ಸಿಎಂ ಆಗಲೇಬೇಕೆಂದು ಸರ್ಕಾರ ಬೀಳಿಸಲು ತುದಿಗಾಲಲ್ಲಿ ನಿಂತಿದ್ದಾರೆ; ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಎಚ್​ಡಿಕೆ ವಾಗ್ದಾಳಿ

ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಅವರೇ ನೇರ ಕಾರಣ ಎಂದು ಕೆಲವು ದಿನಗಳ ಹಿಂದೆ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಆರೋಪ ಮಾಡಿ, ಬಿಜೆಪಿ ಸರ್ಕಾರ ಬೀಳಲು ಬಿಡುವುದಿಲ್ಲ ಎಂದು ಮಾತನಾಡಿದ್ದರು.

HR Ramesh | news18-kannada
Updated:November 5, 2019, 6:22 PM IST
ಸಿಎಂ ಆಗಲೇಬೇಕೆಂದು ಸರ್ಕಾರ ಬೀಳಿಸಲು ತುದಿಗಾಲಲ್ಲಿ ನಿಂತಿದ್ದಾರೆ; ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಎಚ್​ಡಿಕೆ ವಾಗ್ದಾಳಿ
ಹೆಚ್​ಡಿ ಕುಮಾರಸ್ವಾಮಿ- ಸಿದ್ದರಾಮಯ್ಯ
  • Share this:
ಬೆಂಗಳೂರು: ಮೈತ್ರಿ ಸರ್ಕಾರ ಪತನವಾದ ಬಳಿಕ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಬಹಿರಂಗ ವಾಗ್ಸಮರ ತಾರಕಕ್ಕೇರಿದೆ. ಇದೀಗ ಮತ್ತೆ ಎಚ್​.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಹರಿಹಾಯ್ದಿದ್ದಾರೆ.

"ಕೆಲವರು ತಾವು ಮುಖ್ಯಮಂತ್ರಿ ಆಗಲೇಬೇಕು ಎಂಬ ಸ್ವಾರ್ಥದ ದುರಾಸೆಯಿಂದ ಜನರ ಹಣ ಪೋಲಾದರೂ ಪರವಾಗಿಲ್ಲ ಎಂದು ಸರ್ಕಾರ ಬೀಳಿಸಲು ತುದಿಗಾಲಲ್ಲಿ ನಿಂತಿದ್ದಾರೆ.
ಪಕ್ಷ ಬಿಟ್ಟು ಹೋದ ಶಾಸಕರಲ್ಲಿ ಬಹುತೇಕರು ನಿಮ್ಮ ಪಕ್ಷದವರೇ ಎಂಬುದನ್ನು ಮರೆಯಬಾರದು. ಪಕ್ಕದ ಮನೆಯ ಒಲೆ ಆರಿಸಲು ಬರುವ ಮುನ್ನ ಹೊತ್ತಿ ಉರಿಯುತ್ತಿರುವ ತಮ್ಮ ಮನೆಯ ಬೆಂಕಿ ನಂದಿಸಿಕೊಳ್ಳಿ." ಎಂದು ಎಚ್​.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರ ಹೆಸರೆತ್ತದೆ ಪರೋಕ್ಷವಾಗಿ ಟ್ವಿಟರ್​ನಲ್ಲಿ ವಾಗ್ದಾಳಿ ನಡೆಸಿದ್ದಾರೆ.ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಅವರೇ ನೇರ ಕಾರಣ ಎಂದು ಕೆಲವು ದಿನಗಳ ಹಿಂದೆ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಆರೋಪ ಮಾಡಿ, ಬಿಜೆಪಿ ಸರ್ಕಾರ ಬೀಳಲು ಬಿಡುವುದಿಲ್ಲ ಎಂದು ಮಾತನಾಡಿದ್ದರು. ಇದಕ್ಕೆ ಸಿದ್ದರಾಮಯ್ಯ ಅವರು, ಬಿಜೆಪಿ ಸರ್ಕಾರ ಬೀಳಲು ಬಿಡುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್​ನಿಂದ ಬೇರೇನು ನಿರೀಕ್ಷೆ ಮಾಡಲು ಸಾಧ್ಯ? ಇನ್ನಷ್ಟು ಜೆಡಿಎಸ್ ಶಾಸಕರು ಬಿಜೆಪಿ ಸೇರಬಹುದೆಂಬ ಭಯಕ್ಕೆ ಅವರು ಹಾಗೆ ಮಾತನಾಡಿರಲೂಬಹುದು. ಇದು ನಿರೀಕ್ಷಿತ ರಾಜಕೀಯ ಬೆಳವಣಿಗೆ ಕೂಡ ಎಂದು ತಿರುಗೇಟು ನೀಡಿದ್ದರು.

ಇದನ್ನು ಓದಿ: ಸಿದ್ದರಾಮಯ್ಯ ಅಹಿಂದ ಲೀಡರ್. ನಾನು ಯಾವ ಹಿಂದ ನಾಯಕ, ನನಗೆ ಗೊತ್ತಿಲ್ಲ; ದೇವೇಗೌಡFirst published:November 5, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ