• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • DK Shivakumar: ಚುನಾವಣೆ ತಂತ್ರ ರೂಪಿಸ್ತಿದ್ದ ಡಿಕೆಶಿಗೆ ಡಬಲ್ ಶಾಕ್; ಒಂದೆಡೆ ನಾಮಪತ್ರ ತಿರಸ್ಕಾರದ ಭೀತಿ, ಮತ್ತೊಂದೆಡೆ ಹೈಕೋರ್ಟ್‌ನಲ್ಲೂ ಅರ್ಜಿ ವಜಾ

DK Shivakumar: ಚುನಾವಣೆ ತಂತ್ರ ರೂಪಿಸ್ತಿದ್ದ ಡಿಕೆಶಿಗೆ ಡಬಲ್ ಶಾಕ್; ಒಂದೆಡೆ ನಾಮಪತ್ರ ತಿರಸ್ಕಾರದ ಭೀತಿ, ಮತ್ತೊಂದೆಡೆ ಹೈಕೋರ್ಟ್‌ನಲ್ಲೂ ಅರ್ಜಿ ವಜಾ

ಡಿಕೆ ಶಿವಕುಮಾರ್​, ಕೆಪಿಸಿಸಿ ಅಧ್ಯಕ್ಷ

ಡಿಕೆ ಶಿವಕುಮಾರ್​, ಕೆಪಿಸಿಸಿ ಅಧ್ಯಕ್ಷ

ಬಿಜೆಪಿ ಅವರು ಮೊದಲೇ ಟಕ್ಕರ್ ಕೊಡ್ತೀನಿ ಅಂತಾ ಹೇಳಿದ್ದಾರೆ. ಅವರು ನಾಮ ಪತ್ರ ರಿಜೆಕ್ಟ್ ಮಾಡಿಸುತ್ತಾರೆ ಎನ್ನುವ ಅನುಮಾನ ಇದೆ ಎಂದು ಡಿಕೆ ಸುರೇಶ್​ ಆರೋಪಿಸಿದ್ದಾರೆ.

 • News18 Kannada
 • 2-MIN READ
 • Last Updated :
 • Bangalore [Bangalore], India
 • Share this:

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Elections 2023) ಮತದಾನಕ್ಕೆ ಕೇವಲ 20 ದಿನ ಬಾಕಿ ಇದೆ. ಇಂದು ನಾಮಪತ್ರ (Nomination) ಸಲ್ಲಿಕೆಯ ಸಮಯ ಅಂತ್ಯವಾಗಿದ್ದು, ಸ್ಪರ್ಧೆ ಮಾಡಲು ಇಚ್ಛಿಸಿದ್ದ ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ವಿಶೇಷ ಎಂದರೆ ಡಿಕೆ ಶಿವಕುಮಾರ್ (DK Shivakumar) ಅವರು ನಾಮಪತ್ರ ಸಲ್ಲಿಕೆ ಮಾಡಿದ್ದ ಕನಕಪುರ (Kanakapura) ವಿಧಾನಸಭಾ ಕ್ಷೇತ್ರದಲ್ಲಿ ಇಂದು ಡಿಕೆ ಸುರೇಶ್​ (DK Suresh) ಅವರು ನಾಮಪತ್ರ ಸಲ್ಲಿಕೆ ಮಾಡಿ ಅಚ್ಚರಿ ಮಾಡಿಸಿದ್ದರು. ಇದರ ನಡುವೆಯೇ ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಭಾರೀ ಹಿನ್ನಡೆ ಎದುರಾಗಿದ್ದು, ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ತನಿಖೆಗೆ ಸರ್ಕಾರ ಅನುಮತಿ ನೀಡಿದ ನಡೆಯನ್ನು ಪ್ರಶ್ನಿಸಿ ಹೈಕೋರ್ಟ್ (High Court)​​ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.


ಸರ್ಕಾರ ಆದೇಶದ ವಿರುದ್ಧ ಹೈಕೋರ್ಟ್​ ಮೊರೆ ಹೋಗಿದ್ದ ಡಿಕೆಶಿ


ಡಿಕೆ ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು. ಸದ್ಯ ಹೈಕೋರ್ಟ್​ ಸಿಬಿಐ ತನಿಖೆಗೆ ಅನುಮತಿ ನೀಡಿದ್ದ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದಿದೆ. ಇದರೊಂದಿಗೆ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಡಿಕೆ ಶಿವಕುಮಾರ್ ಅವರಿಗೆ ಭಾರೀ ಹಿನ್ನಡೆ ಎದುರಾಗಿದೆ.


2019 ರಲ್ಲಿ ಯಡಿಯೂರಪ್ಪ ಸರ್ಕಾರ ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ಅನುಮತಿ ನೀಡಿತ್ತು. ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಸಿಬಿಐ ಎಫ್ಐಆರ್ ದಾಖಲಿಸಿತ್ತು. ಆದರೆ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವ ಅಧಿಕಾರ ಇಲ್ಲ ಎಂದು‌ ಡಿಕೆ ಶಿವಕುಮಾರ್ ಅವರು ಹೈಕೋರ್ಟಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು.


ಇದನ್ನೂ ಓದಿ: Karnataka Election 2023: ಸಿದ್ದುಗೆ ಪುಕ್ಕಲತನ, 18 ವರ್ಷ ತುಂಬದ ಮೊಮ್ಮಗನ ಜೊತೆ ಪ್ರಚಾರ ಮಾಡ್ತಿದ್ದಾರೆ! ಸಂಸದ ಪ್ರತಾಪ್​ ಸಿಂಹ ವ್ಯಂಗ್ಯ


ನಾಮಪತ್ರ ಸಲ್ಲಿಸಿದ ಡಿಕೆ ಸುರೇಶ್​


ಡಿಕೆ ಶಿವಕುಮಾರ್ ಅವರು ಸಲ್ಲಿಸಿದ್ದ ಹೈಕೋರ್ಟ್​​ನ ನ್ಯಾಯಮೂರ್ತಿ ನಟರಾಜನ್ ಅವರ ಏಕಸದಸ್ಯ ಪೀಠ ಅರ್ಜಿ ವಜಾಗೊಳಿಸಿ ಆದೇಶ ನೀಡಿದೆ. ಚುನಾವಣೆ ಸಮಯದಲ್ಲೇ ಡಿಕೆ ಶಿವಕುಮಾರ್​ ಅವರಿಗೆ ಬಿಗ್ ಶಾಕ್ ಎದುರಾಗಿದ್ದು, ಈ ಹಿನ್ನೆಲೆಯಲ್ಲಿಯೇ ಡಿಕೆ ಸುರೇಶ್​ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂಬ ಮಾತು ಕೇಳಿ ಬಂದಿದೆ.


ಬಿಜೆಪಿ ವಿರುದ್ಧ ಡಿಕೆ ಸುರೇಶ್ ಗಂಭೀರ ಆರೋಪ


ನಾಮಪತ್ರ ಸಲ್ಲಿಕೆ ಮಾಡಿದ ಬಳಿಕ ಮಾತನಾಡಿದ್ದ ಸುರೇಶ್​ ಅವರು, ಕನಕಪುರದಿಂದ ಸ್ಪರ್ಧೆ ಮಾಡುವುದಕ್ಕೆ ಹೈಕಮಾಂಡ್ ಸೂಚನೆ ನೀಡಿತ್ತು. ಕೆಲವೊಂದು ಕುತಂತ್ರಗಳು ನಡೆಯುತ್ತಿರುವುದು ಎಂದು ಗೊತ್ತಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ನಾಮ ಪಾತ್ರ ಸಲ್ಲಿಕೆ ಮಾಡಿದ್ದೇನೆ. ಡಿಕೆ ಶಿವಕುಮಾರ್ ಅವರ ಮೇಲೆ ಸಾಕಷ್ಟು ಕಣ್ಣುಗಳು ಬಿದ್ದಿವೆ. ವಾಮಮಾರ್ಗದಿಂದ ಡಿಕೆ ಶಿವಕುಮಾರ್​ ಅವರನ್ನು ಮಣಿಸಲು ಬಿಜೆಪಿ ಪ್ಲಾನ್ ಮಾಡಿದೆ. ಅವರನ್ನು ಬಂಧಿಸುವುದು, ನೋಟಿಸ್ ನೀಡುವುದನ್ನು ನೀವು ನೋಡಿದ್ದೀರಿ.


top videos  ನಾಲ್ಕು ದಿನದ ಹಿಂದೆ ಕೂಡ ಚೆನ್ನೈ ಇಂದ ಐಟಿ ಅವರು ನೋಟಿಸ್ ನೀಡಿದ್ದರು. ಖುದ್ದು ನೀವೇ ಹಾಜರಾಗಬೇಕು ಎಂದು ಹೇಳಿದ್ದಾರೆ. ಚುನಾವಣೆ ಆದ ಬಳಿಕ ಬರುತ್ತೇವೆ ಎಂದು ಹೇಳಿದ್ದೇವೆ. ನಮ್ಮ ಮೇಲಿನ ಕೇಸ್ ಗಳ ಮೇಲೆ ಎಲ್ಲಾ ಕಡೆ ತಡೆಯಾಜ್ಞೆಗಳು ಇದೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಡಿಕೆಶಿ ಅವರನ್ನು ಟಾರ್ಗೆಟ್ ಮಾಡಿದ್ದಾರೆ. ಬಿಜೆಪಿ ಅವರು ಮೊದಲೇ ಟಕ್ಕರ್ ಕೊಡ್ತೀನಿ ಅಂತಾ ಹೇಳಿದ್ದಾರೆ. ಅವರು ನಾಮ ಪತ್ರ ರಿಜೆಕ್ಟ್ ಮಾಡಿಸುತ್ತಾರೆ ಎನ್ನುವ ಅನುಮಾನ ಇದೆ ಎಂದು ಆರೋಪಿಸಿದರು.

  First published: