• Home
 • »
 • News
 • »
 • state
 • »
 • ನಾಳೆಯಿಂದ ರುಪ್ಸಾ ಅಡಿಯಲ್ಲಿ ಬರುವ ಎಲ್ಲಾ ಶಾಲೆಗಳ ಆನ್ ಲೈನ್, ಆಫ್ ಲೈನ್ ತರಗತಿಗಳು ಸ್ಥಗಿತ

ನಾಳೆಯಿಂದ ರುಪ್ಸಾ ಅಡಿಯಲ್ಲಿ ಬರುವ ಎಲ್ಲಾ ಶಾಲೆಗಳ ಆನ್ ಲೈನ್, ಆಫ್ ಲೈನ್ ತರಗತಿಗಳು ಸ್ಥಗಿತ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಮುಂದುವರೆದ ಅವರು, ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟದ 15 ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದೇವೆ.  ಸರ್ಕಾರ ಬೇಡಿಕೆ ಈಡೇರಿಸದೆ ಹೋದಲ್ಲಿ ಡಿ.6ರಿಂದ ಬೆಂಗಳೂರಿನಲ್ಲಿ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

 • Share this:

  ಬೆಂಗಳೂರು(ಡಿ.20): ಶಿಕ್ಷಣ ಇಲಾಖೆ ವಿರುದ್ಧ ಹೋರಾಟಕ್ಕೆ ಮುಂದಾಗಿರುವ ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟ, ನಾಳೆಯಿಂದ ರುಪ್ಸಾ ಅಡಿಯಲ್ಲಿ ಬರುವ ಎಲ್ಲಾ ಶಾಲೆಗಳ ಆನ್​ಲೈನ್ ಮತ್ತು ಆಫ್​ಲೈನ್​​ ತರಗತಿಗಳನ್ನು ಸ್ಥಗಿತಗೊಳಿಸುತ್ತಿದೆ.  ಜೊತೆಗೆ ಸಂಪೂರ್ಣ ಶೈಕ್ಷಣಿಕ ವರ್ಷವನ್ನು ಸ್ಥಗಿತ ಮಾಡಲು ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟ ನಿರ್ಧರಿಸಿದೆ.  ಸರ್ಕಾರ ಶಾಲೆಗಳನ್ನು ಪುನರಾರಂಭಿಸುವ ಸಮಯದಲ್ಲಿ ಶಾಲೆಗಳನ್ನು ಮುಚ್ಚಲು ಖಾಸಗಿ ಶಿಕ್ಷಣ ಮಂಡಳಿ ಮುಂದಾಗಿದೆ.


  ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಅಧಿಕೃತ ನಿರ್ಧಾರವನ್ನು ರುಪ್ಸಾ ಪ್ರಕಟಿಸಿದೆ. ರುಪ್ಸಾ ಅಡಿಯಲ್ಲಿ ಬರುವ ಎಲ್ಲಾ ಶಾಲೆಗಳ ಆನ್​ಲೈನ್​ ಮತ್ತು ಆಫ್​ಲೈನ್ ತರಗತಿಗಳನ್ನು ಬಂದ್​ ಮಾಡಲು ಸುದ್ದಿಗೋಷ್ಠಿಯಲ್ಲಿ ನಿರ್ಧಾರ ಮಾಡಲಾಗಿದೆ.  ಜೊತೆಗೆ ಜನವರಿ 6ರಿಂದ ಬೆಂಗಳೂರಿನಲ್ಲಿ ಉಪವಾಸ ಸತ್ಯಾಗ್ರಹ ಮಾಡಲು ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟ ನಿರ್ಧರಿಸಿದೆ.  ರಾಜ್ಯಾದ್ಯಂತ ಶಾಲೆಗಳನ್ನು ಬಂದ್ ಮಾಡಿ ಹೋರಾಟ ಪ್ರಾರಂಭಿಸಲು ಮುಂದಾಗಿದೆ.


  ಗ್ರಾಮದ ಸಮಸ್ಯೆಗಳನ್ನು ಬಗೆಹರಿಸಲು ಒಮ್ಮತದ ನಿರ್ಧಾರ; ನಾಮಪತ್ರ ಸಲ್ಲಿಸಿ ವಾಪಸ್ ಪಡೆದ ಅಭ್ಯರ್ಥಿಗಳು


  ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟಿ ಮಾತನಾಡಿ,  ರಾಜ್ಯದ ವಿವಿಧ ಮೂಲೆಗಳ ಶಾಲೆಗಳ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದಾರೆ.  ಇವತ್ತು ಹಲವಾರು ಸಮ್ಯಸೆಗಳ ಬಗ್ಗೆ ವಿಸ್ತೃತ ವಾಗಿ ಚರ್ಚೆ ಮಾಡಿದ್ದೇವೆ. ಶಿಕ್ಷಣ ಇಲಾಖೆ ಜಾಣ ಕುರುಡುತನ‌ ಮಾಡಿದೆ. ಶಿಕ್ಷಣ ಸಚಿವರು ತಪ್ಪು ಮಾಡುತ್ತಿದ್ದಾರೆ.  ನಿನ್ನೆ ಸಿಎಂ ಬಳಿ ವರದಿ ಕೊಟ್ಟಿದ್ದಾರೆ. ಆದ್ರೆ ನಮ್ಮ ಯಾವ ಬೇಡಿಕೆಗಳನ್ನು ಈಡೇರಿಸಿಲ್ಲ ದಾಖಲಾತಿ ವಿಚಾರವಾಗಿಯೂ ಗೊಂದಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.


  ಮುಂದುವರೆದ ಅವರು, ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟದ 15 ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದೇವೆ.  ಸರ್ಕಾರ ಬೇಡಿಕೆ ಈಡೇರಿಸದೆ ಹೋದಲ್ಲಿ ಡಿ.6ರಿಂದ ಬೆಂಗಳೂರಿನಲ್ಲಿ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.


  ನಾಳೆಯಿಂದ ರುಪ್ಸಾ ಅಡಿಯಲ್ಲಿ ಬರುವ ಎಲ್ಲಾ ಶಾಲೆಗಳ ಆನ್ ಲೈನ್ , ಆಫ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ರಾಜ್ಯದ ಅನುದಾನ ರಹಿತ ಖಾಸಗಿ ಶಾಲೆಗಳ ರುಪ್ಸಾ ಒಕ್ಕೂಟದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ರುಪ್ಸಾ ಅಡಿಯಲ್ಲಿ 12,800 ಶಾಲೆಗಳು ನೋಂದಾಯಿತವಾಗಿವೆ.  ಸಂಪೂರ್ಣ ಶೈಕ್ಷಣಿಕ ವರ್ಷವನ್ನು ಸ್ಥಗಿತ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.

  Published by:Latha CG
  First published: