HOME » NEWS » State » AIR SERVICE STARTED AT HUBLI HEYDERABAD AND UNION MINISTER PRAHLAD JOSHI GIVE GREEN SIGNAL SAKLB LG

ಹುಬ್ಬಳ್ಳಿ - ಹೈದರಾಬಾದ್ ನಡುವೆ ವಿಮಾನ ಹಾರಾಟ ಆರಂಭ; ಶೀಘ್ರವೇ ಅಂತರರಾಷ್ಟ್ರೀಯ ವಿಮಾನ ಸೇವೆ ಎಂದ ಪ್ರಹ್ಲಾದ್ ಜೋಶಿ

ಈಗಾಗಲೇ ಮುಂಬೈ, ಅಹಮದಾಬಾದ್, ಕೊಚ್ಚಿ, ಕೊಣ್ಣೂರ್, ಗೋವಾಗಳಿಗೆ ವಿಮಾನಯಾನ ಸೌಲಭ್ಯ ಕಲ್ಪಿಸಲಾಗಿದೆ. ಕೊರೋನಾ ನಂತರದ ಸ್ಥತಿ ಗತಿಗಳನ್ನು ನೋಡಿಕೊಂಡು ಇತರೆ ನಗರಗಳಿಗೂ ವಿಮಾನ ಸಂಪರ್ಕ ಕಲ್ಪಿಸಲಾಗುವುದು. ಟ್ರೂ ಜಟ್ ಮಾಲಿಕರೊಂದಿಗೆ ಹೆಚ್ಚಿನ ವಿಮಾನ ಸಂಪರ್ಕ ಕಲ್ಪಿಸುವಂತೆ ಮಾತುಕತೆ ನಡೆಸಲಾಗಿದೆ ಎಂದು ಜೋಶಿ ತಿಳಿಸಿದ್ದಾರೆ.

news18-kannada
Updated:March 31, 2021, 2:27 PM IST
ಹುಬ್ಬಳ್ಳಿ - ಹೈದರಾಬಾದ್ ನಡುವೆ ವಿಮಾನ ಹಾರಾಟ ಆರಂಭ; ಶೀಘ್ರವೇ ಅಂತರರಾಷ್ಟ್ರೀಯ ವಿಮಾನ ಸೇವೆ ಎಂದ ಪ್ರಹ್ಲಾದ್ ಜೋಶಿ
ವಿಮಾನಯಾನ ಸೇವೆ ಆರಂಭ
  • Share this:
ಹುಬ್ಬಳ್ಳಿ(ಮಾ.31):  ಹುಬ್ಬಳ್ಳಿ ಮತ್ತು ಹೈದರಾಬಾದ್ ನಡುವೆ ಹೊಸ ವಿಮಾನ ಸೇವೆ ಆರಂಭಿಸಲಾಗಿದೆ. ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ನೂತನ ವಿಮಾನಕ್ಕೆ ಹಸಿರು ನಿಶಾನೆ ತೋರಿದ್ದಾರೆ. ಅಲಯನ್ಸ್ ಏರ್ ವೇಸ್ ನಿಂದ ಹೈದರಾಬಾದ್ ಗೆ ವಿಮಾನ ಸೇವೆ ಪ್ರಾರಂಭಿಸಲಾಗಿದೆ. ವಾರಕ್ಕೆ ಮೂರು ದಿನ ವಿಮಾನ ಹಾರಾಟ ನಡೆಸಲಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಲ್ಲಿ ವಾರದ  ಏಳೂ ದಿನಗಳು ಹೈದರಾಬಾದ್ ನಡುವೆ ವಿಮಾನ ಹಾರಾಟ ನಡೆಸಲು ಚಿಂತನೆ ನಡೆಸಲಾಗಿದೆ.

ಈಗಾಗಲೇ ಹುಬ್ಬಳ್ಳಿಯಿಂದ ಬೆಂಗಳೂರು, ದೆಹಲಿ, ಮುಂಬೈ, ಗೋವಾ, ಅಹ್ಮದಾಬಾದ್, ಕೊಚ್ಚಿ ಮತ್ತು ಕೊಣ್ಣೂರುಗಳಿಗೆ ವಿಮಾನ ಸೌಲಭ್ಯವಿತ್ತು. ಇದೀಗ ಹುಬ್ಬಳ್ಳಿ ಮತ್ತು ಹೈದರಾಬಾದ್ ನಡುವೆ ವಿಮಾನ ಹಾರಾಟ ಆರಂಭಿಸಲಾಗಿದೆ. ಕೇಂದ್ರ ಸರ್ಕಾರ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸುಸಜ್ಜಿತ ನಿಲ್ದಾಣವನ್ನಾಗಿ ಮಾರ್ಪಡಿಸಿದೆ. ಹುಬ್ಬಳ್ಳಿಯಿಂದ ಹೈದರಾಬಾದ್ ನಗರಕ್ಕೆ ವಿಮಾನ ಯಾನ ಸೇವೆ ಅವಶ್ಯಕತೆ ಇತ್ತು. ಬಹುದಿನ ಬೇಡಿಕೆಗೆ ಇಂದು ಚಾಲನೆ ನೀಡಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ವಾರದಲ್ಲಿ ಮೂರು ದಿನ ಹೈದರಾಬಾದ್ ನಗರಕ್ಕೆ ವಿಮಾನ ಸಂಚರಿಸಲಿದೆ. ಪ್ರಯಾಣಿಕರ ಸಂಖ್ಯೆ ಆಧಾರಿಸಿ ಮುಂದಿನ ದಿನಗಳಲ್ಲಿ ವಾರದ ಏಳು ದಿನವೂ ಸೇವೆ ವಿಸ್ತರಿಸಲಾಗುವುದು. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿಯವರ ವಿಶೇಷ ಪ್ರಯತ್ನದಿಂದ ಹೈದರಾಬಾದ್ ನಗರಕ್ಕೆ ವಿಮಾನ ಯಾನ ಸೇವೆ ಆರಂಭವಾಗಿದೆ. ಅವರಿಗೆ ವಿಶೇಷ ಧನ್ಯವಾದಗಳು. ಹುಬ್ಬಳ್ಳಿ ಮಂಗಳೂರಿಗೆ‌ ನಡುವೆ ವಿಮಾನ ಸಂಪರ್ಕ ಕಲ್ಪಿಸಲು ಬೇಡಿಕೆ ಇದೆ. ಇದನ್ನು ಸಹ ಶೀಘ್ರವಾಗಿ ಪ್ರಾರಂಭಿಸಲಾಗುವುದು ಎಂದರು.

Viral Video: ಚಿಕಿತ್ಸೆಗೆ ಮರಿಗಳನ್ನು ಆಸ್ಪತ್ರೆಗೆ ತೆಗೆದುಕೊಂಡು ಬಂದ ಬೆಕ್ಕು!; ನೆಟ್ಟಿಗರ ಹೃದಯ ಗೆದ್ದ ಮಾರ್ಜಾಲ

ಹುಬ್ಬಳ್ಳಿಯಲ್ಲಿ ರಾತ್ರಿ ಸಹ ವಿಮಾನ ಇಳಿಯಲು ಅವಕಾಶವಿದೆ. ಸ್ವಯಂ ಚಾಲಿತ ಲ್ಯಾಂಡಿಗ್ ಗೆ ವ್ಯವಸ್ಥೆಯಿದೆ. ಈಗಿನ ರನ್ ವೇ ಟ್ರ್ಯಾಕ್ ವಿಸ್ತರಣೆಮಾಡಲಾಗುವುದು. ಮಧ್ಯ ಪ್ರಾಚ್ಯ ರಾಷ್ಟ್ರಗಳಿಗೆ ನೇರವಾಗಿ ವಿಮಾನ ಸೌಲಭ್ಯ ಕಲ್ಪಿಸುವ ಪ್ರಸ್ತಾವನ್ನು ಸರ್ಕಾರಕ್ಕೆ ಕಳುಹಿಸಲು ವಿಮಾನ ನಿಲ್ದಾಣ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ರನ್ ವೇ ವಿಸ್ತರಿಸಿದ ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ನೇರವಾಗಿ ಅಂತರರಾಷ್ಟ್ರೀಯ ವಿಮಾನ ಸೇವೆಗಳು ಆರಂಭವಾಗಲಿವೆ.

ಈಗಾಗಲೇ ಮುಂಬೈ, ಅಹಮದಾಬಾದ್, ಕೊಚ್ಚಿ, ಕೊಣ್ಣೂರ್, ಗೋವಾಗಳಿಗೆ ವಿಮಾನಯಾನ ಸೌಲಭ್ಯ ಕಲ್ಪಿಸಲಾಗಿದೆ. ಕೊರೋನಾ ನಂತರದ ಸ್ಥತಿ ಗತಿಗಳನ್ನು ನೋಡಿಕೊಂಡು ಇತರೆ ನಗರಗಳಿಗೂ ವಿಮಾನ ಸಂಪರ್ಕ ಕಲ್ಪಿಸಲಾಗುವುದು. ಟ್ರೂ ಜಟ್ ಮಾಲಿಕರೊಂದಿಗೆ ಹೆಚ್ಚಿನ ವಿಮಾನ ಸಂಪರ್ಕ ಕಲ್ಪಿಸುವಂತೆ ಮಾತುಕತೆ ನಡೆಸಲಾಗಿದೆ ಎಂದು ಜೋಶಿ ತಿಳಿಸಿದ್ದಾರೆ.

ಅಲೈಯನ್ಸ್ ಏರವೇಸ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹರ್ಪ್ರೀತ್ ಎ ಡಿ ಸಿಂಗ್ ಮಾತನಾಡಿ, ಏರ್ ಇಂಡಿಯಾ ಭಾರತೀಯರ ಹೃದಯವನ್ನು ಬೆಸೆಯುವ ಕಾರ್ಯ ಮಾಡುತ್ತಿದೆ. ಹುಬ್ಬಳ್ಳಿ ಮಹತ್ವದ ನಗರವಾಗಿದ್ದು ವಿಮಾನಯಾನ ಸಂಪರ್ಕದ ಅವಶ್ಯಕತೆ ಇದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಮನವಿ ಮೇರೆಗೆ ಹೈದರಾಬಾದ್ ನಗರಕ್ಕೆ ವಿಮಾನಯಾನ ಸಂಪರ್ಕ ಕಲ್ಪಿಸಲಾಗಿದೆ.ಇದರಿಂದ ಕರ್ನಾಟಕ ಹಾಗೂ ತೆಲಂಗಾಣದ ಮಧ್ಯದ ಬಾಂಧವ್ಯ ವೃದ್ಧಿಯಾಗಲಿದೆ. ಅಲೈಯನ್ಸ್ ಏರ್ ವೇಸ್ ಗೋರಖ್ ಪುರ ದಿಂದ ಲಕ್ನೋ, ಬರೇಲಿಯಿಂದ ದೆಹಲಿ, ಬಿಲಾಸಪುರ್ ಜಬಲ್ ಪುರ್ ಹೀಗೆ ಹಲವು ನಗರಗಳಲ್ಲಿ ವಿಮಾನಯಾನ ಸೌಲಭ್ಯ ವಿಸ್ತರಿಸಿದೆ.‌ ದಕ್ಷಿಣ ಭಾರತದಲ್ಲಿ ಮೈಸೂರುನಿಂದ ಮಂಗಳೂರು, ಕ್ಯಾಲಿಕಟ್, ಕಲಬುರ್ಗಿಯಿಂದ ಮುಂಬೈ ಹೀಗೆ ನಾನಾ ನಗರಗಳಿಗೆ ಸಂಪರ್ಕ ಕಲ್ಪಿಸಲಾಗಿದೆ.
ಮೇಕ್ ಇನ್ ಇಂಡಿಯಾ ಯೋಜನೆಯಡಿ ಹೆಚ್ ಎ ಎಲ್ ನೊಂದಿಗೆ ನಾಗರಿಕ ಪ್ರಯಾಣಿಕ ವಿಮಾನಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಈಶಾನ್ಯ ರಾಜ್ಯಗಳಲ್ಲಿ ವಿಮಾನಯಾನ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ವಿಮಾನ ನಿಲ್ದಾಣ ನಿರ್ದೇಶಕ ಪ್ರಮೋದ ಕುಮಾರ್ ಠಾಕರೆ, ವಿಮಾನ ನಿಲ್ದಾಣ ಭದ್ರತಾಧಿಕಾರಿ ಜಗದೀಶ್ ಹಂಚಿನಾಳ್ ಮತ್ತಿತರರು ಉಪಸ್ಥಿತರಿದ್ದರು. ‌
Published by: Latha CG
First published: March 31, 2021, 2:23 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories