Puneeth RajKumar Name: ಅಕಾಲಿಕ ಮರಣ ತಡೆಯುವ ದೀರ್ಘಾಯುಷ್ಯ ಕೇಂದ್ರಕ್ಕೆ ನಟ ಪುನೀತ್ ಹೆಸರು

ದೀರ್ಘಾಯುಷ್ಯ ಸಂಶೋಧನಾ ಕೇಂದ್ರಕ್ಕೆ ಇತ್ತೀಚೆಗೆ ನಮ್ಮನ್ನು ಅಗಲಿದ ನಟ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡಲಾಗುವುದು ಎಂದು ಐಟಿ-ಬಿಟಿ ಸಚಿವ ಡಾ.ಸಿ ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ.

ಪುನೀತ್ ರಾಜ್​ಕುಮಾರ್

ಪುನೀತ್ ರಾಜ್​ಕುಮಾರ್

 • Share this:
  ಬೆಂಗಳೂರು, ಮೇ 12: ರಾಜ್ಯ ಸರ್ಕಾರ ಮಹತ್ವದ ಕಾರ್ಯಕ್ಕೆ ಮುಂದಾಗಿದೆ. ಅಕಾಲಿಕ ಮರಣವನ್ನು (Premature death) ತಡೆಯಲು ದೀರ್ಘಾಯುಷ್ಯ ಮತ್ತು ಸಾಂಕ್ರಾಮಿಕ ರೋಗಗಳಿಗೆ ಲಸಿಕೆ ಹಾಗೂ ಔಷಧಿ ಕಂಡುಹಿಡಿಯುವ ಸದುದ್ದೇಶದಿಂದ ಸದ್ಯದಲ್ಲೇ ಎಲೆಕ್ಟ್ರಾನಿಕ್ ಸಿಟಿಯಲ್ಲಿ  'ದೀರ್ಘಾಯುಷ್ಯ' (Longevity Center) ಮತ್ತು ಸಾಂಕ್ರಾಮಿಕ ರೋಗ ಪರಿಹಾರ ಸಂಶೋಧನಾ ಕೇಂದ್ರಗಳನ್ನು ತೆರೆಯಲಾಗುವುದು. ಈ ಪೈಕಿ ದೀರ್ಘಾಯುಷ್ಯ ಸಂಶೋಧನಾ ಕೇಂದ್ರಕ್ಕೆ ಇತ್ತೀಚೆಗೆ ನಮ್ಮನ್ನು ಅಗಲಿದ ನಟ ಪುನೀತ್ ರಾಜಕುಮಾರ್ (Puneeth RajKumar) ಅವರ ಹೆಸರನ್ನು ಇಡಲಾಗುವುದು ಎಂದು ಐಟಿ-ಬಿಟಿ ಸಚಿವ ಡಾ.ಸಿ ಎನ್. ಅಶ್ವಥ್ ನಾರಾಯಣ (Ashwath Narayan) ಹೇಳಿದ್ದಾರೆ.

  ಐಟಿ ಮತ್ತು ಬಿಟಿ ಇಲಾಖೆಯ ಪ್ರತಿಷ್ಠಿತ ಉಪಕ್ರಮವಾದ `ಬೆಂಗಳೂರು ಬಯೋ-ಇನ್ನೋವಶನ್ ಸೆಂಟರ್’ (ಬಿಬಿಸಿ)ನ ಬೆಂಬಲದ ಮೂಲಕ ವಿವಿಧ ನವೋದ್ಯಮಗಳು ಅಭಿವೃದ್ಧಿಪಡಿಸಿರುವ 6 ಜೀವವಿಜ್ಞಾನ ಸಾಧನಗಳನ್ನು ಅವರು ಎಲೆಕ್ಟ್ರಾನಿಕ್ ಸಿಟಿಯಲ್ಲಿನ ಹೆಲಿಕ್ಸ್ ಬಿಟಿ ಪಾರ್ಕ್​ನಲ್ಲಿ ಇಂದು ಉದ್ಘಾಟಿಸಿದ ಬಳಿಕ  ಡಾ. ಅಶ್ವಥ್ ನಾರಾಯಣ ಮಾತನಾಡಿದ್ದಾರೆ.

  ರಾಜ್ಯದ ಮೊಟ್ಟ ಮೊದಲ ಬಯೋ ಬ್ಯಾಂಕಿಂಗ್

  ‘ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳನ್ನು ಪತ್ತೆ ಹಚ್ಚಲು ರಕ್ತ, ಎಂಜಲು, ಮಲ, ಮೂತ್ರ, ಕಫ ಇತ್ಯಾದಿಗಳನ್ನು ಸಂಗ್ರಹಿಸಲು ಸೂಕ್ತ ವ್ಯವಸ್ಥೆ ಬೇಕಾಗಿದೆ. ಇದಕ್ಕಾಗಿ, ಬಿಬಿಸಿ ಉಪಕ್ರಮದಡಿಯಲ್ಲಿ ದೇಶದ ಮೊಟ್ಟಮೊದಲ ಬಯೋ-ಬ್ಯಾಂಕಿಂಗ್ ಮತ್ತು ಸಂಗ್ರಹ ಮಾದರಿಗಳ ಕೋಶವನ್ನು ಕೂಡ ಸ್ಥಾಪಿಸಲಾಗುವುದು. ಇದರಿಂದ ಇಡೀ ರಾಜ್ಯದಲ್ಲಿ ರೋಗನಿದಾನ ಶಾಸ್ತ್ರವು ಮತ್ತಷ್ಟು ವೈಜ್ಞಾನಿಕವಾಗಿ ನಡೆಯಲಿದೆ. ಈ ಮೂರು ಕೇಂದ್ರಗಳನ್ನು ಎಲೆಕ್ಟ್ರಾನಿಕ್ ಸಿಟಿಯ ಬಿಬಿಸಿಯಲ್ಲಿಯೇ ಸ್ಥಾಪಿಸಲಾಗುವುದು’ ಎಂದು  ಇದೇ ಸಂದರ್ಭದಲ್ಲಿ ಸಚಿವ ಡಾ. ಅಶ್ವಥ್ ನಾರಾಯಣ ವಿವರಿಸಿದ್ದಾರೆ.
  ಆರೋಗ್ಯ ಕ್ಷೇತ್ರದಲ್ಲಿ ಆವಿಷ್ಕಾರದ ತುರ್ತಿದೆ. ಇಂದು ಬಿಡುಗಡೆಯಾಗಿರುವ ಸಾಧನಗಳಿಂದ ಡಿಎನ್ಎ ಹಾಗೂ ಆರ್.ಎನ್.ಎ ಪರೀಕ್ಷೆಗಳು, ಕೋವಿಡ್ ಸ್ವಯಂ ಪರೀಕ್ಷೆ, ಆರಂಭಿಕ ಹಂತದಲ್ಲೇ ಕ್ಯಾನ್ಸರ್ ಪತ್ತೆ, ವರ್ಚುಯಲ್ ರಿಯಾಲಿಟಿ ವಿಧಾನದಲ್ಲಿ ಕಣ್ಣಿನ ಪರೀಕ್ಷೆ, ಶ್ವಾಸಕೋಶ ಮತ್ತು ಹೃದಯದ ಮೇಲಿನ ಒತ್ತಡಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಪತ್ತೆ ಹಚ್ಚಬಹುದು ಎಂದು ಸಚಿವ ಡಾ. ಅಶ್ವಥ್ ನಾರಾಯಣ ಮಾಹಿತಿ ನೀಡಿದ್ದಾರೆ.

  ಇದನ್ನು ಓದಿ: ನನ್ನನ್ನೇ ಟಾರ್ಗೆಟ್ ಮಾಡ್ತಿದ್ದಾರೆ! 4ನೇ ಸಲ ರಾಜೀನಾಮೆ ನೀಡಿದ ಹಿರಿಯ ಐಪಿಎಸ್ ಅಧಿಕಾರಿ

  ಕೋವಿಡ್ ನಿರ್ವಹಣೆಗೆ 22 ಉತ್ಪನ್ನಗಳ ಆವಿಷ್ಕಾರ

  ಬಿಬಿಸಿ ಉಪಕ್ರಮದ ಮೂಲಕ ಇದುವರೆಗೂ 150ಕ್ಕೂ ಹೆಚ್ಚು ನವೋದ್ಯಮಗಳು ಮತ್ತು ವೈಯಕ್ತಿಕ ಉದ್ಯಮಿಗಳಿಗೆ ಸರಕಾರದ ನಾನಾ ಯೋಜನೆಗಳ ಮೂಲಕ ರಚನಾತ್ಮಕ ಬೆಂಬಲ ನೀಡಲಾಗಿದೆ. ಸದ್ಯಕ್ಕೆ 50 ನವೋದ್ಯಮಗಳಿಗೆ ಇದರ ಮುಖಾಂತರ ಪರಿಪೋಷಣೆಯನ್ನು ಒದಗಿಸಲಾಗುತ್ತಿದೆ. ಅಲ್ಲದೆ, ಕೋವಿಡ್ ಸಾಂಕ್ರಾಮಿಕದ ಪರಿಣಾಮಕಾರಿ ನಿರ್ವಹಣೆಗೆ ನೆರವು ನೀಡುವಂತಹ 22 ಉತ್ಪನ್ನಗಳನ್ನು ಕೇವಲ ಎರಡು ವರ್ಷಗಳಲ್ಲಿ ಸಾರ್ವಜನಿಕ ಉಪಯೋಗಕ್ಕೆ ಬಿಡುಗಡೆ ಮಾಡಲಾಗಿದೆ.
  ಬಿಬಿಸಿ ಪರಿಪೋಷಣೆ ಪಡೆದಿರುವ ಕಂಪನಿಗಳ ಮೌಲ್ಯವು 800 ಕೋಟಿ ರೂ.ಗಳಿಗಿಂತ ಹೆಚ್ಚಾಗಿದೆ. ಇದರ ಜೊತೆಗೆ, 1,000ಕ್ಕೂ ಹೆಚ್ಚು ಉದ್ಯೋಗಗಳು ಕೂಡ ಇಲ್ಲಿ ಸೃಷ್ಟಿಯಾಗಿವೆ. ಜೀವವಿಜ್ಞಾನಗಳ ಅಡಿ ಬರುವ ಆರೋಗ್ಯ ರಕ್ಷಣೆ, ಬಯೋಫಾರ್ಮಾ, ಕೃಷಿ, ಆಹಾರ ಮತ್ತು ಪೌಷ್ಟಿಕತೆ, ಔದ್ಯಮಿಕ ಮತ್ತು ಪರಿಸರ ಜೈವಿಕ ತಂತ್ರಜ್ಞಾನ ಮತ್ತು ಮೆಡ್-ಟೆಕ್ ಕ್ಷೇತ್ರಗಳಲ್ಲಿ ತೊಡಗಿಕೊಂಡಿರುವ ಉದ್ಯಮಿಗಳ ಅಗತ್ಯಗಳನ್ನು ಗಮನಿಸಿ, ಅವುಗಳನ್ನು ಸುಗಮವಾಗಿ ಪೂರೈಸಲು ಈ ಕೇಂದ್ರದ ಮೂಲಕ ಮಹತ್ತ್ವದ ನೆರವು ನೀಡಲಾಗುತ್ತಿದೆ.

  ಇದನ್ನೂ ಓದಿ: Dr. P Ravindranath ರಾಜೀನಾಮೆ ಅಂಗೀಕರಿಸದಂತೆ ಸಿಎಸ್​​ಗೆ ಎಂ.ಪಿ.‌ ಕುಮಾರಸ್ವಾಮಿ ನಿಯೋಗ ಮನವಿ

  ಹೊಸ ಉತ್ಪನ್ನಗಳ ವಿವರ

  ಕಾರ್ಯಕ್ರಮದಲ್ಲಿ ನವೋದ್ಯಮಗಳಾದ ಓಮಿಕ್ಸ್ ಲ್ಯಾಬ್ಸ್, ನಿಯೋಡಿಎಕ್ಸ್, ಡಿಪಾನ್ಇಡಿ ಬಯೋಇಂಟೆಲಿಜೆನ್ಸ್, ಆಲ್ಫಾಲಿಯಸ್ ಮತ್ತು ಟ್ಯಾಂಟ್ರೋಟೊಲನ್ ಅಭಿವೃದ್ಧಿ ಪಡಿಸಿರುವ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಯಿತು. ಇವುಗಳಲ್ಲಿ ಡಿಎನ್ಎ/ಆರೆ.ಎನ್.ಎ ಮಾದರಿ ಸಂಗ್ರಹಿಸುವ ಸ್ವಯಂಚಾಲಿತ ಸಾಧನ, ಲ್ಯಾಂಪ್ ಮಾಸ್ಟರ್ ಮಿಕ್ಸ್, ನಿಯೋಚೆಕ್ ರ್ಯಾಪಿರ್ ಆ್ಯಂಟಿಜೆನ್ ಸ್ವಯಂಪರೀಕ್ಷಾ ಕಿಟ್, ಪಿಸಿಆರ್ ಪತ್ತೆ ಕಿಟ್, ಸಿಟಿಸಿ ಸೆಪರೇಷನ್ ಟ್ಯೂಬ್ ಮತ್ತು ಇಂಟೆಲಿಜೆಂಟ್ ವಿಷನ್ ಅನಲೈಸರ್ (ಐವಿಎ) ಇವೆ. ಇವುಗಳ ಪೈಕಿ ಕೆಲವು ಸಾಧನಗಳಿವೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಮಾನ್ಯತೆ ಕೂಡ ಸಿಕ್ಕಿದೆ.

  ವರದಿ : ಅನಿಲ್​ ಬಾಸೂರು
  Published by:Pavana HS
  First published: