Rani Channamma University: ಗೌರವ ಡಾಕ್ಟರೇಟ್ ಸ್ವೀಕರಿಸಿ ತಂದೆ ನೆನೆದು ನಟ ರಮೇಶ್ ಅರವಿಂದ್​ ಭಾವುಕ

ಹೆಸರಾಂತ ಚಿತ್ರನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ನೀಡಲಾಯಿತು. ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆ ಪರಿಗಣಿಸಿ ವಿವಿ ಗೌರವ ಡಾಕ್ಟರೇಟ್‌ ನೀಡಿತು. ಸಮಾಜ ಸೇವೆ ಕ್ಷೇತ್ರದಲ್ಲಿ ವಿ.ರವಿಚಂದರ್, ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗೈದ ಮಾತೆ ಅಕ್ಕ ಅನ್ನಪೂರ್ಣ ‌ತಾಯಿಗೆ ಗೌರವ ಡಾಕ್ಟರೇಟ್ ನೀಡಲಾಯಿತು.

ನಟ ರಮೇಶ್​ ಅರವಿಂದ್​

ನಟ ರಮೇಶ್​ ಅರವಿಂದ್​

  • Share this:
ಬೆಳಗಾವಿ (ಸೆ.13): ಬೆಳಗಾವಿಯ ರಾಣಿ ಚನ್ನಮ್ಮ ‌ವಿವಿಯಲ್ಲಿ (Belagavi Rani Channamma vv) 10ನೇ ಘಟಿಕೋತ್ಸವ ಕಾರ್ಯಕ್ರಮ ನಡೆಯಿತು. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ (Governor Thawarchand Gehlot) ವಹಿಸಿದ್ದರು. ಹೆಸರಾಂತ ಚಿತ್ರನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ (Honorary Doctorate) ನೀಡಲಾಯಿತು. ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆ ಪರಿಗಣಿಸಿ ವಿವಿ ಗೌರವ ಡಾಕ್ಟರೇಟ್‌ ನೀಡಿತು. ಸಮಾಜ ಸೇವೆ ಕ್ಷೇತ್ರದಲ್ಲಿ ವಿ.ರವಿಚಂದರ್, ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗೈದ ಮಾತೆ ಅಕ್ಕ ಅನ್ನಪೂರ್ಣ ‌ತಾಯಿಗೆ ಗೌರವ ಡಾಕ್ಟರೇಟ್ ನೀಡಲಾಯಿತು.

48 ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪ್ರಧಾ‌ನ

ವಿವಿಧ ವಿಭಾಗಗಳಲ್ಲಿ 48 ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪ್ರಧಾ‌ನ ಮಾಡಲಾಯಿತು. ಸ್ನಾತಕೋತ್ತರ-ಪದವಿಯ 163 ವಿದ್ಯಾರ್ಥಿಗಳಿಗೆ ಪದಕ ವಿತರಣೆ ಮಾಡಲಾಯಿತು.  ಆಂಧ್ರದ ಕೇಂದ್ರಿಯ ಬುಡಕಟ್ಟು ವಿವಿ ಕುಲಪತಿ ಪ್ರೊ. ಟಿ.ವಿ ಕಟ್ಟಿಮನಿ ಅವರರು ಘಟಿಕೋತ್ಸವ ಭಾಷಣ ಮಾಡಿದರು.

ರಮೇಶ್​ ಅರವಿಂದ್​ಗೆ ಗೌರವ ಡಾಕ್ಟರೇಟ್​ ಪ್ರದಾನ

ಗೌರವ ಡಾಕ್ಟರೇಟ್ ಸ್ವೀಕರಿಸಿ ಮಾತನಾಡಿದ ಚಿತ್ರನಟ ರಮೇಶ್ ಅರವಿಂದ್‌,  ನನ್ನ ಈ ಸಂಭ್ರಮದ ಕ್ಷಣದಲ್ಲಿ ತಂದೆ ಇರಬೇಕಿತ್ತು.‌ ನನಗೆ ಗೌರವ ಡಾಕ್ಟರೇಟ್ ಸಿಗ್ತಿದ್ದಂತೆ ಸಂಬಂಧಿಕರಿಗೆ ವಾಟ್ಸಪ್ ಮೆಸೇಜ್ ಮಾಡಿದೆ. ಅಭಿನಂದನೆಗಳು, ತಂದೆ ಇರಬೇಕಿತ್ತು ಎಂದು ಆ ಕಡೆಯಿಂದ ಪ್ರತಿಕ್ರಿಯೆ ಬಂತು ಎಂದ್ರು. ಇದೇ ವೇಳೆ ತಂದೆ ನೆನೆದು ರಮೇಶ್ ಅರವಿಂದ್ ಭಾವುಕರಾದರು.



ಪ್ರೇಕ್ಷಕರಿಗೆ ನಾನು ಋಣಿಯಾಗಿರುವೆ

30 ವರ್ಷ ಚಿತ್ರರಂಗದಲ್ಲಿ ಸಲ್ಲಿಸಿದ ಸೇವೆಗೆ ಗೌರವ ಡಾಕ್ಟರೇಟ್ ಸಿಕ್ಕಿದೆ. ಟಿಕೆಟ್ ತೆಗೆದುಕೊಂಡು ಚಿತ್ರ ನೋಡಿದ ಪ್ರತಿ ಪ್ರೇಕ್ಷಕನಿಗೆ ನಾನು ಋಣಿ ಆಗಿರುವೆ. ಕರುನಾಡಿನ ಜನರು ನನ್ನ, ನನ್ನ ಚಿತ್ರ ನೋಡಿ ಪ್ರೋತ್ಸಾಹಿಸಿದ್ರು. ನನ್ನ ಜೊತೆಗೆ ನಟಿಸಿರುವ ಹಲವು ನಾಯಕ-ನಟಿಯರನ್ನು ನಾನು ಸ್ಮರಿಸುವೆ. ಎಲ್ಲರ ಸಹಕಾರವೇ ನನ್ನ ಈ ಸಾಧನೆಗೆ ಕಾರಣ ಎಂದರು.

ಇದನ್ನೂ ಓದಿ; Rain Disaster: ಬೆಳಗಾವಿಯಲ್ಲಿ ಮಳೆ ಅವಾಂತರ; ಒಂದೇ ವಾರದಲ್ಲಿ ‌ಮೂವರು ಬಲಿ!

ಆತ್ಮನಿರ್ಭರ ಭಾರತ ನಿರ್ಮಾಣದಲ್ಲಿ ಕೈಜೋಡಿಸಿ- ರಾಜ್ಯಪಾಲ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿ, ನವ ಪದವೀಧರ ಯುವಕ-ಯುವತಿಯರು ನವಭಾರತ, ಶ್ರೇಷ್ಠ ಹಾಗೂ ಆತ್ಮನಿರ್ಭರ ಭಾರತ ನಿರ್ಮಾಣದಲ್ಲಿ ಕೈಜೋಡಿಸಬೇಕು. ಭಾರತವನ್ನು ಸಾಧನೆ, ಸಮೃದ್ಧಿಯ ಉನ್ನತ ಶಿಖರದತ್ತ ಕೊಂಡೊಯ್ಯುವ ದಿಸೆಯಲ್ಲಿ ಕಾರ್ಯೋನ್ಮುಖರಾಗಬೇಕು. ಭಾರತದ ನವ್ಯೋದ್ಯಮವು ಜಗತ್ತಿನ ಆಕರ್ಷಕ ಕೇಂದ್ರವಾಗಿದೆ.

ಹೊಸ ಶಿಕ್ಷಣ ನೀತಿಯು‌ ನವಭಾರತ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟ ಅವರು, ನೈಸರ್ಗಿಕ ಸಂಪನ್ಮೂಲಗಳ ಬಳಸಿಕೊಂಡು ನಮ್ಮ ಕ್ರಿಯಾಶೀಲತೆಯ ಮೂಲಕ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯೋಣ. ರಾಷ್ಟ್ರೀಯ ಶಿಕ್ಷಣ ನೀತಿ-2022 ರ ಅನುಷ್ಠಾನ ದ ಜತೆಗೆ ಸಮಗ್ರ ಶಿಕ್ಷಣವನ್ನು ರಾಣಿ ಚೆನ್ನಮ್ಮ ವಿವಿ ನೀಡುತ್ತಿದೆ. ರಾಜ್ಯದ ಅತೀ ದೊಡ್ಡ ವಿವಿಗಳಲ್ಲಿ ರಾಚವಿ ಕೂಡ ಒಂದು. ಕಡಿಮೆ ಅವಧಿಯಲ್ಲಿ ಉತ್ತಮ‌ ಶೈಕ್ಷಣಿಕ ಸಾಧನೆ ತೋರಿದ ಕುಲಪತಿ ಮತ್ತು ತಂಡಕ್ಕೆ ಅಭಿನಂದನೆ ಸಲ್ಲಿಸಿದರು.

ಇದನ್ನೂ ಓದಿ: Karnataka Assembly Elections: ಮಂಗಳೂರು ವಿಧಾನಸಭಾ ಕ್ಷೇತ್ರ: ಈ ಬಾರಿಯೂ ಖಾದರ್ ವರ್ಸಸ್ ಇತರರು?

11 ಸುವರ್ಣ ಪದಕ ಪ್ರದಾನ

ವಿಶ್ವವಿದ್ಯಾಲಯದಿಂದ ಫಸ್ಟ್ ರ‍್ಯಾಂಕ್ ಪಡದುಕೊಂಡ 6 ಸ್ನಾತಕ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ವಿಷಯವಾರು ಅತೀ ಹೆಚ್ಚು ಅಂಕ ಗಳಿಸಿದ 4 ವಿದ್ಯಾರ್ಥಿನಿಯರಿಗೆ ಸೇರಿ 11 ಸುವರ್ಣ ಪದಕಗಳನ್ನು ಪ್ರದಾನ ಮಾಡಲಾಯಿತು. ಬ್ಯಾಚುಲರ್ ಆಫ್ ಕಾಮರ್ಸ್ ವಿದ್ಯಾರ್ಥಿನಿ ವಿದ್ಯಾವತಿ ಗುಡೋದಗಿ, ಬ್ಯಾಚುಲರ್ ಆಫ್ ಸೈನ್ಸ್ ವಿದ್ಯಾರ್ಥಿನಿ ದೀಪಿಕಾ ಚೌವ್ಹಾಣ, ಮಾಸ್ಟರ್ ಆಫ್ ಆರ್ಟ್ಸ್ ಇನ್ ಕನ್ನಡ ವಿದ್ಯಾರ್ಥಿನಿ ದ್ರಾಕ್ಷಾಯಿಣಿ ವಾಲ್ಮಿಕಿ, ಮಾಸ್ಟರ್ ಆಫ್ ಆರ್ಟ್ಸ್ ಇನ್ ಸೋಶಿಯಾಲಜಿ ವಿದ್ಯಾರ್ಥಿ ತಾತ್ಯಾಸಾಬ್ ಧಾಬಡೆ, ಮಾಸ್ಟರ್  ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ ವಿದ್ಯಾರ್ಥಿನಿ ಗೌರಾ ಅಣೆಪ್ಪನವರ, ಮಾಸ್ಟರ್ ಆಫ್ ಸೈನ್ಸ್ ಇನ್ ಮ್ಯಾಥೆಮ್ಯಾಟಿಕ್ಸ್ ವಿದ್ಯಾರ್ಥಿನಿ ಅನುಜಾ ಪಾಟೀಲ ಸುವರ್ಣ ಪದಕ ಪಡೆದುಕೊಂಡರು
Published by:ಪಾವನ ಎಚ್ ಎಸ್
First published: