ಕೊರೋನಾ ವೈರಸ್ ಭೀತಿ; ಆದಿಚುಂಚನಗಿರಿ ಮಠಕ್ಕೆ ಮುಂದಿನ ಎರಡು ವಾರ ಭಕ್ತರ ಪ್ರವೇಶಕ್ಕಿಲ್ಲ ಅವಕಾಶ

ಕರ್ನಾಟಕದಲ್ಲಿ 14 ಜನರಿಗೆ ಸೋಂಕು ತಗುಲಿದೆ. ಹೀಗಾಗಿ, ಮಠದಲ್ಲಿ ಜನ ಸೇರುವುದರಿಂದ ಕೊರೋನಾ ವೈರಸ್​ ಹರಡುವ ಆತಂಕ ಎದರಾಗಿದೆ. ಈ ಹಿನ್ನೆಲೆಯಲ್ಲಿ ದೇವರ ದರ್ಶನ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. 

ಆದಿಚುಚಂಚನಗಿರಿ ಮಠ

ಆದಿಚುಚಂಚನಗಿರಿ ಮಠ

  • Share this:
    ತುಮಕೂರು (ಮಾ.19): ಮಾರಣಾಂತಿಕ ಕೊರೋನಾ ವೈರಸ್‌ ಹರಡುವ ಭೀತಿ ಎಲ್ಲೆಡೆ ಕಾಡುತ್ತಿದೆ. ಈಗಾಗಲೇ ಅನೇಕ ದೇವಾಲಯಗಳನ್ನು ಮುಚ್ಚಲಾಗಿದೆ. ಅದೇ ರೀತಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠವನ್ನು ಮುಂದಿನ ಎರಡು ವಾರ ಬಂದ್​ ಮಾಡಲು ನಿರ್ಧಾರಿಸಲಾಗಿದೆ.

    ಶನಿವಾರ ಮತ್ತು ಭಾನುವಾರ ಕಾಲಭೈರವನ ದರ್ಶನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇಲ್ಲಿ ಅನ್ನ ಸಂತರ್ಪಣೆ ಕೂಡ ನಡೆಯುತ್ತದೆ. ಆದರೆ, ಇತ್ತೀಚೆಗೆ ವಿಶ್ವದಾದ್ಯಂತ ಕೊರೋನಾ ವೈರಸ್ ಹಬ್ಬುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ 2 ವಾರಗಳ ಕಾಲ ಭಕ್ತರು ದೇವರ ದರ್ಶನಕ್ಕೆ ಆಗಮಿಸದಂತೆ ಆದಿಚುಂಚನಗಿರಿ ಸಂಸ್ಥಾನ ಮಠದ ಜಗದ್ಗುರು ಡಾ. ನಿರ್ಮಲಾನಂದನಾಥ ಶ್ರೀಗಳು ಭಕ್ತಾದಿಗಳಲ್ಲಿ ಕೋರಿದ್ದಾರೆ.

    ಜಗತ್ತಿನಾದ್ಯಂತ ಕೊರೋನಾ ವೈರಸ್​​ಗೆ ಇದುವರೆಗೂ 8 ಸಾವಿರಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. 2 ಲಕ್ಷಕ್ಕೂ ಅಧಿಕ ಜನರಿಗೆ ಕೊರೋನಾ ಸೋಂಕು ತಗುಲಿದೆ. ಭಾರತದಲ್ಲಿ ಈಗಾಗಲೇ ಮೂವರು ಸಾವನ್ನಪ್ಪಿದ್ದು, ಸೋಂಕಿತರ ಸಂಖ್ಯೆ 170ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ 14 ಜನರಿಗೆ ಸೋಂಕು ತಗುಲಿದೆ. ಹೀಗಾಗಿ, ಮಠದಲ್ಲಿ ಜನ ಸೇರುವುದರಿಂದ ಕೊರೋನಾ ವೈರಸ್​ ಹರಡುವ ಆತಂಕ ಎದರಾಗಿದೆ. ಈ ಹಿನ್ನೆಲೆಯಲ್ಲಿ ದೇವರ ದರ್ಶನ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
    First published: