ವಿಧಾನಸಭೆ ಉಪಾಧ್ಯಕ್ಷರಾಗಿ ಆನಂದ ಮಾಮನಿ ಅವಿರೋಧ ಆಯ್ಕೆ; ಸ್ಪೀಕರ್ ಕಾಗೇರಿ ಘೋಷಣೆ

ಕೃಷ್ಣ ರೆಡ್ಡಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಸವದತ್ತಿ ಶಾಸಕ ಆನಂದ ಮಾಮನಿ ಮತ್ತು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ನಡುವೆ ಪೈಪೋಟಿ ನಡೆದಿತ್ತು.

news18-kannada
Updated:March 24, 2020, 10:52 AM IST
ವಿಧಾನಸಭೆ ಉಪಾಧ್ಯಕ್ಷರಾಗಿ ಆನಂದ ಮಾಮನಿ ಅವಿರೋಧ ಆಯ್ಕೆ; ಸ್ಪೀಕರ್ ಕಾಗೇರಿ ಘೋಷಣೆ
ಬಿಜೆಪಿ ಶಾಸಕ ಆನಂದ ಮಾಮನಿ
  • Share this:
ಬೆಂಗಳೂರು (ಮಾ. 24): ಕರ್ನಾಟಕ ವಿಧಾನಸಭೆಯ 24ನೇ ಡೆಪ್ಯುಟಿ ಸ್ಪೀಕರ್ ಆಗಿ ಬಿಜೆಪಿ ಅಭ್ಯರ್ಥಿ ಆನಂದ ಮಾಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸ್ಪೀಕರ್ ಕಾಗೇರಿ ಅವರು ಇಂದಿನ ಅಧಿವೇಶನದಲ್ಲಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ.

ವಿಧಾನಸಭಾ ಅಧಿವೇಶನದಲ್ಲಿ ಇಂದು ವಿಧಾನಸಭೆಯ ಡೆಪ್ಯುಟಿ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಉಪಾಧ್ಯಕ್ಷರಾಗಿ ಬಿಜೆಪಿಯ ಆನಂದ ಮಾಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸಭೆ ಉಪಾಧ್ಯಕ್ಷರನ್ನಾಗಿ ಆನಂದ ಮಾಮನಿ ಅವರನ್ನು ಆಯ್ಕೆ ಮಾಡಿ ಘೋಷಣೆ ಮಾಡಿದ್ದಾರೆ. ಪ್ರತಿಪಕ್ಷವಾದ ಕಾಂಗ್ರೆಸ್ ಶಾಸಕರ ಅನುಪಸ್ಥಿತಿಯಲ್ಲೇ ಡೆಪ್ಯುಟಿ ಸ್ಪೀಕರ್ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಜನರು ಮುಗಿಬಿದ್ದ ಹಿನ್ನೆಲೆ, ಇಂದಿರಾ ಕ್ಯಾಂಟೀನ್ ಕೂಡ ಬಂದ್

ಸವದತ್ತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಆನಂದ ಮಾಮನಿ ಡೆಪ್ಯುಟಿ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಕೃಷ್ಣ ರೆಡ್ಡಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಸವದತ್ತಿ ಶಾಸಕ ಆನಂದ ಮಾಮನಿ ಮತ್ತು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ನಡುವೆ ಪೈಪೋಟಿ ನಡೆದಿತ್ತು. ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಬಿಜೆಪಿ ನಾಯಕರು ಆನಂದ ಮಾಮನಿ ಅವರನ್ನು ಆಯ್ಕೆ ಮಾಡುವಂತೆ ಒತ್ತಡ ಹೇರಿದ್ದರು.
First published: March 24, 2020, 10:52 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading