Agnipath: ಸೈನಿಕರ ಅನ್ನ ಕಸಿಯಲು ಹೊರಟಿದೆ ದೇಶದ್ರೋಹಿ ಬಿಜೆಪಿ ಸರ್ಕಾರ; ಸಿದ್ದರಾಮಯ್ಯ

ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಕೇಂದ್ರ ಸರ್ಕಾರದ (Central Government) ಸೇನಾ ನೇಮಕಾತಿಯ ಅಗ್ನಿ ಪಥ್ ಯೋಜನೆಗೆ (Agnipath) ವಿರೋಧ ವ್ಯಕ್ತವಾಗಿದೆ. ಈಗಾಗಲೇ ಈ ಯೋಜನೆ ವಿರೋಧಿಸಿ ಉತ್ತರ ಪ್ರದೇಶ (Uttar Pradesh), ಬಿಹಾರದಲ್ಲಿ (Bihar) ವ್ಯಾಪಕ ಹಿಂಸಾಚಾರ ಏರ್ಪಟ್ಟಿದೆ. ಉದ್ರಿಕ್ತ ಪ್ರತಿಭಟನಾಕಾರರ ಗುಂಪುಗಳು ರೈಲುಬೋಗಿಗಳಿಗೆ (Railway Coach) ಬೆಂಕಿ ಇಡುತ್ತಿವೆ. ಇದೀಗ ಅಗ್ನಿಪಥ್ ಯೋಜನೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah) ಪ್ರತಿಕ್ರಿಯೆ ನೀಡಿದ್ದಾರೆ. ದೇಶದ ಯುವಜನರನ್ನು ನಿರುದ್ಯೋಗದ (Unemployment) ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ (BJP Government) ತಕ್ಷಣ ರದ್ದುಪಡಿಸಿ ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು. ರೈತರನ್ನು ಬಲಿಗೊಟ್ಟಾಯಿತು, ಈಗ ಸೈನಿಕರ ಸರದಿಯೇ ಎಂದು ಪ್ರಶ್ನೆ ಮಾಡಿದ್ದರೆ.

ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ?

ಈ ಮನಸ್ಥಿತಿ ಅಪಾಯಕಾರಿಯಲ್ಲವೇ?

ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ?

ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ.

ಇದನ್ನೂ ಓದಿ:  Agnipath Protest: ಅಗ್ನಿಪಥ್ ವಿರೋಧಿಸಿ 2 ರೈಲುಗಳಿಗೆ ಬೆಂಕಿಯಿಟ್ಟ ಪ್ರತಿಭಟನಾಕಾರರು

ಎಚ್ಚೆತ್ತುಕೊಳ್ಳಲು ಇದು ‘ಸಕಾಲ’!

ಹೊಸ ಸೇನಾ ನೇಮಕಾತಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಬಿಜೆಪಿ ಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ. ಎಚ್ಚೆತ್ತುಕೊಳ್ಳಲು ಇದು ‘ಸಕಾಲ’!

ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು

ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು ಎಂದು ಸಿದ್ದರಾಮಯ್ಯ ಅವರು ಕರೆ ಕೊಟ್ಟಿದ್ದಾರೆ.

ಪ್ರತಿಭಟನೆ ಕರೆ

ಅಖಿಲ ಭಾರತ ವಿದ್ಯಾರ್ಥಿ ಸಂಘ (AISA) ಶುಕ್ರವಾರ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಹಲವಾರು ರಾಜ್ಯಗಳಲ್ಲಿ ಪ್ರತಿಭಟನೆಗಳ ನಂತರ ಸರ್ಕಾರವು 2022 ರ ಯೋಜನೆಯಡಿಯಲ್ಲಿ ನೇಮಕಾತಿಗಾಗಿ ಗರಿಷ್ಠ ವಯಸ್ಸಿನ ಮಿತಿಯನ್ನು 21 ವರ್ಷದಿಂದ 23 ವರ್ಷಕ್ಕೆ ಏರಿಸಿದೆ.

ಅಗ್ನಿಪತ್ ಯೋಜನೆಯ ವಿರುದ್ಧ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಉದ್ದೇಶಿತ ಸೇನಾ ಬದಲಾವಣೆಗಳನ್ನು ಯುವ ಜನರು ಸೇರಿದಂತೆ ಹಲವು ಭಾಗಗಳಲ್ಲಿ ಜನರು ತೀವ್ರವಾಗಿ ವಿರೋಧಿಸುತ್ತಿದ್ದಾರೆ.

ಇದನ್ನೂ ಓದಿ:  Agnipath: ಅಗ್ನಿಪಥ್‌ಗೆ ಆರಂಭದಲ್ಲಿಯೇ ಅಗ್ನಿ ಪರೀಕ್ಷೆ! 2ನೇ ದಿನ ರೈಲಿಗೆ ಬೆಂಕಿ, ಪೊಲೀಸರ ಮೇಲೆ ಕಲ್ಲು ತೂರಾಟ

ಈ ಸಂಬಂಧ ಈಗಾಗಲೇ ಸಾಕಷ್ಟು ಹಾನಿ ಸಂಭವಿಸಿದ್ದು ಪ್ರತಿಭಟನೆಯು ಹಿಂಸಾತ್ಮಕ ರೂಪವನ್ನು ತಾಳುತ್ತಿದೆ. ಕಾರ್ಗಿಲ್ ಯುದ್ಧದ ಸಮಯದಲ್ಲಿ ಭಾರತವನ್ನು ವಿಜಯದತ್ತ ಮುನ್ನಡೆಸಿದ ಸೇನಾ ಮುಖ್ಯಸ್ಥ ಜನರಲ್ ವಿಪಿ ಮಲಿಕ್ ಅವರು ಇಂದು ಅಗ್ನಿಪಥ್ ಯೋಜನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
Published by:Mahmadrafik K
First published: