ನವದೆಹಲಿ; ಜನವರಿ 15ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಅಮಿತ್ ಶಾ ಅವರು, ಈ ಭೇಟಿ ವೇಳೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಮಿತ್ ಶಾ ಬಂದು ಹೋದ ಮೇಲೆ ಸಂಪುಟ ಪುನಾರಚನೆ ನಡೆಯಲಿದೆ ಎಂದು ಬಿಜೆಪಿ ಮೂಲಗಳು ಮಾಹಿತಿ ನೀಡಿವೆ. ಭದ್ರಾವತಿ, ಹೊಸಪೇಟೆ ಮತ್ತು ಬೆಂಗಳೂರಿಗೆ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಭದ್ರಾವತಿಯಲ್ಲಿ ಸಿಆರ್ಪಿಎಫ್ ತರಬೇತಿ ಕೇಂದ್ರ ಉದ್ಘಾಟನೆ ಮಾಡಲಿದ್ದಾರೆ.
ಕಳೆದ ಎರಡು ಎರಡು ಮೂರು ತಿಂಗಳಿನಿಂದ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕೂಗು ಜೋರಾಗಿದೆ. ರಾಜ್ಯದಲ್ಲಿ ಉಪಚುನಾವಣೆ ನಡೆದ ಬಳಿಕ ವಿಸ್ತರಣೆ ಕಾವು ಮತ್ತಷ್ಟು ಹೆಚ್ಚಾಯಿತು. ಈ ಸಂಬಂಧ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಹ ದೆಹಲಿಗೆ ತೆರಳಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ್ದರು. ಬಳಿಕ ಅಮಿತ್ ಶಾ ಅವರ ಭೇಟಿಗೂ ಯತ್ನಿಸಿದ್ದರು. ಆದರೆ, ಶಾ ಭೇಟಿ ಸಾಧ್ಯವಾಗದೆ ಬರಿಗೈಲಿ ವಾಪಸ್ಸಾಗಿದ್ದರು.
ಇದನ್ನು ಓದಿ: ರಾಜ್ಯದ ಜನರ ಬಗ್ಗೆ ಕಾಳಜಿ ಇಲ್ಲದ ನಾಲಾಯಕ್ ಮಂತ್ರಿ ಸುಧಾಕರ್; ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ