ಬೆಂಗಳೂರು: ಸಮೀಕ್ಷೆಗಳಲ್ಲಿ (Exit Poll) ಮುನ್ನಡೆ ಬರುತ್ತಿದ್ದಂತೆ ಕಾಂಗ್ರೆಸ್ (Congress) ಕುರ್ಚಿ ಲೆಕ್ಕ ಶುರುವಾಗಿದೆ. ಮುಖ್ಯಮಂತ್ರಿ ರೇಸ್ನಲ್ಲಿರೋ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (KPCC President DK Shivakumar) ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah) ಹೈ ಅಲರ್ಟ್ ಆಗಿದ್ದಾರೆ. ಫಲಿತಾಂಶಕ್ಕೂ ಮೊದಲೇ ಕಾಂಗ್ರೆಸ್ ನಾಯಕರು ಅಭ್ಯರ್ಥಿಗಳ ಬೆನ್ನತ್ತಿದ್ದಾರೆ. ಗೆಲ್ಲುವ ಸಾಧ್ಯತೆ ಇರೋ ಅಭ್ಯರ್ಥಿಗಳಿಗೆ ಇಬ್ಬರೂ ನಾಯಕರು ಕರೆ ಮಾಡಿದ್ದಾರೆ ಎನ್ನಲಾಗ್ತಿದೆ. ಹೈವೋಲ್ಟೇಜ್, 50:50, ಟಫ್ ಫೈಟ್ ಅಭ್ಯರ್ಥಿಗಳ ಜೊತೆ ಚರ್ಚೆ ನಡೆಸಿದ್ದು, ಸಮೀಕ್ಷೆ ಲೆಕ್ಕ ಆಧರಿಸಿ ಮಾತುಕತೆ ನಡೆಸಿದ್ದಾರೆ ಎನ್ನಲಾಗ್ತಿದೆ.
ಅಂತಿಮವಾಗಿ ಶಾಸಕರಿಂದಲೇ ಸಿಎಂ ಆಯ್ಕೆ ಎಂಬ ಸಂದೇಶವನ್ನು ಹೈಕಮಾಂಡ್ ರವಾನಿಸಿದ ಹಿನ್ನೆಲೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಗೆಲ್ಲೋ ಅಭ್ಯರ್ಥಿಗಳ ಜೊತೆ ಸಂಪರ್ಕದಲ್ಲಿದ್ದಾರೆ. ಈಗಿನಿಂದಲೇ ಶಾಸಕರನ್ನು ಸಳೆಯುವ ಕೆಲಸ ಮಾಡ್ತಿದ್ದಾರೆ ಎಂದು ತಿಳಿದು ಬಂದಿದೆ.
ರಣ್ದೀಪ್ ಸುರ್ಜೇವಾಲಾ ಸಲಹೆ
ಸಮೀಕ್ಷೆಗಳಲ್ಲಿ ಪಕ್ಷಕ್ಕೆ ಮುನ್ನಡೆ ಬರುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸುರ್ಜೇವಾಲಾ, ಎಚ್ಚರಿಕೆಯಿಂದ ಹೆಜ್ಜೆ ಇಡಲು ಎಲ್ಲಾ ನಾಯಕರಿಗೆ ಸೂಚನೆ ನೀಡಿದ್ದಾರಂತೆ.
ಇಂದು ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರು ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಣ್ದೀಪ್ ಸುರ್ಜೇವಾಲಾ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ.
ಇದನ್ನೂ ಓದಿ: Chikkamagaluru: ಇವಿಎಂ ಯಂತ್ರಗಳನ್ನೇ ಮರೆತು ಹೋದ ಅಧಿಕಾರಿಗಳು; ಸಾರ್ವಜನಿಕರಿಂದ ಆಕ್ರೋಶ
ಬಿಜೆಪಿ ಅಲರ್ಟ್
ಎಕ್ಸಿಟ್ ಪೋಲ್ ಬರುತ್ತಿದ್ದಂತೆ ಬಿಜೆಪಿ ಕೂಡ ಅಲರ್ಟ್ ಆಗಿದೆ. ಈ ಬಾರಿ ಅತಂತ್ರ ಫಲಿತಾಂಶ ಬರೋ ಸಾಧ್ಯತೆ ಇರೋದ್ರಿಂದ ಬಿಜೆಪಿ ನಾಯಕರು ಫುಲ್ ಟೆನ್ಷನ್ ಆಗಿದ್ದಾರೆ. ಎಕ್ಸಿಟ್ ಪೋಲ್ ತಲೆಕೆಳಗಾಗುತ್ತೆ ಅಂತ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ