ಶುಕ್ರವಾರ ಅದ್ದೂರಿ ಕನ್ನಡ ರಾಜ್ಯೋತ್ಸವ: ನಾಡಿನಾದ್ಯಂತ ಸಂಭ್ರಮ ಸಡಗರ

ರಾಜ್ಯ ಸರ್ಕಾರ ಆಯೋಜಿಸಲಿರುವ ಕಾರ್ಯಕ್ರಮದಲ್ಲಿ ಆಯಾ ಜಿಲ್ಲೆಯ ಸಂಸದರು, ರಾಜ್ಯಸಭಾ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಹಾಪೌರರು ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಭಾಗವಹಿಸಲಿದ್ದಾರೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

news18-kannada
Updated:October 31, 2019, 7:27 AM IST
ಶುಕ್ರವಾರ ಅದ್ದೂರಿ ಕನ್ನಡ ರಾಜ್ಯೋತ್ಸವ: ನಾಡಿನಾದ್ಯಂತ ಸಂಭ್ರಮ ಸಡಗರ
ಕನ್ನಡ
  • Share this:
ಬೆಂಗಳೂರು(ಅ.31): 64ನೇ ಕನ್ನಡ ರಾಜ್ಯೋತ್ಸವವನ್ನು ಇನ್ನೇನು ಕೆಲವೇ ಗಂಟೆಗಳು ಬಾಕಿಯಿದೆ. ರಾಜ್ಯೋತ್ಸವ ಸಂಭ್ರಮದೊಂದಿಗೆ ಆಚರಿಸಲು ಸಕಲ ಸಿದ್ದತೆಗಳು ನಡೆದಿವೆ. ಕನ್ನಡಪರ ಹೋರಾಟಗಾರ ವಾಟಾಳ್​​​ ನಾಗರಾಜ್​​ ನೇತೃತ್ವದಲ್ಲಿ ನವೆಂಬರ್​​ 1ರ ಶುಕ್ರವಾರ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕನ್ನಡ ಧ್ವಜಾರೋಹಣ ಮಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಮೈಸೂರು ಬ್ಯಾಂಕ್​​ ವೃತ್ತದಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಲಿದ್ದಾರೆ.

ಕನ್ನಡಪರ ಹೋರಾಟಗಾರರು ಆಯೋಜಿಸುವ ಈ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್​​ ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಈ ವೇಳೆ ಮೆರವಣಿಗೆಯಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಹಲವು ಕನ್ನಡಪರ ಹೋರಾಟಗಾರರು ಭಾಗಿಯಾಗಲಿದ್ದಾರೆ.

ಕಳೆದ 55 ವರ್ಷಗಳಿಂದ ಕನ್ನಡ ಚಳವಳಿಯ ಹೋರಾಟಗಾರ ವಾಟಾಳ್ ನಾಗರಾಜ್ ರಾಜ್ಯೋತ್ಸವ ಆಚರಿಸುತ್ತಾ ಬಂದಿದ್ದಾರೆ. ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ವರ್ಷ 1963 ರಿಂದಲೂ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸುತ್ತಿದ್ದಾರೆ.

ಇತ್ತ ಕರ್ನಾಟಕ ಸರ್ಕಾರದಿಂದಲೂ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ. ವಿಧಾನಸೌಧ ಆವರಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭಕ್ಕೆ ಹಲವು ಗಣ್ಯರು ಆಗಮಿಸಲಿದ್ದಾರೆ. ಕನ್ನಡ ಸಂಸ್ಕೃತಿ ಇಲಾಖೆಯಿಂದ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ರಾಜ್ಯೋತ್ಸವದ ದಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತದೆ. ಸರ್ಕಾರದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.

ಇದನ್ನೂ ಓದಿ: ಗುಂಪು ಹತ್ಯೆ ಪ್ರಕರಣ: ಗೋರಕ್ಷಕರಿಂದ ಹತ್ಯೆಗೀಡಾಗಿದ್ದ ಪೆಹ್ಲು ಖಾನ್ ಸೇರಿದಂತೆ ಪುತ್ರರ ವಿರುದ್ಧದ ಕೇಸ್​ ರದ್ದು

ರವೀಂದ್ರ ಕಲಾಕ್ಷೇತ್ರ, ರಂಗ ಶಂಕರ, ನೃಪತುಂಗ ರಸ್ತೆ ಸೇರಿದಂತೆ ವಿವಿಧೆಡೆ ರಾಜ್ಯೋತ್ಸವ ಆಚರಿಸಲಾಗುತ್ತದೆ. ಕರಾವಳಿ ಕರ್ನಾಟಕ, ಉತ್ತರ ಕರ್ನಾಟಕ, ಮುಂಬೈ ಕರ್ನಾಟಕ, ಹಳೆ ಮೈಸೂರು ಭಾಗ ಸೇರಿದಂತೆ ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಮಾಡಲಾಗುತ್ತದೆ. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಮಾರಂಭಕ್ಕೆ ಮೆರುಗು ತುಂಬಲಿದ್ದಾರೆ.

ರಾಜ್ಯ ಸರ್ಕಾರ ಆಯೋಜಿಸಲಿರುವ ಕಾರ್ಯಕ್ರಮದಲ್ಲಿ ಆಯಾ ಜಿಲ್ಲೆಯ ಸಂಸದರು, ರಾಜ್ಯಸಭಾ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಹಾಪೌರರು ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಭಾಗವಹಿಸಲಿದ್ದಾರೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.------------
First published: October 31, 2019, 7:27 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading