ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಮಣಿದ ಸರ್ಕಾರ; ಡಿ.16ಕ್ಕೆ ಮುಖ್ಯ ಕಾರ್ಯದರ್ಶಿ ಜೊತೆ ಸಭೆ ನಿಗದಿ

ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರಕ್ಕೆ ಸಂಬಂಧಿಸಿದಂತೆ, ದೆಹಲಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ ನೀಡಿದ್ದಾರೆ. ನಾನೂ ಅಂಗನವಾಡಿ ಕಾರ್ಯಕರ್ತೆಯರ ಪರವಾಗಿದ್ದೇನೆ. ಕಾರ್ಯಕರ್ತೆಯರ ಮನವಿಗೆ ಸ್ಪಂದಿಸಿದ್ದೇವೆ. ಎಲ್​ಕೆಜಿ ಮತ್ತು ಯುಕೆಜಿಯನ್ನು ಶಿಕ್ಷಣ ಇಲಾಖೆಗೆ ವರ್ಗಾಯಿಸುವುದಕ್ಕೆ ವಿರೋಧವಿದೆ.

ಪ್ರತಿಭಟನಾ ನಿರತ ಅಂಗನವಾಡಿ ಕಾರ್ಯಕರ್ತೆಯರು

ಪ್ರತಿಭಟನಾ ನಿರತ ಅಂಗನವಾಡಿ ಕಾರ್ಯಕರ್ತೆಯರು

  • Share this:
ತುಮಕೂರು(ಡಿ.11): ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರಕ್ಕೆ ಕೊನೆಗೂ ಸರ್ಕಾರ ಮಣಿದಿದೆ.  ಸರ್ಕಾರದ ಮುಖ್ಯ ಕಾರ್ಯದರ್ಶಿ ಜೊತೆ ಚರ್ಚೆ ನಡೆಸಲು ಅಂಗನಾಡಿ ಕಾರ್ಯಕರ್ತೆಯರಿಗೆ ಅನುಮತಿ ನೀಡಲಾಗಿದೆ.  

ಡಿ. 16ರ ಬೆಳಗ್ಗೆ 11ಕ್ಕೆ ವಿಧಾನಸೌಧದ ಕೊಠಡಿ ಸಂಖ್ಯೆ 320ರಲ್ಲಿ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ ಹಾಗೂ ಯು.ಕೆ.ಜಿ ಪ್ರಾರಂಭಿಸುವ ಕುರಿತಾದ ಆದೇಶಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗುತ್ತದೆ.  ಶಿಕ್ಷಣ ಇಲಾಖೆ ಹೊರಡಿಸಿದ್ದ ಈ ಆದೇಶದ ಸಾಧಕ ಬಾಧಕಗಳ ಕುರಿತು ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.

ಸದ್ಯ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಜೊತೆ  ಸಭೆ  ನಡೆಸಿದ ಬಳಿಕ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ.

ಹುಳಿಮಾವು ಕೆರೆಕಟ್ಟೆ ಒಡೆದ ಪ್ರಕರಣ; ಇಬ್ಬರು ಹೋಂಗಾರ್ಡ್​​ಗಳ ಬಂಧನ

ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರಕ್ಕೆ ಸಂಬಂಧಿಸಿದಂತೆ, ದೆಹಲಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ ನೀಡಿದ್ದಾರೆ. ನಾನೂ ಅಂಗನವಾಡಿ ಕಾರ್ಯಕರ್ತೆಯರ ಪರವಾಗಿದ್ದೇನೆ. ಕಾರ್ಯಕರ್ತೆಯರ ಮನವಿಗೆ ಸ್ಪಂದಿಸಿದ್ದೇವೆ. ಎಲ್​ಕೆಜಿ ಮತ್ತು ಯುಕೆಜಿಯನ್ನು ಶಿಕ್ಷಣ ಇಲಾಖೆಗೆ ವರ್ಗಾಯಿಸುವುದಕ್ಕೆ ವಿರೋಧವಿದೆ. ನನ್ನ ಇಲಾಖೆಯಲ್ಲಿಯೇ ಉಳಿಸಿಕೊಳ್ಳುವ ಯತ್ನ ಮಾಡುತ್ತಿದ್ದೇನೆ. ಅಂಗನವಾಡಿ ಶಿಕ್ಷಕರಿಗೆ ತರಬೇತಿ ನೀಡುತ್ತೇವೆ. ಪ್ರತಿಭಟನಾಕಾರರನ್ನು ಯಾರೂ ತಡೆದಿಲ್ಲ. ಡಿ. 16ರಂದು ಪ್ರತಿಭಟನಾಕಾರರ ಜೊತೆ ಸಭೆ ನಡೆಸಲಿದ್ದೇವೆ. ಪ್ರತಿಭಟನಾಕಾರರು ಹಠ ಬಿಟ್ಟು ಸಹಕರಿಸಬೇಕು. ನಾನು ಪ್ರತಿಭಟನಾಕಾರರ ಜೊತೆಗೆ ಇದ್ದೇನೆ ಎಂದು ಸಚಿವೆ ಭರವಸೆ ನೀಡಿದರು.

ಅಂಗನಾಡಿ ಕಾರ್ಯಕರ್ತೆಯರ ಬೇಡಿಕೆಗಳೇನು?

  • ಅಂಗನವಾಡಿಗಳಿಗೆ ಎಲ್​​ಕೆಜಿ ಮತ್ತು ಯುಕೆಜಿ ಸೇರಿಸಬೇಕು

  • ಮಾಸಿಕ‌ 21 ಸಾವಿರ ಸಂಬಳ ನೀಡಬೇಕು

  • ಸೇವಾ ಜ್ಯೇಷ್ಠತೆ ಆಧಾರದ ಮೇಲೆ ವೇತನ ನೀಡಬೇಕು

  • ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ ನೀಡಬೇಕು

  • ಅಂಗನವಾಡಿ ಕೇಂದ್ರಗಳನ್ನ ಮೇಲ್ದರ್ಜೆಗೆ ಏರಿಸಬೇಕು.


ಶಾಸಕಿ ಅನಿತಾ ಕುಮಾರಸ್ವಾಮಿಗೆ ಘೇರಾವ್​ ಹಾಕಿದ ಜೆಡಿಎಸ್​ ಕಾರ್ಯಕರ್ತರು

ತುಮಕೂರಿನ ಅಮಾನಿಕೆರೆ ಬಳಿ ಪ್ರತಿಭಟನೆಯಲ್ಲಿ ನಿರತರಾಗಿದ್ದ ಅಂಗನವಾಡಿ ಕಾರ್ಯಕರ್ತೆಯರನ್ನು ಪೊಲೀಸರು ತಡೆದಿದ್ದರು. ತುಮಕೂರಿನಿಂದ ಬೆಂಗಳೂರಿಗೆ ಪಾದಾಯಾತ್ರೆ ತೆರಳಲು ಕಾರ್ಯಕರ್ತೆಯರು ನಿರ್ಧರಿಸಿದ್ದರು. ಆದರೆ ಬೆಂಗಳೂರು ಚಲೋ ಜಾಥಾಗೆ ಪೊಲೀಸರು ತಡೆಒಡ್ಡಿದ್ದರು. ಬಳಿಕ ತುಮಕೂರಿನ ಗಾಜಿನ ಮನೆಯಲ್ಲಿ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ‌.ರಾಕೇಶ್ ಕುಮಾರ್, ಎಸ್ಪಿ ಡಾ. ವಂಶಿಕೃಷ್ಣ, ಶಾಸಕ ಜ್ಯೋತಿಗಣೇಶ್‌ ಆಗಮಿಸಿದ್ದರು.ಈ ವೇಳೆ ಮಾತನಾಡಿದ ಡಿಸಿ,  ಡಿ.16ರಂದು ಮುಖ್ಯ ಕಾರ್ಯದರ್ಶಿ ಜೊತೆ ಸಭೆ ಇದೆ. ಶಿಕ್ಷಣ ಇಲಾಖೆ, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಅಂಗನವಾಡಿ ಯೂನಿಯನ್ ಪ್ರಮುಖರ ಜತೆ ಸಭೆ ನಡೆಸಲಾಗುತ್ತದೆ. ಈ ಸಭೆಯಲ್ಲಿ ಅಂತಿಮ ನಿರ್ಧಾರ ಆಗಲಿದೆ ಎಂದು ಹೇಳಿದ್ದರು.

ಶಾಸಕ ಜ್ಯೋತಿಗಣೇಶ್ ಮಾತನಾಡಿ, ಇದು ಎರಡು ಇಲಾಖೆಗೆ ಸಂಬಂಧಿಸಿದ ವಿಚಾರ. ಸಿಎಂ ಯಡಿಯೂರಪ್ಪ ನಿಮ್ಮ ಸಮಸ್ಯೆಗೆ ಸ್ಪಂದಿಸಲಿದ್ದಾರೆ. ರಾಜ್ಯ ಸರ್ಕಾರ ನಿಮ್ಮನ್ನು ಉಳಿಸಿಕೊಳ್ಳುವ ಕೆಲಸ ಮಾಡಲಿದೆ. ಸಿಎಂ ಮಾತಿಗೆ ಸ್ಪಂದಿಸಿ ಪ್ರತಿಭಟನೆ ಕೈ ಬಿಡುವಂತೆ ಶಾಸಕ ಜ್ಯೊತಿಗಣೇಶ್ ಮನವಿ ಮಾಡಿದ್ದರು.

ಪೌರತ್ವ ತಿದ್ದುಪಡಿ ಕಾಯ್ದೆ; ಈಶಾನ್ಯ ಭಾರತದಲ್ಲೆಡೆ ಎಲ್ಲೆಂದರಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನೆ, ಭುಗಿಲೆದ್ದ ಹಿಂಸಾಚಾರ..!
First published: