• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Amit Shah: ಪ್ರವೀಣ್ ನೆಟ್ಟಾರು ಹತ್ಯೆ, ಕಾರ್ಯಕರ್ತರ ರಾಜೀನಾಮೆ ಶಾಕ್! ಬಸವರಾಜ ಬೊಮ್ಮಾಯಿ ಮೇಲೆ ಅಮಿತ್ ಶಾ ಅಸಮಾಧಾನ

Amit Shah: ಪ್ರವೀಣ್ ನೆಟ್ಟಾರು ಹತ್ಯೆ, ಕಾರ್ಯಕರ್ತರ ರಾಜೀನಾಮೆ ಶಾಕ್! ಬಸವರಾಜ ಬೊಮ್ಮಾಯಿ ಮೇಲೆ ಅಮಿತ್ ಶಾ ಅಸಮಾಧಾನ

ಅಮಿತ್ ಶಾ-ಬಸವರಾಜ ಬೊಮ್ಮಾಯಿ ಮಾತುಕತೆ

ಅಮಿತ್ ಶಾ-ಬಸವರಾಜ ಬೊಮ್ಮಾಯಿ ಮಾತುಕತೆ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ, ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ, ಆನಂತರದ ಬೆಳವಣಿಗೆಗಳು ಇತ್ಯಾದಿಗಳ ಬಗ್ಗೆ ಅಮಿತ್ ಶಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಅಮಿತ್ ಶಾ ಅವರನ್ನು ಸಮಾಧಾನಿಸಲು ಸಿಎಂ ಯತ್ನಿಸಿದ್ದಾರೆ.

  • Share this:

ಬೆಂಗಳೂರು: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಸಚಿವ (Central Minister) ಅಮಿತ್ ಶಾ (Amit Shah) ಅವರು ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಅವರ ವಿರುದ್ಧ ಗರಂ ಆಗಿದ್ದಾರೆ ಅಂತ ಮೂಲಗಳು ತಿಳಿಸಿವೆ. ದಕ್ಷಿಣ ಕನ್ನಡದ (Dakshina Kannada) ಬಿಜೆಪಿ ಕಾರ್ಯಕರ್ತ (BJP Worker) ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ (Praveen Nettar Murder Case), ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ (Resign), ಆನಂತರದ ಬೆಳವಣಿಗೆಗಳು ಇತ್ಯಾದಿಗಳ ಬಗ್ಗೆ ಅಮಿತ್ ಶಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಅಮಿತ್ ಶಾ ಅವರನ್ನು ಸಮಾಧಾನಿಸಲು ಸಿಎಂ ಯತ್ನಿಸಿದ್ದಾರೆ. ಆದರೆ ಇದಕ್ಕೆ ಸಮಾಧಾನಗೊಳ್ಳದ ಅಮಿತ್ ಶಾ, ಇದು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ. ಅಮಿತ್  ಶಾ ಅವರನ್ನು ಭೇಟಿಯಾದ ಬಸವರಾಜ ಬೊಮ್ಮಾಯಿ, ಸುಮಾರು 20 ನಿಮಿಷಗಳ ಕಾಲ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.


ಬಸವರಾಜ ಬೊಮ್ಮಾಯಿ ವಿರುದ್ಧ ಅಮಿತ್ ಶಾ ಅಸಮಾಧಾನ


ಸಿಎಂ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸಚಿವ ಅಮಿತ್ ಶಾ ಜೊತೆ ಸುಮಾರು 20 ನಿಮಿಷಗಳ ಕಾಲ ಮಹತ್ವದ ಮಾತುಕತೆ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಹಾಗೂ ನಂತರದ ಬೆಳವಣಿಗೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.


ಕಾರ್ಯಕರ್ತರ ರಾಜೀನಾಮೆಯಿಂದ ಅಸಮಾಧಾನ


ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಇದೇ ಮೊದಲ ಬಾರಿಗೆ ಪಕ್ಷಕ್ಕೆ ಮುಜುಗರ ಆಗಿದೆ. ಈ ಹಿಂದೆ ಯಾವತ್ತು ಇಂತಹ ಪರಿಸ್ಥಿತಿ ಬಂದಿರಲಿಲ್ಲ. ಇದು ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಯಿತು. ಇದರಿಂದ ಪಕ್ಷಕ್ಕೆ ಸಾಕಷ್ಟು ಡ್ಯಾಮೇಜ್ ಆಯಿತು ಅಂತ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: Amith Sha- Bsy: ಬಿಎಸ್​ವೈಯೇ ಕಿಂಗ್- ಮಾತಿಗೆ ಯಡಿಯೂರಪ್ಪರನ್ನೇ ಕರೆಸಿಕೊಂಡ ಚಾಣಕ್ಯ


ಸಿಎಂಗೆ ಅಮಿತ್ ಶಾ ಖಡಕ್ ಸೂಚನೆ


ಕೂಡಲೇ ಕಾರ್ಯಕರ್ತರ ವಿಶ್ಚಾಸಗಳಿಸಲು ನೀವು ಕ್ರಮಕೈಗೊಳ್ಳಬೇಕಿತ್ತು ಅಂತ ಅಮಿತ್ ಶಾ ಹೇಳಿದ್ರು. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಸಮರ್ಥನೆಗೆ ಮುಂದಾದ್ರು. ತಾವು ಕೈಗೊಂಡ ಕ್ರಮಗಳ ಬಗ್ಗೆ ಹೇಳಿದ್ರು.  ಇದಕ್ಕೆ ಒಪ್ಪದ ಅಮಿತ್ ಶಾ, ಇಡೀ ಪ್ರಕರಣವನ್ನು ನೀವು ನಿರ್ವಹಿಸಿದ ರೀತಿ ಪ್ರತಿಪಕ್ಷಗಳಿಗೆ ಆಹಾರವಾಗಿದೆ. ಇದು ಪುನರಾವರ್ತನೆ ಆಗದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಕಾರ್ಯಕರ್ತರೆ ಪಕ್ಷದ ಜೀವಾಳ, ಕಾರ್ಯರ್ತರ ಭಾವನೆಗಳಿಗೆ ನೋವಾಗದಂತೆ ಕ್ರಮಗಳನ್ನು ಕೈಗೊಳ್ಳಿ ಎಂದಿದ್ದಾರೆ. ಇನ್ನು ಮುಂದೆ ರಾಜೀನಾಮೆ ನೀಡಿರುವವರ ಮನವೊಲಿಸಿ, ಪಕ್ಷಕ್ಕೆ ವಾಪಸ್ ಕರೆ ತನ್ನಿ ಅಂತ ಸಿಎಂಗೆ ಅಮಿತ್ ಶಾ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


ಅಮಿತ್ ಶಾ ಭೇಟಿ ಹಿಂದಿನ ಉದ್ದೇಶಗಳೇನು?


ರಾಜ್ಯದಲ್ಲಿ ಉಂಟಾಗಿರುವ ಬೆಳವಣಿಗೆಗಳ ಬಗ್ಗೆ ಅಮಿತ್ ಶಾ ಸಂಪೂರ್ಣ ವರದಿ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಪಕ್ಷದೊಳಗೆ ಉಂಟಾಗಿರುವ ಅಸಮಧಾನ ಶಮನಕ್ಕೆ ಮುಂದಾಗಬಹುದು.ಈ ಅಸಮಾಧಾನ ಶಮನಗೊಳಿಸದೇ ಇದ್ರೆ ಇದನ್ನು ವಿರೋಧ ಪಕ್ಷಗಳು ಇದನ್ನೇ ಲಾಭವಾಗಿ  ಬಳಸಿಕೊಳ್ಳಬಹುದು. ಹಾಗಾಗಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಬಹುದು ಎನ್ನಲಾಗಿದೆ.


ಇದನ್ನೂ ಓದಿ: Rahul Gandhi ಪ್ರಧಾನಿಯಾಗುತ್ತಾರೆ ಎಂದ ಸ್ವಾಮೀಜಿ! ಮುರುಘಾ ಶರಣರಿಂದ ಆಕ್ಷೇಪ ವ್ಯಕ್ತವಾಗಿದ್ದೇಕೆ?


ಏನೇನು ಚರ್ಚೆ ನಡೆಯಬಹುದು?


ನಳಿನ್ ಕುಮಾರ್ ಕಟೀಲ್ ಅವರ ರಾಜ್ಯಾಧ್ಯಕ್ಷ ಅವಧಿ ಮುಗಿಯಲಿದೆ. ಹಾಗಾಗಿ ಇವರನ್ನೇ ಮುಂದುವರಿಸಬೇಕಾ ಅಥವಾ ಹೊಸಬರನ್ನು ನೇಮಕ ಮಾಡಬೇಕಾ? ಎಂಬುದರ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ. ಪಕ್ಷಕ್ಕೆ ಡ್ಯಾಮೇಜ್ ಆಗದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಬೇಕು ಎಂದು ಎಚ್ಚರಿಕೆ ನೀಡುವ ಸಾಧ್ಯತೆಗಳಿವೆ. ಇನ್ನು ಇದೇ ವೇಳೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ ಅಂತ ಹೇಳಲಾಗುತ್ತಿದೆ.

top videos
    First published: