• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • Amit Shah: ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದ; ಅಮಿತ್​ ಶಾ

Amit Shah: ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದ; ಅಮಿತ್​ ಶಾ

ಅಮಿತ್ ಶಾ.

ಅಮಿತ್ ಶಾ.

Sira, RR Nagar by Election Result 2020: ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹಾಗೂ ನಳೀನ್​ ಕುಮಾರ್​ ಕಟೀಲ್​ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದಿಸಿದ್ದಾರೆ

 • Share this:

  ಬೆಂಗಳೂರು (ನ.10): ರಾಜಾ ರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿದೆ. ಆರ್​ಆರ್​ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ದಾಖಲೆ ಅಂತರದಲ್ಲಿ ಗೆಲುವು ಸಾಧಿಸಿದರೆ, ಶಿರಾದಲ್ಲಿ ಇದೇ ಮೊದಲ ಬಾರಿ ಕಮಲ ಅರಳುವ ಮೂಲಕ ಇತಿಹಾಸ ನಿರ್ಮಿಸಿದೆ. ಈ ಎರಡು ಜಯಗಳು ಬಿಜೆಪಿ ನಾಯಕರ ಖುಷಿ ಹೆಚ್ಚಿಸಿದೆ. ಇದಕ್ಕೆ ಬಿಜೆಪಿ ನಾಯಕರು ಮತದಾರರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ಕೂಡ ಬಿಜೆಪಿಗೆ ಜಯಮಾಲೆ ತೊಡಿಸಿದ ಮತದಾರರಿಗೆ ಕನ್ನಡದಲ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಅವರು,  ಬಿಜೆಪಿಗೆ ನಿರಂತರವಾಗಿ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದ ಎಂದು ತಿಳಿಸಿದ್ದಾರೆ. ಅಲ್ಲದೇ ಈ ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹಾಗೂ ನಳೀನ್​ ಕುಮಾರ್​ ಕಟೀಲ್​ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದಿಸಿದ್ದಾರೆ.   ರಾಜ್ಯದಲ್ಲಿ ಬಿಜೆಪಿ ಒಂದಾದರ ಮೇಲೆ ಒಂದು ಉಪಚುನಾವಣೆಗಳಲ್ಲಿ ಜಯ ಸಾಧಿಸುತ್ತಿದ್ದು, ನರೇಂದ್ರ  ಅವರ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ ಎಂದು ತಿಳಿಸಿದ್ದಾರೆ. 

  ಆರ್​ಆರ್​ನಗರ ಹಾಗೂ ಶಿರಾದಲ್ಲಿ ಗೆಲುವು ದಾಖಲಿಸುತ್ತಿದ್ದಂತೆ ಕಾರ್ಯಕರ್ತರಲ್ಲಿ ಕೂಡ ಹರ್ಷ ವ್ಯಕ್ತವಾಗಿದ್ದು, ಸಂಭ್ರಮ ವ್ಯಕ್ತಪಡಿಸಿದ್ದಾರೆ. ಈ ಗೆಲುವಿಗೆ ಸಂತಸ ವ್ಯಕ್ತಪಡಿಸಿರುವ ಬಿಎಸ್​ ಯಡಿಯೂರಪ್ಪ, ಆರ್​ ಅಶೋಕ್​ ಸೇರಿದಂತೆ ಅನೇಕ ಸಚಿವರು ಸಿಹಿ ಹಂಚಿ ಸಂಭ್ರಮಿಸಿದರು.


  ಶಿರಾ ಉಪಚುನಾವಣಾ ಹೊಣೆ ಹೊತ್ತ ಬಿವೈ ರಾಘವೇಂದ್ರ ಬಿಜೆಪಿ ಅಭ್ಯರ್ಥಿ ರಾಜೇಶ್​ ಗೌಡ ಅವರನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಅವರ ಕಾರ್ಯಕ್ಕೆ ಕೂಡ ಮೆಚ್ಚುಗೆ ವ್ಯಕ್ತವಾಗಿದೆ. ಕೆಆರ್​ ಪೇಟೆ ಚುನಾವಣೆ ಬಳಿಕ ಶಿರಾದಲ್ಲಿ ಅವರ ಕಾರ್ಯತಂತ್ರ ಫಲಿಸಿದೆ.

  Published by:Seema R
  First published: