ಬೆಳಗಾವಿ ಗಡಿ ವಿವಾದದ ಬೆನ್ನಲ್ಲೇ ಭುಗಿಲೆದ್ದ ಉ.ಕ ಪ್ರತ್ಯೇಕ ರಾಜ್ಯದ ಕೂಗು: ಬೀದಿಗಿಳಿದ ಹೋರಾಟಗಾರರು

ಪ್ರತ್ಯೇಕ ರಾಜ್ಯದ ಕೂಗು ತೀವ್ರಗೊಳ್ಳುವ ಮುನ್ನವೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನ ಹರಿಸಬೇಕಿದೆ. ಬೆಳಗಾವಿ ಗಡಿ ಸಮಸ್ಯೆ, ಸುವರ್ಣಸೌಧಕ್ಕೆ ಕಚೇರಿ ಸ್ಥಳಾಂತರ, ಮಹದಾಯಿ ವಿಚಾರದಲ್ಲಿ ರಾಜ್ಯ ಪರ ಗಟ್ಟಿ ನಿಲುವನ್ನು ರಾಜ್ಯ ಸರ್ಕಾರ ತಾಳಬೇಕಿದೆ ಎಂದರು.

news18-kannada
Updated:January 1, 2020, 4:02 PM IST
ಬೆಳಗಾವಿ ಗಡಿ ವಿವಾದದ ಬೆನ್ನಲ್ಲೇ ಭುಗಿಲೆದ್ದ ಉ.ಕ ಪ್ರತ್ಯೇಕ ರಾಜ್ಯದ ಕೂಗು: ಬೀದಿಗಿಳಿದ ಹೋರಾಟಗಾರರು
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕೂಗು
  • Share this:
ಬೆಳಗಾವಿ(ಜ.01): ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿ ವಿಚಾರದಲ್ಲೀಗ ಮತ್ತೆ ಮಹಾರಾಷ್ಟ್ರ ಖ್ಯಾತೆ ತೆಗೆದಿದೆ. ಶಿವಸೇನೆ ಕಾರ್ಯಕರ್ತರು ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ್ದರಿಂದ ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿ ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಶಿವಸೇನೆ ನಡೆ ವಿರುದ್ಧ ಕರವೇ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಇದೇ ಹೊತ್ತಲ್ಲೇ ಬೆಳಗಾವಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬಂದಿದೆ.

ಇಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಬೆಳಗಾವಿ ಹಿರೇಬಾಗೇವಾಡಿಯಲ್ಲಿ ಹೋರಾಟ ನಡೆದಿದೆ. ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಅಡವೇಶ ಇಟಗಿ ನೇತೃತ್ವದಲ್ಲಿ ಈ ಹೋರಾಟ ನಡೆದಿದೆ. ಪ್ರತಿಭಟನಾಕಾರರು ಪ್ರತ್ಯೇಕ ರಾಜ್ಯದ ಧ್ವಜಾರೋಣ ಮಾಡುವ ಯತ್ನ ಮಾಡಿದ್ದಾರೆ. ಈ ವೇಳೆ ಸ್ಥಳಕ್ಕಾಗಮಿಸಿದ ಹಿರೇಬಾಗೇವಾಡಿ ಪೊಲೀಸರು ಹೋರಾಟಗಾರರನ್ನು ವಶಕ್ಕೆ  ಪಡೆದುಕೊಂಡಿದ್ದಾರೆ.

ಪ್ರತ್ಯೇಕ ರಾಜ್ಯದ ಧ್ವಜಾರೋಣಕ್ಕೆ ಪೊಲೀಸರು ಅವಕಾಶ ಕೊಡಲಿಲ್ಲ.ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಅನೇಕ ಹೋರಾಟ ಮಾಡಿದ್ದೇವೆ. ಆದರೇ ನಮ್ಮ ಯಾವುದೇ ಬೇಡಿಕೆಗೆ ಸರ್ಕಾರ ಸ್ಪಂದಿಸಿಲ್ಲ. ಹೀಗಾಗಿ ಪ್ರತ್ಯೇಕ ರಾಜ್ಯದ ಹೋರಾಟ ಆರಂಭಿಸಿದ್ದೇವೆ. ಕಳೆದ ವರ್ಷವೂ ಪ್ರತ್ಯೇಕ ರಾಜ್ಯದ ಧ್ವಜಾರೋಹಣ ಮಾಡಿದ್ದೇವೆ. ಆದರೆ, ಈ ಬಾರಿ ಮಾತ್ರ ಸರ್ಕಾರ ನಮನ್ನು ಬಂಧಿಸಿದೆ ಎಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಅಡಿವೇಶ ಇಟಗಿ ಆರೋಪಿಸಿದ್ದರು.

ಪ್ರತ್ಯೇಕ ರಾಜ್ಯದ ಕೂಗು ತೀವ್ರಗೊಳ್ಳುವ ಮುನ್ನವೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನ ಹರಿಸಬೇಕಿದೆ. ಬೆಳಗಾವಿ ಗಡಿ ಸಮಸ್ಯೆ, ಸುವರ್ಣಸೌಧಕ್ಕೆ ಕಚೇರಿ ಸ್ಥಳಾಂತರ, ಮಹದಾಯಿ ವಿಚಾರದಲ್ಲಿ ರಾಜ್ಯ ಪರ ಗಟ್ಟಿ ನಿಲುವನ್ನು ರಾಜ್ಯ ಸರ್ಕಾರ ತಾಳಬೇಕಿದೆ ಎಂದರು.

ಇದನ್ನೂ ಓದಿ: ಬೆಳಗಾವಿ ಇಂದು, ಎಂದೆಂದೂ ನಮ್ಮದೇ; ಯಾವುದೇ ರಾಜಿ ಇಲ್ಲ; ಸಚಿವ ಸಿ.ಸಿ.ಪಾಟೀಲ್​

2018ರ ಜುಲೈ ತಿಂಗಳಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ, ಸುವರ್ಣಸೌಧಕ್ಕೆ ಕಚೇರಿ ಸ್ಥಳಾಂತರಕ್ಕೆ ಆಗ್ರಹಿಸಿ ಉತ್ತರ ಕರ್ನಾಟಕದ ಸ್ವಾಮಿಜೀಗಳ ನೇತೃತ್ವದಲ್ಲಿ ಬೃಹತ್​​ ಪ್ರತಿಭಟನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಬಿ.ಎಸ್ ಯಡಿಯೂರಪ್ಪ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಉತ್ತರ ಕರ್ನಾಟಕದ ಧ್ವನಿಯಾಗಿ ಕೆಲಸ ಮಾಡುವ ಭರವಸೆ ನೀಡಿದ್ದರು. ಈ ಬೆನ್ನಲ್ಲೇ ಎಚ್.ಡಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಸುವರ್ಣಸೌಧ ಸೇರಿದಂತೆ ಉತ್ತರ ಕರ್ನಾಟಕಕ್ಕೆ 9 ಕಚೇರಿಗಳನ್ನು ಸ್ಥಳಾಂತರ ನಿರ್ಧಾರ ಪ್ರಕಟ ಮಾಡಿತ್ತು. ಈ ಭರವಸೆ ಈಡೇರುವ ಮುನ್ನವೆ ಸಮ್ಮಿಶ್ರ ಸರ್ಕಾರ ಪತನಗೊಂಡಿದ್ದು ಇದೀಗ ಇತಿಹಾಸ.

ಸದ್ಯ  ಬಿ. ಎಸ್ ಯಡಿಯೂರಪ್ಪ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿದ್ದು, ಕಚೇರಿ ಸ್ಥಳಾಂತರ ಬಗ್ಗೆ ಮಾತನಾಡುತ್ತಿಲ್ಲ. 500 ಕೋಟಿ ರೂಪಾಯಿ ಖರ್ಚು ಮಾಡಿ ನಿರ್ಮಿಸಿರುವ ಭವ್ಯ ಸೌಧ ಕೇವಲ ಇಲಿ, ಹೆಗ್ಗಣ, ಹಾವಿನ ವಾಸಸ್ಥಾನವಾಗಿದೆ ಎಂದು ಹೋರಾಟಗಾರ ಶ್ರೀಕಾಂತ್ ಭರಮಣ್ಣನವರ್ ಆರೋಪಿಸಿದ್ದಾರೆ.
First published:January 1, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ