• Home
 • »
 • News
 • »
 • state
 • »
 • ಮೈಸೂರಿನ ಎಲ್ಲಾ ಪ್ರವಾಸಿ ತಾಣಗಳು ಸಾರ್ವಜನಿಕ ಮುಕ್ತ; ಜಿಲ್ಲಾಧಿಕಾರಿ ಹಾಕಿದ್ದ ನಿರ್ಬಂಧ ತೆರವು

ಮೈಸೂರಿನ ಎಲ್ಲಾ ಪ್ರವಾಸಿ ತಾಣಗಳು ಸಾರ್ವಜನಿಕ ಮುಕ್ತ; ಜಿಲ್ಲಾಧಿಕಾರಿ ಹಾಕಿದ್ದ ನಿರ್ಬಂಧ ತೆರವು

ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಾಲಯ.

ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಾಲಯ.

ಇಂದಿನಿಂದ ನವೆಂಬರ್ 1ರವರೆಗೆ ನಿರ್ಬಂಧ ವಿಧಿಸಲಾಗುತ್ತು. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಿರ್ಬಂಧ ವಿಧಿಸಿ ಆದೇಶ ಮಾಡಿದ್ದರು. ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ನಂಜನಗೂಡು ದೇವಾಲಯಕ್ಕೆ‌‌ ನಿರ್ಬಂಧ ಹಾಕಲಾಗಿತ್ತು. ಸಿಎಂ ಬಿ.ಎಸ್. ಯಡಿಯೂರಪ್ಪನವರ ಸೂಚನೆ ಮೇರೆಗೆ ಈ ನಿರ್ಬಂಧ ತೆರವು ಮಾಡಲಾಗಿದೆ. ಆ ಮೂಲಕ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಿರ್ಧಾರಕ್ಕೆ ಹಿನ್ನಡೆಯಾಗಿದೆ.

ಮುಂದೆ ಓದಿ ...
 • Share this:

  ಮೈಸೂರು(ಅ.17): ಇಂದು ನಾಡಹಬ್ಬ ದಸರಾಗೆ ವಿದ್ಯುಕ್ತ ಚಾಲನೆ ದೊರೆತಿದೆ.  ಕೊರೋನಾ ಹಿನ್ನೆಲೆ, ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಈ ನಡುವೆ  ದಸರಾ ವೀಕ್ಷಿಸಲು ಸಾಕಷ್ಟು ಪ್ರವಾಸಿಗರು ಬರುವುದರಿಂದ ಸಾಮಾಜಿಕ ಅಂತರ ಕಾಪಾಡುವುದು ಕಷ್ಟ ಹಾಗೂ ಮೈಸೂರಿನಲ್ಲಿ ಕೊರೋನಾ ಹೆಚ್ಚಾಗಿ ಹರಡುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಅ. 17ರಿಂದ ಮೈಸೂರಿನ ಎಲ್ಲ ಪ್ರವಾಸಿ ತಾಣಗಳನ್ನೂ ಬಂದ್ ಮಾಡಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದರು. ಆದರೆ ಇಂದು ದಸರಾ ಉದ್ಘಾಟನಾ ವೇದಿಕೆಯಲ್ಲಿ ಮೈಸೂರು ಉಸ್ತುವಾರಿ ಸಚಿವ ಎಸ್​.ಟಿ.ಸೋಮಶೇಖರ್ ಜಿಲ್ಲಾಧಿಕಾರಿಗಳು ಹಾಕಿದ್ದ ನಿರ್ಬಂಧವನ್ನು ತೆರವುಗೊಳಿಸಿದ್ದಾರೆ. ದಸರಾ ಉದ್ಘಾಟನಾ ವೇದಿಕೆಯಲ್ಲೇ ಈ ಘೋಷಣೆಯನ್ನು ಉಸ್ತುವಾರಿ ಸಚಿವರು ಮಾಡಿದ್ದಾರೆ. ಅಕ್ಟೋಬರ್ 17ರಿಂದ ನವೆಂಬರ್ 1ರವರೆಗೆ ಈ ನಿರ್ಬಂಧ ವಿಧಿಸಲಾಗಿತ್ತು. 


  ಇಂದಿನಿಂದ ನವೆಂಬರ್ 1ರವರೆಗೆ ನಿರ್ಬಂಧ ವಿಧಿಸಲಾಗುತ್ತು. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಿರ್ಬಂಧ ವಿಧಿಸಿ ಆದೇಶ ಮಾಡಿದ್ದರು. ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ನಂಜನಗೂಡು ದೇವಾಲಯಕ್ಕೆ‌‌ ನಿರ್ಬಂಧ ಹಾಕಲಾಗಿತ್ತು. ಕೆ.ಆರ್.ಎಸ್ ಹಾಗೂ ರಂಗನತಿಟ್ಟಿನ ನಿರ್ಬಂಧವನ್ನು ಸಹ ತೆರವು ಮಾಡಲಾಗಿದೆ. ಸಿಎಂ ಬಿ.ಎಸ್. ಯಡಿಯೂರಪ್ಪನವರ ಸೂಚನೆ ಮೇರೆಗೆ ಈ ನಿರ್ಬಂಧ ತೆರವು ಮಾಡಲಾಗಿದೆ. ಆ ಮೂಲಕ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಿರ್ಧಾರಕ್ಕೆ ಹಿನ್ನಡೆಯಾಗಿದೆ.


  ಇನ್ನು, ದಸರಾ ಹಿನ್ನೆಲೆ, ಅಕ್ಟೋಬರ್ 14ರ ಮಧ್ಯರಾತ್ರಿಯಿಂದಲೇ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿತ್ತು. ಇದರ ಜೊತೆಗೆ, ದಸರಾಗೆ ಸಾರ್ವಜನಿಕರ‌‌ನ್ನು ನಿಯಂತ್ರಿಸಲು ಮೈಸೂರು ಜಿಲ್ಲಾಡಳಿತ ಪ್ರವಾಸೋದ್ಯಮವನ್ನೇ ಬಂದ್ ಮಾಡಲಾಗಿತ್ತು. ಅ.17ರಿಂದ ಮೈಸೂರಿನ ಎಲ್ಲ ಪ್ರವಾಸಿ ತಾಣಗಳು ಬಂದ್ ಆಗಲಿವೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದರು.


  Mysuru Dasara 2020: ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಗೆ ಚಾಲನೆ


  ಮೈಸೂರು ಅರಮನೆ, ಮೃಗಾಲಯ, ಚಾಮುಂಡಿ ಬೆಟ್ಟ, ನಂಜನಗೂಡು ದೇವಾಲಯಗಳನ್ನು ಬಂದ್ ಮಾಡಲಾಗುವುದು. ನ.1ರವರೆಗೆ ಎಲ್ಲ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ದಸರಾ ರಜೆಗೆ ಮೈಸೂರಿಗೆ ಬರಬೇಡಿ ಎಂದು ಮೈಸೂರು ಜಿಲ್ಲಾಡಳಿತ ಮನವಿ ಮಾಡಿತ್ತು. ಆದರೆ ಇಂದು ಮೈಸೂರಿನ ಎಲ್ಲಾ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಗೆ ಅವಕಾಶ ಕಲ್ಪಿಸಿದ್ದು, ಜಿಲ್ಲಾಧಿಕಾರಿ ರೋಹಿಣಿ ಅವರ ನಿರ್ಧಾರಕ್ಕೆ ಹಿನ್ನಡೆಯಾಗಿದೆ.


  ಇನ್ನು, ಈ ಬಾರಿಯ ದಸರಾವನ್ನ ವರ್ಚುವಲ್ ದಸರಾವನ್ನಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಮನೆಯಲ್ಲೇ ಕುಳಿತು, ಟಿವಿಯಲ್ಲಿ ದಸರಾ ವೀಕ್ಷಿಸಲು ಕೋರಲಾಗಿದೆ. ಈ ಬಾರಿಯ ದಸರಾ ಉದ್ಘಾಟನೆ ಕಾರ್ಯಕ್ರಮದ ಸ್ವರೂಪ ಬದಲಾಗಿದೆ. ಕೊರೋನಾ ಹಿನ್ನೆಲೆ, ವೈಭವದ ದಸರಾದಲ್ಲಿ ಬೆರಳೆಣಿಕೆಯ ಜನ ಮಾತ್ರ ಕಾಣಿಸುತ್ತಿದ್ದಾರೆ. ಉದ್ಘಾಟನಾ ಕಾರ್ಯಕ್ರಮಕ್ಕೆ 200 ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಚಾಮುಂಡಿಬೆಟ್ಟದ ಕೆಳಭಾಗದಲ್ಲಿ ಪೊಲೀಸ್ ಇಲಾಖೆ ಪರಿಶೀಲಿಸಿ ಅನುಮತಿಸಿದ 200 ಮಂದಿ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.


  ತಾಂತ್ರಿಕ ಸಲಹಾ ಸಮಿತಿ ನೀಡಿರುವ ನಿಯಮದಂತೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಈ ಬಾರಿಯ ದಸರಾ ಉದ್ಘಾಟನೆ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ ಇರಲಿಲ್ಲ. ವರ್ಚುವಲ್ ವಿಡಿಯೋ ಮೂಲಕ‌ ಆನ್‌ಲೈನ್‌ನಲ್ಲಿ ನೇರ ಪ್ರಸಾರ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.

  Published by:Latha CG
  First published: