ಬಿಜೆಪಿಯಲ್ಲಿ ಮುಗಿಯದ ಡಿಸಿಎಂ ಹುದ್ದೆ ಹಂಚಿಕೆ ತಲೆ ಬಿಸಿ; ಇಲ್ಲದ ಸ್ಥಾನಕ್ಕೆ ಆಕಾಂಕ್ಷಿಗಳ ಸಂಖ್ಯೆ ನಾಲ್ಕು..!

ಅಸಲಿಗೆ ಬಿಜೆಪಿಯಲ್ಲಿ ಸದ್ಯಕ್ಕ ಖಾಲಿ ಇಲ್ಲದ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಬರೋಬ್ಬರಿ ನಾಲ್ಕು ಜನ ಆಕಾಂಕ್ಷಿಗಳು ಲಾಭಿ ನಡೆಸುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಹಾಗೂ ಬಿಜೆಪಿ ಹೈಕಮಾಂಡ್ ತಲೆನೋವಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ.

MAshok Kumar | news18-kannada
Updated:December 12, 2019, 11:29 AM IST
ಬಿಜೆಪಿಯಲ್ಲಿ ಮುಗಿಯದ ಡಿಸಿಎಂ ಹುದ್ದೆ ಹಂಚಿಕೆ ತಲೆ ಬಿಸಿ; ಇಲ್ಲದ ಸ್ಥಾನಕ್ಕೆ ಆಕಾಂಕ್ಷಿಗಳ ಸಂಖ್ಯೆ ನಾಲ್ಕು..!
ಸಿಎಂ ಬಿಎಸ್​ ಯಡಿಯೂರಪ್ಪ
  • Share this:
ಬೆಂಗಳೂರು (ಡಿಸೆಂಬರ್ 12); ಕಳೆದ ವಾರ ರಾಜ್ಯದ 15 ಕ್ಷೇತ್ರಗಳಿಗೆ ನಡೆಸಲಾಗಿದ್ದ ಉಪ ಚುನಾವಣೆಯಲ್ಲಿ 12 ಜನ ಅನರ್ಹ ಶಾಸಕರು ಮತ್ತೆ ಗೆಲುವು ಸಾಧಿಸುವಲ್ಲಿ ಸಫಲರಾಗಿದ್ದಾರೆ. ಈ ಪೈಕಿ 11 ಜನರಿಗೆ ಸಚಿವ ಸ್ಥಾನ ನೀಡುವುದು ಬಹುತೇಕ ಖಚಿತವಾಗಿದೆ. ಮುಂದಿನ ಸೋಮವಾರದ ಒಳಗಾಗಿ ರಾಜ್ಯ ಸಂಪುಟ ವಿಸ್ತರಣೆಯಾಗಲಿರುವುದು ಬಹುತೇಕ ಖಚಿತವಾಗಿದೆ. ಆದರೆ, ಡಿಸಿಎಂ ಸ್ಥಾನದ ಆಕಾಂಕ್ಷಿಗಳ ವಿವಾದ ಮಾತ್ರ ಬಿಜೆಪಿಯಲ್ಲಿ ಸದ್ಯಕ್ಕೆ ಬಗೆಹರಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ.

ಅಸಲಿಗೆ ಬಿಜೆಪಿಯಲ್ಲಿ ಸದ್ಯಕ್ಕ ಖಾಲಿ ಇಲ್ಲದ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಬರೋಬ್ಬರಿ ನಾಲ್ಕು ಜನ ಆಕಾಂಕ್ಷಿಗಳು ಲಾಭಿ ನಡೆಸುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಹಾಗೂ ಬಿಜೆಪಿ ಹೈಕಮಾಂಡ್ ತಲೆನೋವಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ.

ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ನಿಯಂತ್ರಿಸುವ ಸಲುವಾಗಿಯೇ ಬಿಜೆಪಿ ರಾಷ್ಟ್ರ ನಾಯಕರು ಈಗಾಗಲೇ ರಾಜ್ಯದಲ್ಲಿ ಮೂರು ಜನ ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಿದ್ದಾರೆ. ಜಾತಿವಾರ ಪ್ರಾಶಸ್ತ್ಯ ನೀಡುವ ಸಲುವಾಗಿ ಪ್ರಬಲ ಸಮುದಾಯಕ್ಕೆ ಸೇರಿದವರಿಗೆ ಈಗಾಗಲೇ ಡಿಸಿಎಂ ಸ್ಥಾನವನ್ನು ಹಂಚಿಕೆ ಮಾಡಲಾಗಿದೆ.

ಆದರೆ, ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ಕಾರಣರಾಗಿದ್ದ ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ ಅವರಿಗೆ ಉಡುಗೊರೆಯ ರೂಪದಲ್ಲಿ ಜಲಸಂಪನ್ಮೂಲ ಖಾತೆಯ ಜೊತೆಗೆ ಉಪ ಮುಖ್ಯಮಂತ್ರಿ ಖಾತೆಯನ್ನು ನೀಡಲಾಗುವುದು ಎಂಬ ಮಾತುಗಳು ಈ ಹಿಂದಿನಿಂದಲೂ ಚಾಲ್ತಿಯಲ್ಲಿದ್ದವು. ಈ ಕುರಿತ ಮಾತುಕತೆ ಈಗಲೂ ನಡೆಯುತ್ತಿದೆ. ರಮೇಶ್ ಜಾರಕಿಹೊಳಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಬಿಡದೆ ಕುಳಿತಿದ್ದಾರೆ ಎನ್ನಲಾಗುತ್ತಿದೆ.

ಆದರೆ, ರಮೇಶ್ ಜಾರಕಿಹೊಳಿ ಅವರಿಗೆ ಡಿಸಿಎಂ ಸ್ಥಾನ ನೀಡಿದರೆ ಬಿಜೆಪಿ ಪಕ್ಷದ ಒಳಗೆ ಕಲಹವೇಳುವುದು ಗ್ಯಾರಂಟಿ ಎನ್ನಲಾಗುತ್ತಿದೆ. ಏಕೆಂದರೆ ಕೆ.ಎಸ್. ಈಶ್ವರಪ್ಪ ಬಿಜೆಪಿ ಪಕ್ಷದ ಹಿರಿಯ ನಾಯಕರು. ಅಲ್ಲದೆ, ಈ ಹಿಂದೆ ಡಿಸಿಎಂ ಆಗಿ ಕೆಲಸ ನಿರ್ವಹಿಸಿದ ಅನುಭವ ಅವರಿಗೆ ಇದೆ. ಇದೇ ಕಾರಣಕ್ಕೆ ಹಿರಿತನದ ಆಧಾರದ ಮೇಲೆ ನನಗೂ ಡಿಸಿಎಂ ಹುದ್ದೆ ನೀಡಿ ಎಂದು ಅವರು ಈಗಾಗಲೇ ಲಾಭಿ ಶುರುಮಾಡಿದ್ದಾರೆ.

ಇದರ ಬೆನ್ನಿಗೆ ಒಕ್ಕಲಿಗ ಸಮುದಾಯದ ನಾಯಕ ಹಾಗೂ ಮಾಜಿ ಡಿಸಿಎಂ ಆರ್. ಅಶೋಕ್ ಸಹ ತನಗೂ ಡಿಸಿಎಂ ಹುದ್ದೆ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇನ್ನೂ ವಾಲ್ಮೀಕಿ ಸಮಾಜದ ಪ್ರಬಲ ನಾಯಕ ಶ್ರೀ ರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡುವ ಬಗ್ಗೆ ಚುನಾವಣಾ ಸಂದರ್ಭದಲ್ಲಿ ಸ್ವತಃ ಯಡಿಯೂರಪ್ಪನವರೇ ಮಾತು ನೀಡಿದ್ದರು. ಹೀಗಾಗಿ ಅವರೂ ಸಹ ಡಿಸಿಎಂ ಹುದ್ದೆ ಆಕಾಂಕ್ಷಿ.

ಇದೇ ಕಾರಣಕ್ಕೆ ರಮೇಶ್ ಜಾರಕಿಹೊಳಿ ಅವರಿಗೆ ಸದ್ಯಕ್ಕೆ ಡಿಸಿಎಂ ಹುದ್ದೆ ನೀಡುವುದು ಬೇಡ ಎಂಬ ತೀರ್ಮಾನಕ್ಕೆ ಬಿಎಸ್​ವೈ ಬಂದಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ, ಈ ಕುರಿತು ರಮೇಶ್ ಜಾರಕಿಹೊಳಿ ಜೊತೆಗೆ ಮಾತುಕತೆಯೂ ನಡೆಸಿದ್ದಾರೆ. ಆದರೆ, ರಮೇಶ್ ಇದಕ್ಕೆ ಒಪ್ಪದ ಕಾರಣ ಪ್ರಕರಣ ಇದೀಗ ಹೈಕಮಾಂಡ್ ಅಂಗಳಕ್ಕೆ ತಲುಪಿದೆ.ಹೀಗಾಗಿ ಮತ್ತೊಂದು ಡಿಸಿಎಂ ಸ್ಥಾನವನ್ನು ಸೃಷ್ಟಿಸುವ ಕುರಿತು ಬಿಜೆಪಿ ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎಂಬುದರ ಮೇಲೆ ರಮೇಶ್ ಜಾರಕಿಹೊಳಿ ಅವರ ಭವಿಷ್ಯ ನಿಂತಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ : ಇಂದು ನಡೆಯಲಿರುವ ಮಹತ್ವದ ಸಚಿವ ಸಂಪುಟ ಸಭೆ; ಯಾರಿಗೆ ಯಾವ ಖಾತೆ, ಇಂದೇ ಆಗಲಿದೆಯಾ ನಿರ್ಧಾರ?
Published by: MAshok Kumar
First published: December 12, 2019, 11:29 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading