಿವಾದದ ಕುರಿತ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇತ್ತ ಉರಿಗೌಡ ಮತ್ತು ನಂಜೇಗೌಡ ಕುರಿತ ನ್ಯೂಸ್ 18 ಲೇಖನ ಹಂಚಿಕೊಂಡಿರುವ ಕಿಶೋರ್, ಚುನಾವಣೆ ಸಮಯ ಇದಾಗಿದ್ದು, ಜನರು ಎಚ್ಚರಿಕೆಯಿಂದಿರಬೇಕು ಎಂದು ಸಲಹೆ ನೀಡಿದ್ದಾರೆ.
ನಟ ಕಿಶೋರ್ ಹೇಳಿದ್ದೇನು?
ಯಾವುದೋ ಕಾಲದ ರಾಜರ ಹೆಸರಲ್ಲಿ ಇಂದಿನ ರಾಜಕೀಯ. ಇದು ಇಂದಿನ ಪ್ರಜಾಪ್ರಭುತ್ವ. ನಂಜೇಗೌಡ ಉರಿಗೌಡರ ಸೃಷ್ಟಿ ಒಂದು ಕಲ್ಲಿಗೆ ಎರಡು ಹಕ್ಕಿ ಹೊಡೆಯೋ ಯತ್ನವೇ? ಇತ್ತ ಟಿಪ್ಪುವನ್ನು ಕೊಂದವರೆಂದು ಹೇಳಿ ಮುಸ್ಲಿಮರನ್ನೂ ಒಕ್ಕಲಿಗರನ್ನೂ ಒಬ್ಬರ ಮೇಲೊಬ್ಬರನ್ನು ಎತ್ತಿಕಟ್ಟುತ್ತಲೇ ಒಕ್ಕಲಿಗರು ಬ್ರಿಟೀಷರ ಪರವಾಗಿದ್ದರೆಂದು ಹೇಳಿ ಮುಂದೊಂದು ದಿನ ಒಕ್ಕಲಿಗರಿಗೂ ದೇಶದ್ರೋಹಿ ಪಟ್ಟಕಟ್ಟುವ ಹುನ್ನಾರವೇ ಎಂದು ಕಿಶೋರ್ ಪ್ರಶ್ನೆ ಮಾಡಿದ್ದಾರೆ.
View this post on Instagram
ಇದನ್ನೂ ಓದಿ: Chethan Arrest: ಉರಿಗೌಡ ನಂಜೇಗೌಡ ಬಗ್ಗೆ ಟ್ವೀಟ್! ಬೆಂಗಳೂರು ಪೊಲೀಸರಿಂದ ನಟ ಚೇತನ್ ಬಂಧನ
ಚುನಾವಣೆಯ ಕಾಲವಿದು ಎಚ್ಚರ
ಕೇವಲ ಅಧಿಕಾರದಾಸೆಯಿಂದ ಸರ್ವಜನಾಂಗದ ಶಾಂತಿಯ ತೋಟವನ್ನು ಕದಡಿ, ವಸುದೇವ ಕುಟುಂಬಕಂನ ಹೆಮ್ಮೆಯ ಕುಟುಂಬವನ್ನು ಮುರಿಯಲು ಬರುತ್ತಿದ್ದಾರೆ ಮಾಡಿದ ಕೆಲಸದ ಮೇಲೆ ಮತ ಯಾಚಿಸಲು ಯೋಗ್ಯತೆಯಿಲ್ಲದ ಧರ್ಮಾಂಧ ಮನೆಹಾಳರು. ಚುನಾವಣೆಯ ಕಾಲವಿದು ಎಚ್ಚರ ಎಂದು ಜನತೆಗೆ ಕಿವಿಮಾತು ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ