• Home
 • »
 • News
 • »
 • state
 • »
 • Crime News| ಬೆಂಗಳೂರಿನಲ್ಲಿ ಹಾಡಹಗಲೇ ವೃದ್ಧ ದಂಪತಿಗಳ ಡಬಲ್ ಮರ್ಡರ್; ಬೆಚ್ಚಿಬಿತ್ತು ರಾಜಧಾನಿ!

Crime News| ಬೆಂಗಳೂರಿನಲ್ಲಿ ಹಾಡಹಗಲೇ ವೃದ್ಧ ದಂಪತಿಗಳ ಡಬಲ್ ಮರ್ಡರ್; ಬೆಚ್ಚಿಬಿತ್ತು ರಾಜಧಾನಿ!

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಘಟನಾ ಸ್ಥಳಕ್ಕೆ ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುತ್ತಿಗೆ ಕುಯ್ದು ಹಾಗೂ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದ್ದು, ಯಾರೊ ಪರಿಚಯಸ್ಥರು ಬಂದು ಹತ್ಯೆ ಮಾಡಿರುವ ಶಂಕೆ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.

 • Share this:

  ಬೆಂಗಳೂರು (ಆಗಸ್ಟ್​ 20); ಕೊರೋನಾ ಲಾಕ್​ಡೌನ್ ಕಾರಣಕ್ಕೆ ಅನಿವಾರ್ಯವಾಗಿ ಇಷ್ಟು ದಿನ ಅಪರಾಧ ಘಟನೆಗಳಿಗೆ ಸ್ವಲ್ಪ ಮಟ್ಟಿಗೆ ಬ್ರೇಕ್ ಬಿದ್ದಿತ್ತು. ಆದರೆ, ಬೆಂಗಳೂರಿನಲ್ಲಿ ಇದೀಗ ಮತ್ತೆ ಅಪರಾಧಗಳ ಸಂಖ್ಯೆ ಮಿತಿಮೀರುತ್ತಿದೆ. ಇಂದು ನಗರದಲ್ಲಿ ಹಾಡಹಗಲೇ ಮನೆಯಲ್ಲೇ ವೃದ್ಧ ದಂಪತಿಗಳ ಡಬಲ್ ಮರ್ಡರ್ ಮಾಡಲಾಗಿದ್ದು, ಈ ಘಟನೆಗೆ ಇಡೀ ರಾಜಧಾನಿಯ ಜನ ಬೆಚ್ಚಿಬೀಳುವಂತಾಗಿದೆ. ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯ ಕಾಶಿನಗರದಲ್ಲಿ ಘಟನೆ ನಡೆದಿದ್ದು, ಕೊಲೆಯಾದ ದಂಪತಿಗಳನ್ನು ಪಿ. ಶಾಂತರಾಜು (65) ಹಾಗೂ ಪ್ರೇಮಲತಾ (61) ಎಂದು ಗುರುತಿಸಲಾಗಿದೆ. ಇಬ್ಬರನ್ನೂ ಚಾಕುವಿನಿಂದ ಕತ್ತು ಸೀಳಿ ಬರ್ಬರವಾಗಿ ಹತ್ಯೆಮಾಡಲಾಗಿದೆ.


  ಈ ದಂಪತಿಗಳಿಗೆ ಮಕ್ಕಳಿರಲಿಲ್ಲ. ಹೀಗಾಗಿ ಶಾಂತರಾಜು‌ ಮತ್ತು ಪ್ರೇಮಲತ ಇಬ್ಬರೇ ಮನೆಯಲ್ಲಿ ಒಟ್ಟಿಗೆ ವಾಸ ಮಾಡುತ್ತಿದ್ದರು. ಆದರೆ, ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣ ದೋಚುವ ಸಲುವಾಗಿಯೇ ಪರಿಚಯಸ್ಥರಿಂದಲೇ ಕೊಲೆಯಾಗಿರುವ ಶಂಕೆ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


  ಘಟನಾ ಸ್ಥಳಕ್ಕೆ ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುತ್ತಿಗೆ ಕುಯ್ದು ಹಾಗೂ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದ್ದು, ಯಾರೊ ಪರಿಚಯಸ್ಥರು ಬಂದು ಹತ್ಯೆ ಮಾಡಿರುವ ಶಂಕೆ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.


  ಕೊಲೆ ನಡೆಯುವ ಮುನ್ನ ಮನೆಗೆ ಮೂರು ಜನ ಬಂದು ಟೀ ಕುಡಿದು ಹೋಗಿರುವ ಸಾಕ್ಷ್ಯಗಳು ಮನೆಯಲ್ಲಿ ದೊರೆತಿದ್ದು, ಪೊಲೀಸರ ಸಂಶಯವನ್ನು ಮತ್ತಷ್ಟು ಹೆಚ್ಚಿಸಿದೆ. ಹಣ ಹಾಗೂ ಚಿನ್ನಾಭರಣಕ್ಕಾಗಿಯೇ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ.


  ಇದನ್ನೂ ಓದಿ: Afghanistan Crisis: ಹುಡುಕಿದ ಪತ್ರಕರ್ತ ಸಿಕ್ಕಿಲ್ಲವೆಂದು ಆತನ ಸಂಬಂಧಿಗಳನ್ನು ಕೊಂದ ತಾಲಿಬಾನಿಗಳು!


  ತನಿಖೆ ವೇಳೆ ಕೊಲೆಗೀಡಾಗಿರುವ ಶಾಂತರಾಜು ಬಿಎಂಟಿಸಿ ಮೆಕಾನಿಕ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು ಎಂದು ತಿಳಿದುಬಂದಿದೆ. ಇನ್ನೂ ಕೊಲೆಯಾದ ದಂಪತಿಗಳಿಗೆ ಮಕ್ಕಳಿಲ್ಲದ ಕಾರಣ ಅವರು, ಓರ್ವ ಸಾಕು ಮಗಳನ್ನು ಬೆಳೆಸಿದ್ದಾಗಿಯೂ ಹೇಳಲಾಗುತ್ತಿದೆ. ಈ ಎಲ್ಲಾ ಕೋನಗಳಿಂದ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.


  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

  Published by:MAshok Kumar
  First published: