ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election) ಬಿಜೆಪಿ (BJP) ಹೀನಾಯವಾಗಿ ಸೋತ ಹಿನ್ನೆಲೆ ಮೈಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮೆ ನೀಡಿದ್ದಾರೆ. ಮೈಸೂರು ರಂಗಾಯಣ (Mysuru Ranagayana) ನಿರ್ದೇಶಕರಾದ ಬಳಿಕ ಅಡ್ಡಂಡ ಕಾರ್ಯಪ್ಪ (Addanda C Cariappa) ಹಲವು ವಿವಾದಗಳನ್ನು ಮೈ ಮೇಲೆ ಎಳೆದುಕೊಂಡಿದ್ದರು. ಅಡ್ಡಂಡ ಕಾರ್ಯಪ್ಪ ರಚಿತ ಟಿಪ್ಪು ನಿಜ ಕನಸುಗಳು (Tipu Nija Kanasugalu) ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ಈ ವಿವಾದದ ಬೆನ್ನಲ್ಲೇ ಸಿದ್ದರಾಮಯ್ಯ ನಿಜ ಕನಸುಗಳು (Siddaramaiah Nija Kanasugalu) ಎಂಬ ಪುಸ್ತಕ ರಚನೆ ಕಾಂಗ್ರೆಸ್ಗೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು.
ರಾಜೀನಾಮೆ ನೀಡಿದ್ಯಾಕೆ?
ಇದೀಗ ಬಿಜೆಪಿ ಸೋತ ಹಿನ್ನೆಲೆ ಅಡ್ಡಂಡ ಕಾರ್ಯಪ್ಪ ಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಸಲ್ಲಿಸಿದ ಬಳಿಕ ಪ್ರತಿಕ್ರಿಯಿಸಿರುವ ಅಡ್ಡಂಡ ಕಾರ್ಯಪ್ಪ, ನನ್ನನ್ನು ನಿರ್ದೇಶಕನನ್ನಾಗಿ ನೇಮಿಸಿದ ಬಿಜೆಪಿ ಚುನಾವಣೆಯಲ್ಲಿ ಸೋತಿದೆ. ಕರ್ನಾಟಕ ಜನರು ನೀಡಿರುವ ತೀರ್ಪನ್ನು ಗೌರವದಿಂದ ಒಪ್ಪಿಕೊಳ್ಳುತ್ತೇನೆ. ಈ ಕಾರಣದಿಂದಾಗಿ ನೈತಿಕ ಹೊಣೆ ತೆಗೆದುಕೊಂಡು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಅಡ್ಡಂಡ ಕಾರ್ಯಪ್ಪ ವಿರುದ್ಧ ಕಾಂಗ್ರೆಸ್-ಜೆಡಿಎಸ್ ಆರೋಪ
ಉರಿಗೌಡ ಮತ್ತು ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳನ್ನು ರಚಿಸುವ ಮೂಲಕ ಸಮಾಜ ಸ್ವಾಸ್ಥ್ಯವನ್ನು ಹಾಳು ಮಾಡಿದ್ದಾರೆ. ಈ ಎರಡು ಪಾತ್ರಗಳ ಮೂಲಕ ಒಕ್ಕಲಿಗರನ್ನು ಅವಮಾನಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಆರೋಪಿಸಿದ್ದವು.
ಇದನ್ನೂ ಓದಿ: Tipu Sultan ಕೊಂದ ಉರಿಗೌಡ, ನಂಜೇಗೌಡ ಕಾಲ್ಪನಿಕ ಪಾತ್ರಗಳಲ್ಲ; ಮೈಸೂರು ರಂಗಾಯಣ ನಿರ್ದೇಶಕ
224 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 65, ಕಾಂಗ್ರೆಸ್ 135 ಮತ್ತು ಜೆಡಿಎಸ್ 19 ಕ್ಷೇತ್ರಗಳಲ್ಲಿ ಗೆದ್ದಿವೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ