ಅತ್ಯಾಚಾರ ಕೇಸ್ ಸಂಬಂಧ ಮುರುಘಾ ಮಠದ ಮುರುಘಾ ಶ್ರೀಗಳಿಗೆ (Murugha Shri) ಕಂಟಕ ಹೆಚ್ಚಾಗ್ತಿದೆ. ಬಂಧನಕ್ಕೆ ಒತ್ತಾಯ ಹೆಚ್ಚುತ್ತಿದೆ. ಇದರ ನಡುವೆ ಹಾಸ್ಟೇಲ್ ವಾರ್ಡನ್ (Hostel Warden) ರಶ್ಮಿ, ಎಸ್.ಕೆ ಬಸವರಾಜನ್ ವಿರುದ್ಧ ಅತ್ಯಾಚಾರ ಯತ್ನ (Rape Attempt) ಅಂತಾ ದೂರು ನೀಡಿದ್ದರು. ಈ ಕೇಸ್ನಲ್ಲಿ ಈಗ ಬಸವರಾಜ್ಗೆ ಜಾಮೀನು ದೊರೆತಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಕೆ. ಬಸವರಾಜನ್ ಮತ್ತು ಪತ್ನಿ ಸೌಭಾಗ್ಯಗೆ ನ್ಯಾಯಾಲಯ (Court) ಜಾಮೀನು (Bail) ಮಂಜೂರು ಮಾಡಿದೆ. ಮತ್ತೊಂದೆಡೆ ಮತ್ತೆ ಮೂವರು ಆರೋಪಿಗಳಿಂದಲೂ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಮುರುಘಾ ಶ್ರೀ ಜೊತೆ ಪ್ರಕರಣದ 4 ಮತ್ತು 5ನೇ ಆರೋಪಿಗಳಾದ ಪರಮಶಿವಯ್ಯ, ಗಂಗಾಧರಯ್ಯ ಮತ್ತು ಬಾಲಾಪರಾಧಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಎಸ್.ಕೆ ಬಸವರಾಜನ್ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಈ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಎಸ್.ಕೆ ಬಸವರಾಜನ್ ಮತ್ತು ಪತ್ನಿ ಸೌಭಾಗ್ಯಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಗಂಡ-ಹೆಂಡತಿ ಇಬ್ಬರಿಗೂ ಜಾಮೀನು
ಅತ್ಯಾಚಾರ ಯತ್ನ ಪ್ರಕರಣದಲ್ಲಿ ಎಸ್.ಕೆ. ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯಗೆ ಚಿತ್ರದುರ್ಗದ ಒಂದನೇ ಜೆಎಂಎಫ್ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಜಾಮೀನು ಅರ್ಜಿ ವಿಚಾರಣೆ ವೇಳೆ ಬಸವರಾಜನ್ ಮತ್ತು ಪತ್ನಿ ಸೌಭಾಗ್ಯ ಖುದ್ದು ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಎಸ್.ಕೆ ಬಸವರಾಜನ್ ಹಾಗೂ ಪತ್ನಿ ಸೌಭಾಗ್ಯ ಬಸವರಾಜನ್ ವಿರುದ್ಧ ಐಪಿಸಿ ಸೆಕ್ಷನ್ 341, 342, 504, 506ರಡಿ ಪ್ರಕರಣ ದಾಖಲಾಗಿತ್ತು. ಸದ್ಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದರಿಂದ ಪತಿ ಪತ್ನಿ ಇಬ್ಬರೂ ಬಂಧನ ಭೀತಿಯಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ಮುರುಘಾ ಶ್ರೀಗಳ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ
ಬಸವರಾಜನ್ ವಿರುದ್ಧದ ದೂರಿನಲ್ಲಿ ಏನಿದೆ?
ಮುರುಘಾ ಮಠದ ಆಡಳಿತಾಧಿಕಾರಿ ಬಸವರಾಜನ್ ಅವರು ವಿದ್ಯಾರ್ಥಿ ನಿಲಯದ ತಪಾಸಣೆ ನೆಪದಲ್ಲಿ ಮಹಿಳಾ ನಿಲಯ ಪಾಲಕರ ಜೊತೆಗೆ ಅಶ್ಲೀಲವಾಗಿ ಮಾತನಾಡುತ್ತಿದ್ದರು. ಆಗಸ್ಟ್ 27ರಂದು ಸಂಜೆ 6 ಗಂಟೆ ವೇಳೆಗೆ ಬಲತ್ಕಾರಕ್ಕೆ ಯತ್ನಿಸಿದ್ದರು ಎಂದು ಆರೋಪಿಸಿದ್ದರು.
ಎಸ್.ಕೆ.ಬಸವರಾಜನ್ಗೆ ಮಠದಿಂದ ಗೇಟ್ಪಾಸ್
ಮುರುಘಾ ಮಠದ ಆಡಳಿತಾಧಿಕಾರಿಯಾಗಿದ್ದ ಎಸ್.ಕೆ. ಬಸವರಾಜನ್ ಅವರಿಗೆ ಮಠದಿಂದ ಗೇಟ್ ಪಾಸ್ ನೀಡಲಾಗಿದೆ. ಜೊತೆಗೆ ಮುರುಘಾ ಮಠದ ಎಸ್.ಜೆ.ಎಂ. ವಿದ್ಯಾಪೀಠ ಸೇವೆಯಿಂದ ಅವರನ್ನು ಮುಕ್ತಗೊಳಿಸಲಾಗಿದೆ. ಇವರ ಬದಲಿಗೆ ಎಸ್.ಜೆ.ಎಂ. ವಿದ್ಯಾಪೀಠದದ ಕಾರ್ಯದರ್ಶಿಯನ್ನಾಗಿ ನಿವೃತ್ತ ನ್ಯಾಯಾಧೀಶ ಎಸ್.ಬಿ. ವಸ್ತ್ರದ್ಮಠ್ ಅವರನ್ನು ನೇಮಕ ಮಾಡಲಾಗಿದೆ.
ಮುರುಘಾ ಶ್ರೀ ಬಂಧಿಸದ್ದಕ್ಕೆ ರೊಚ್ಚಿಗೆದ್ದ ದಲಿತ ಸಂಘಟನೆಗಳು
ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಗುರಿಯಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆ ನಡೆಯಲಿದೆ. ಮುರುಘಾ ಶ್ರೀ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗೆ ತಕರಾರು ಸಲ್ಲಿಸಲು ಅವಕಾಶ ಕಲ್ಪಿಸಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿದರು.
ಇದನ್ನೂ ಓದಿ: ಮುರುಘಾ ಶ್ರೀಯವರನ್ನು ಬಂಧಿಸದ್ದಕ್ಕೆ ರೊಚ್ಚಿಗೆದ್ದ ದಲಿತ ಸಂಘಟನೆಗಳು, ಡಿಸಿ ಕಾರಿಗೆ ಮುತ್ತಿಗೆ
ಇನ್ನು ಅತ್ಯಾಚಾರ ಆರೋಪ ಎದುರಿಸುತ್ತಿರುವ ಮುರುಘಾ ಶರಣರ ವಿರುದ್ಧ ಪ್ರತಿಭಟನೆ ಹೆಚ್ಚಾಗಿದೆ. ಮೈಸೂರು, ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಯಿತು. ಚಿತ್ರದುರ್ಗದಲ್ಲಿ ರೊಚ್ಚಿಗೆದ್ದ ದಲಿತ ಸಂಘಟನೆಗಳು ಜಿಲ್ಲಾಧಿಕಾರಿ ಕವಿತಾ ಮನ್ನೀಕೇರಿ ಕಾರಿಗೆ ಘೇರಾವ್ ಹಾಕಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ