ಅಮೂಲ್ಯ ದೇಶದ್ರೋಹ ಪ್ರಕರಣ; ಕಾರ್ಯಕ್ರಮ ಆಯೋಜಕ ಇಮ್ರಾನ್ ಪಾಷಾ ತೀವ್ರ ವಿಚಾರಣೆ

ಮುಂದಿನ ದಿನಗಳಲ್ಲಿ ಇಮ್ರಾನ್ ಪಾಷಾ ಅವರನ್ನು ಮತ್ತೆ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಜನರನ್ನು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಯುವತಿ ಅಮೂಲ್ಯ.

ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಯುವತಿ ಅಮೂಲ್ಯ.

 • Share this:
  ಬೆಂಗಳೂರು (ಫೆಬ್ರವರಿ 22); ಗುರುವಾರ ನಗರದ ಫ್ರೀಡಂ ಪಾರ್ಕ್​ನಲ್ಲಿ ಆಯೋಜಿಸಲಾಗಿದ್ದ ಸಿಎಎ ವಿರೋಧಿ ಹೋರಾಟದಲ್ಲಿ ಅಮೂಲ್ಯ ಪಾಕಿಸ್ತಾನದ ಪರ ಘೋಷಣೆ ಕೂಗುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ಇವರ ಮೇಲೆ ಇದೀಗ ದೇಶದ್ರೋಹದ ಪ್ರಕರಣ ದಾಖಲಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಅಲ್ಲದೆ, ಕಾರ್ಯಕ್ರಮದ ಆಯೋಜಕರನ್ನೂ ಇಂದು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

  ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿದವರಲ್ಲಿ ಪಾದರಾಯಣಪುರ ಕಾರ್ಪೋರೇಟರ್ ಇಮ್ರಾನ್ ಪಾಷ ಪ್ರಮುಖರು. ಹೀಗಾಗಿ ಇಂದು ಮಧ್ಯಾಹ್ನ ಇವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆ ನಡೆಸಿರುವ ಎಸಿಪಿ ಮಹಾಂತರೆಡ್ಡಿ ಮತ್ತು ಇನ್ಸ್​ಪೆಕ್ಟರ್​ ಸುರೇಶ್ ಇಮ್ರಾನ್ ಅವರಿಂದ ಮಹತ್ವ ವಿಚಾರಗಳನ್ನು ಕಲೆಹಾಕಿದ್ದಾರೆ ಎನ್ನಲಾಗುತ್ತಿದೆ.

  ಈ ಕಾರ್ಯಕ್ರಮದ ಆಯೋಜನೆಗೆ ಅನುಮತಿ ನೀಡುವ ಮುನ್ನವೇ ಪೊಲೀಸ್ ಇಲಾಖೆ ಹತ್ತಾರು ಷರತ್ತುಗಳನ್ನು ವಿಧಿಸಿಯೇ ಅನುಮತಿ ನೀಡಿತ್ತು. ಆದರೆ, ಈ ಎಲ್ಲಾ ಷರತ್ತುಗಳನ್ನು ಕಾರ್ಯಕ್ರಮದಲ್ಲಿ ಉಲ್ಲಂಘನೆ ಮಾಡಿರುವ ಪರಿಣಾಮ ಈ ಅನುಮತಿ ಪತ್ರವನ್ನು ಮುಂದಿಟ್ಟುಕೊಂಡೆ ಕಾರ್ಪೊರೇಟರ್ ಇಮ್ರಾನ್ ಪಾಷಾ ಅವರ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

  ಮುಂದಿನ ದಿನಗಳಲ್ಲಿ ಇಮ್ರಾನ್ ಪಾಷಾ ಅವರನ್ನು ಮತ್ತೆ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಜನರನ್ನು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

  ಇದನ್ನೂ ಓದಿ : ಶೀಘ್ರದಲ್ಲಿ ಸಿಎಂ ಅಧಿಕೃತ ನಿವಾಸಕ್ಕೆ ಬಿಎಸ್​ವೈ; ಸಿದ್ದರಾಮಯ್ಯ ಇದ್ದ ಸರ್ಕಾರಿ ಬಂಗಲೆಗೆ ಯಡಿಯೂರಪ್ಪ ಪ್ರವೇಶ
  First published: