ಮಕ್ಕಳಿಗೆ ಸಿಗಬೇಕಾದ ಪೌಷ್ಟಿಕ ಆಹಾರ ಅಂಗನವಾಡಿ ಕಾರ್ಯಕರ್ತೆಯರ ಮನೆಗೆ

ಪೌಷ್ಠಿಕ ಆಹಾರ

ಪೌಷ್ಠಿಕ ಆಹಾರ

ಇನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳನ್ನ ಕೇಳಿದರೆ ಈ ಬಗ್ಗೆ ನನ್ನ ಗಮನಕ್ಕೆ ಬಂದಿದೆ.  ಇಂತಹ ಅಕ್ರಮ ಚಟುವಟಿಕೆಯಲ್ಲಿ ಯಾರು ಭಾಗಿಯಾಗಿದ್ದಾರೆ ಅಂತಹವರ ಮೇಲೆ ಕೂಡಲೇ ಕ್ರಮ ಕೈಗೊಳ್ಳುವುದಾಗಿ ಹೇಳುತ್ತಿದ್ದಾರೆ.

  • Share this:

ಬೀದರ್(ಸೆ.20): ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ಪೌಷ್ಠಿಕ ಆಹಾರ ಸಿಗಬೇಕು ಎಂಬ ಉದ್ದೇಶದಿಂದ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯ ಮುಖಾಂತರ ಸರ್ಕಾರ‌ ಅಂಗನವಾಡಿಗಳ ಮೂಲಕ ಪೌಷ್ಠಿಕ ಆಹಾರ ನೀಡುತ್ತಿದೆ. ಆದರೆ ಗಡಿ ಜಿಲ್ಲೆ ಬೀದರನಲ್ಲಿ ಗರ್ಭಿಣಿಯರು, ಮಕ್ಕಳ ಹೊಟ್ಟೆ ಸೇರಬೇಕಾದ ಪೌಷ್ಠಿಕ ಆಹಾರ ಧಾನ್ಯ ಅಂಗನವಾಡಿ ಕಾರ್ಯಕರ್ತೆಯರ ಹೊಟ್ಟೆ ಪಾಲಾಗುತ್ತಿದೆ. ಪಾಲಕರ ತಿಳುವಳಿಕೆ ಕೊರತೆಯಿಂದ ಬೀದರ್ ಜಿಲ್ಲೆಯಲ್ಲಿ ಅಪೌಷ್ಟಿಕತೆ ಮಕ್ಕಳ ಪ್ರಮಾಣ ಗಣನೀಯವಾಗಿದೆ. ಈ ಸಮಸ್ಯೆಯನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಪಿಡುಗು ಎಂತಲೂ ಪರಿಗಣಿಸಿವೆ. ಮಕ್ಕಳ ಬಾಲ್ಯವನ್ನೇ ಹೈರಾಣಾಗಿಸುವ ಇಂತಹ ಅಪೌಷ್ಟಿಕತೆ ತೊಲಗಿಸುವ ಉದ್ದೇಶದಿಂದ ಸರಕಾರಗಳು ರಾಜ್ಯದ ಪ್ರತಿ ಅಂಗನವಾಡಿ ಕೇಂದ್ರಗಳ ಮೂಲಕ ಬಡ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಿಗೆ ವಿತರಣೆ ಪೌಷ್ಟಿಕ ಆಹಾರ ಧಾನ್ಯ, ಆಹಾರ ವಿತರಣೆ ಮಾಡುತ್ತವೆ. ಆದರೆ ಮಕ್ಕಳಿಗೆ ಸೇರಬೇಕಾದ ಪೌಷ್ಠಿಕ ಆಹಾರ ಸಾಮಗ್ರಿಗಳನ್ನು ಅಂಗನವಾಡಿ ಕಾರ್ಯಕರ್ತೆಯರು ಕದ್ದು ಮುಚ್ಚಿ ಮನೆಗೆ ತೆಗೆದುಕೊಂಡು ಹೋಗುವಾಗ ರೆಡ್ ಹ್ಯಾಂಡ್ ಆಗಿ ಗ್ರಾಮಸ್ಥರು ಹಿಡಿದಿದ್ದಾರೆ.


ಬೀದರ್ ಜಿಲ್ಲೆ ಔರಾದ ತಾಲೂಕಿನ ದುಪತಮಹಗಾಂವ ಗ್ರಾಮದಲ್ಲಿ ಮಕ್ಕಳಿಗೆ ಕೊಡಲು‌ ಅಂಗನವಾಡಿಗಳಿಗೆ ಆಹಾರ ಸರಬರಾಜು ಮಾಡಲಾಗಿದೆ. ಆದರೆ ಇಲ್ಲಿನ ಅಂಗನವಾಡಿ ಕಾರ್ಯಕರ್ತೆಯರು ಕದ್ದು ಮುಚ್ಚಿ ಮಕ್ಕಳ ‌ಆಹಾರ ಪದಾರ್ಥ ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಇದನ್ನು ಬಹಳ ದಿನಗಳಿಂದ ಗಮನಿಸುತ್ತಿದ್ದ ಗ್ರಾಮದ ಯುವಕರು ಆಹಾರ ಪದಾರ್ಥ ತೆಗೆದುಕೊಂಡು ಹೋಗುವಾಗ ಹಿಡಿದಿದ್ದು‌ ಇದೀಗ ಅಧಿಕಾರಿಗಳು ಇತ್ತಕಡೆ ಗಮನ ಹರಿಸಿ ಕ್ರಮ‌ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದಾರೆ.


ಐತಿಹಾಸಿಕ ಬಾದಾಮಿ ಅಗಸ್ತ್ಯ ತೀರ್ಥ ಹೊಂಡದ ಬಳಿಯ 96 ಮನೆಗಳಿಗೆ ಶೀಘ್ರ ಸ್ಥಳಾಂತರ ಭಾಗ್ಯ?


ಇನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳನ್ನ ಕೇಳಿದರೆ ಈ ಬಗ್ಗೆ ನನ್ನ ಗಮನಕ್ಕೆ ಬಂದಿದೆ.  ಇಂತಹ ಅಕ್ರಮ ಚಟುವಟಿಕೆಯಲ್ಲಿ ಯಾರು ಭಾಗಿಯಾಗಿದ್ದಾರೆ ಅಂತಹವರ ಮೇಲೆ ಕೂಡಲೇ ಕ್ರಮ ಕೈಗೊಳ್ಳುವುದಾಗಿ ಹೇಳುತ್ತಿದ್ದಾರೆ.


ಒಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆ ಅಡಿಯಲ್ಲಿ ಅಂಗನವಾಡಿಗಳ ಮುಖಾಂತರ ಬಡವರಿಗೆ ಸಿಗಬೇಕಾದ ಪೌಷ್ಠಿಕ ಆಹಾರ ಕೊರೋನಾ ಮಹಾಮಾರಿಯ ತುರ್ತು ಪರಿಸ್ಥಿತಿಯನ್ನೇ ಬಂಡವಾಳ ಮಾಡಿಕೊಂಡು ಅಂಗನವಾಡಿ ಕಾರ್ಯಕರ್ತೆಯರು ಹೊಟ್ಟೆ ತುಂಬಿಸಿಕೊಳ್ಳುತ್ತಿರುವುದು ವಿಪರ್ಯಾಸವೇ ಸರಿ.


ಇನ್ನಾದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ಗರ್ಭಿಣಿಯರಿಗೆ, ಬಡ ಮಕ್ಕಳಿಗೆ ಸಿಗಬೇಕಾದ ಆಹಾರದಲ್ಲಿ ಅಕ್ರಮ ನಡೆಯದಂತೆ ತಡೆಗಟ್ಟಿ. ಇಂತಹ ಅಕ್ರಮ ಚಟುವಟಿಕೆಯಲ್ಲಿ ತೊಡಗಿದವರ ಮೇಲೆ‌ ಸೂಕ್ತ‌ ಕ್ರಮ ಕೈಗೊಳ್ಳಬೇಕಿದೆ.

top videos
    First published: