ಬೆಂಗಳೂರು (ಜೂನ್ 13); ಕೊರೋನಾ ಬಿಕ್ಕಟ್ಟು ಹಾಗೂ ಲಾಕ್ಡೌನ್ ಸಂಕಷ್ಟದ ನಡುವೆಯೂ ಪೆಟ್ರೋಲ್ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಪರಿಣಾಮ ಜನ ಸಾಮಾನ್ಯರು ಬೆಲೆ ಏರಿಕೆಯಿಂದಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ, ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಸೇರಿದಂತೆ ಅನೇಕರು ಪೆಟ್ರೋಲ್ ಬೆಲೆ ಇಳಿಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಅಲ್ಲದೆ, ಪೆಟ್ರೋಲ್ ಅನ್ನು ಜಿಎಸ್ಟಿ ಅಡಿಯಲ್ಲಿ ತರುವ ಮೂಲಕ ಅದರ ಬೆಲೆಯನ್ನು ಕಡಿತ ಮಾಡಬಹುದು ಎಂಬ ಯೋಚನೆಯನ್ನೂ ನೀಡುತ್ತಿದ್ದಾರೆ. ಆದರೆ, ಮಾಜಿ ಸಿಎಂ ಕುಮಾರಸ್ವಾಮಿ ಇದನ್ನು ಕಟುವಾಗಿ ಕಂಡಿಸಿದ್ದಾರೆ. ಅಲ್ಲದೆ, ಪೆಟ್ರೋಲ್ ಬೆಲೆಯನ್ನು ಜಿಎಸ್ಟಿ ಅಡಿ ತಂದರೆ ರಾಜ್ಯದ ಆದಾಯಕ್ಕೆ ಕುತ್ತು ಬರುತ್ತದೆ. ಕಾಂಗ್ರೆಸ್ ಹೋರಾಟ ಮಾಡುತ್ತಿರುವುದು ಪೆಟ್ರೋಲ್ ಬೆಲೆ ಇಳಿಸಲೋ? ಅಥವಾ ಅದನ್ನು ಜಿಎಸ್ಟಿ ಅಡಿಯಲ್ಲಿ ತರುವುದಕ್ಕೋ?" ಎಂದು ಕಿಡಿಕಾರಿದ್ದಾರೆ.
ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಏರಿಸುತ್ತಿದೆ. ಇತ್ತ ಕಾಂಗ್ರೆಸ್ ದೇಶದಾದ್ಯಂತ ಹೋರಾಡುತ್ತಿದೆ. ಪೆಟ್ರೋಲ್ ಬೆಲೆ ಇಳಿಯಬೇಕಿದ್ದರೆ ಅದನ್ನು GSTಗೆ ಸೇರಿಸಬೇಕೆಂದು ಕೇಂದ್ರ ಹೇಳಿದರೆ, ಕಾಂಗ್ರೆಸ್ ಕೂಡ ಅದನ್ನೇ ಪ್ರತಿಪಾದಿಸಿದೆ., ಹಾಗಾದರೆ, ಕಾಂಗ್ರೆಸ್ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್ ಅನ್ನು GSTಗೆ ಸೇರಿಸಲೋ?
1/8
— H D Kumaraswamy (@hd_kumaraswamy) June 13, 2021
ಪೆಟ್ರೋಲ್ ಮೇಲೆ ಕೇಂದ್ರ, ರಾಜ್ಯ ಸರ್ಕಾರಗಳೆರಡು ವಿಧಿಸುತ್ತಿರುವ ಅತ್ಯಧಿಕ ತೆರಿಗೆ ಇಳಿಸುವ ಮೂಲಕ ಬೆಲೆ ಏರಿಕೆ ತಗ್ಗಿಸಬೇಕು ಎಂಬುದು JDS ಒತ್ತಾಯ. ಜತೆಗೆ ಪೆಟ್ರೋಲನ್ನು GSTಗೆ ಸೇರಿಸುವ ರಾಷ್ಟ್ರೀಯ ಪಕ್ಷಗಳ ಹುನ್ನಾರದ ವಿರುದ್ಧ ಹೋರಾಡುವುದೂ ನಮ್ಮ ನಿಲುವು. ಇದರ ಸುತ್ತಲೇ ನಾವು ಹೋರಾಟ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ.
8/8
— H D Kumaraswamy (@hd_kumaraswamy) June 13, 2021
ಪೆಟ್ರೋಲ್ ಬೆಲೆ ಏರಿಕೆ ವಿರುದ್ಧದ ಹೋರಾಟಗಳು ತೆರಿಗೆ, ಸುಂಕ ಇಳಿಕೆಯ ಉದ್ದೇಶದ್ದಾಗಿರಬೇಕೇ ವಿನಾ GSTಗೆ ಸೇರಿಸುವುದಾಗಿರಬಾರದು. ಈಗ ಕಾಂಗ್ರೆಸ್ ಪ್ರತಿಭಟಿಸುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲನ್ನು GSTಗೆ ಸೇರಿಸಲೋ ಎಂಬುದು ಸ್ಪಷ್ಟವಾಗಬೇಕು. GSTಗೆ ಸೇರಿಸುವುದೇ ಕಾಂಗ್ರೆಸ್ ಉದ್ದೇಶವಾಗಿದ್ದರೆ ಅದು ಶೋಷಣೆ ಪರವಾದ ಹೋರಾಟ.
7/8
— H D Kumaraswamy (@hd_kumaraswamy) June 13, 2021
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ