BREAKING NEWS: 2,65,720 ಕೋಟಿ ಗಾತ್ರದ ಬಜೆಟ್‌ ಮಂಡಿಸುತ್ತಿರುವ ಸಿಎಂ, ಯಾವ ವಲಯಕ್ಕೆ ಎಷ್ಟು ಅನುದಾನ?

ಸಿಎಂ ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇದೀಗ ಬಜೆಟ್ ಮಂಡನೆ ಶುರುಮಾಡಿದ್ದು, ಸಿಎಂ ಮೇಲೆ ರಾಜ್ಯದ ಜನರ ಗಮನ ಇದೆ. ಶುಕ್ರವಾರ ಶುಭ ಸುದ್ದಿಯ ನಿರೀಕ್ಷೆಯಲ್ಲಿದ್ದಾರೆ ಕನ್ನಡಿಗರು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಸಿಎಂ (CM) ಬಸವರಾಜ ಬೊಮ್ಮಾಯಿ (Basavaraj Bommai) ಚೊಚ್ಚಲ ಬಜೆಟ್ (Budget) ಮಂಡನೆ ಮಾಡುತ್ತಿದ್ದಾರೆ. ಇದೀಗ ಬಜೆಟ್ ಮಂಡನೆ ಶುರುಮಾಡಿದ್ದು, ಸಿಎಂ ಮೇಲೆ ರಾಜ್ಯದ ಜನರ ಗಮನ ಇದೆ. ಶುಕ್ರವಾರ (Friday) ಶುಭ ಸುದ್ದಿಯ (Good News) ನಿರೀಕ್ಷೆಯಲ್ಲಿದ್ದಾರೆ ಕನ್ನಡಿಗರು. ಬಜೆಟ್ ಅಧಿವೇಶನದ ಮೊದಲ ದಿನವಾದ ಇಂದು, ಸಿಎಂ ಬಜೆಟ್ ಮಂಡಿಸುತ್ತಿದ್ದಾರೆ. ಮೊದಲಿಗೆ ವಂದೇ ಮಾತರಂ ಗೀತೆ ಮೂಲಕ ಅಧಿವೇಶನ ಆರಂಭವಾಯ್ತು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಅನುಮತಿ ಪಡೆದು, ಸಿಎಂ ಬಜೆಟ್ ಮಂಡನೆ ಆರಂಭಿಸಿದರು. ಅಡಿಗರ ಕವನದ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಆರಂಭಿಸಿದ್ದಾರೆ. 

ಈ ಬಾರಿ 2 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್

ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್ ಗಾತ್ರ 2,65,720 ಕೋಟಿ ರೂಪಾಯಿ ಗಾತ್ರದ್ದಾಗಿದೆ. ರಾಜ್ಯದ ಕೆರೆಗಳ ಅಭಿವೃದ್ಧಿಗೆ 500 ಕೋಟಿ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ.

ಯಾವ ಇಲಾಖೆಗೆ ಎಷ್ಟು ಕೋಟಿ ಅನುದಾನ?

ಈ ಬಾರಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್‌ನಲ್ಲಿ ವಿವಿಧ ಇಲಾಖೆಗಳಿಗೆ ಭರಪೂರ ಅನುದಾನ ನೀಡಿದ್ದಾರೆ. ಕೃಷಿ ಮತ್ತು ಪೂರಕ ಚಟುವಟಿಕೆಗಳು 33,700 ಕೋಟಿ ರೂಪಾಯಿ,  ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗಾಗಿ  68,479 ಕೋಟಿ ರೂಪಾಯಿ,  ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು  5,657 ಕೋಟಿ ರೂಪಾಯಿ, ಬೆಂಗಳೂರು ಸಮಗ್ರ ಅಭಿವೃದ್ಧಿ- 8,409 ಕೋಟಿ ರೂ.  ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ  3,102 ಕೋಟಿ ರೂ,  ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆ- 56,710 ಕೋಟಿ ರೂಪಾಯಿ, ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ ಆಯವ್ಯಯದಲ್ಲಿ ಒದಗಿಸಿದ ಅನುದಾನ 43,188 ಕೋಟಿ ರೂ.  ಮಕ್ಕಳ ಅಭ್ಯುದಯಕ್ಕೆ 40,944 ಕೋಟಿ ರೂ. ಅನುದಾನ ನೀಡಲಾಗಿದೆ.

ಇದನ್ನೂ ಓದಿ: Explained: ಬಜೆಟ್ ಎಂದರೇನು? ಯಾವುದಕ್ಕೆ ಎಷ್ಟು ಹಣ ನೀಡಬೇಕು ಎಂದು ಹೇಗೆ ನಿರ್ಧಾರವಾಗುತ್ತೆ?

ರೈತರ ಆದಾಯ ಹೆಚ್ಚಳಕ್ಕೆ ಆದ್ಯತೆ

ರೈತರ ಆದಾಯ ಹೆಚ್ಚಳಕ್ಕೆ ಸಿಎಂ ಭರಪೂರ ಕೊಡುಗೆ ಘೋಷಿಸಿದ್ದಾರೆ. 'ರೈತ ಶಕ್ತಿ' ನೂತನ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಳಕೆ ಉತ್ತೇಜನಕ್ಕೆ ಪ್ರತಿ ಎಕರೆಗೆ 250 ರೂ. ಗಳಂತೆ ಡೀಸೆಲ್ ಸಹಾಯಧನ; 600 ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದ್ದಾರೆ.

ಕೆಪೆಕ್ ಮೂಲಕ ಕೃಷಿ ಉತ್ಪನ್ನಗಳ ಕೊಯ್ಲಿನೋತ್ತರ ನಿರ್ವಹಣೆ, ಮಾರಾಟ ಮತ್ತು ರಫ್ತು ಮಾಡಲು 50 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮಿನಿ ಆಹಾರ ಪಾರ್ಕ್ ಸ್ಥಾಪನೆ ಮಾಡಲು ಸರ್ಕಾರ ಮುಂದಾಗಿದೆ. ದ್ರಾಕ್ಷಿ ಬೆಳೆಯ ಸಂಗ್ರಹಣೆ, ಸಂಸ್ಕರಣೆ ಮತ್ತು ಸಾಗಾಣಿಕೆಗೆ ವಿಜಯಪುರ ಜಿಲ್ಲೆ, ತೊರವಿಯಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಶೈತ್ಯ ಸಂಗ್ರಹ ವ್ಯವಸ್ಥೆ ಸ್ಥಾಪನೆ ಹಾಗೂ ಶೀತಲೀಕೃತ ಸರಕು ಸಾಗಣೆ ವಾಹನ ಪೂರೈಕೆ.

24 ಸಾವಿರ ಕೋಟಿ ಸಾಲ ವಿತರಣೆ ಗುರಿ

ಬಡ್ಡಿ ರಿಯಾಯಿತಿ ಯೋಜನೆಯಡಿ 3 ಲಕ್ಷ ಹೊಸ ರೈತರೂ ಸೇರಿದಂತೆ 33 ಲಕ್ಷ ರೈತರಿಗೆ 24,000 ಕೋಟಿ ಸಾಲ ವಿತರಣೆ ಗುರಿ. ಕೃಷಿ ಉತ್ಪಾದನೆ ಹೆಚ್ಚಳ ಹಾಗೂ ರೈತರ ಕ್ಷೇಮಾಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಇನ್ನು ಗ್ರಾಮೀಣ ರೈತರಿಗೆ ಆರೋಗ್ಯ ಸೇವೆ ಒದಗಿಸಲು ಪರಿಷ್ಕೃತ ರೂಪದಲ್ಲಿ ಯಶಸ್ವಿನಿ ಯೋಜನೆ ಸರ್ಕಾರದಿಂದ 300 ಕೋಟಿ ರೂ. ಅನುದಾನದ ಬಗ್ಗೆ ಸಿಎಂ ಘೋಷಿಸಿದ್ದಾರೆ.

ಮಾರ್ಚ್ 31ರವರೆಗೂ ಬಜೆಟ್ ಅಧಿವೇಶನ

ಇಂದು ಬೆಳಗ್ಗೆ ಸಿಎಂ ಸಂಪುಟ ಸಭೆಸಿ, ಪ್ರಾಸ್ತಾವಿಕವಾಗಿ ಬಜೆಟ್ಗೆ ಅನುಮೋದನೆ ಪಡೆದರು. ಸಿಎಂ ಇದೀಗ ಬಜೆಟ್ ಮಂಡಿಸುತ್ತಾ ಇದ್ದಾರೆ. ಇದಾದ ಬಳಿಕ ಅಧಿವೇಶನದಲ್ಲಿ ಬಜೆಟ್ ಮೇಲೆ ಮಹತ್ವದ ಚರ್ಚೆ ನಡೆಯಲಿದೆ. ಮಾರ್ಜ್ 31ರವರೆಗೂ ಬಜೆಟ್ ಅಧಿವೇಶನ ನಡೆಯಲಿದ್ದು, ಮಹತ್ವದ ಚರ್ಚೆಗಳು ನಡೆಯಲಿವೆ.

ಇದನ್ನೂ ಓದಿ: Bengaluru: ಅತೀ ಹೆಚ್ಚು ಶ್ರೀಮಂತರಿರುವ ನಗರಗಳಲ್ಲಿ ಬೆಂಗಳೂರಿಗೆ 3ನೇ ಸ್ಥಾನ! ಮೊದಲ ಎರಡು ಸ್ಥಾನ ಯಾರಿಗೆ?

ಶ್ರೀಕಂಠೇಶ್ವರನ ಆಶೀರ್ವಾದ ಪಡೆದು ಬಂದಿದ್ದ ಸಿಎಂ

ಬಜೆಟ್ ಮಂಡನೆ ಮಾಡುವ ಮುನ್ನ ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರನ ತಮ್ಮ ನಿವಾಸದ ಸಮೀಪದಲ್ಲೇ ಇರುವ ಆರ್. ಟಿ. ನಗರದ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ರು. ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಬಜೆಟ್ ಮಂಡನೆ ಯಶಸ್ವಿಯಾಗಲಿ ಹಾಗೂ ಅದರ ಅನುಷ್ಠಾನ ಸಮರ್ಪಕವಾಗಿ ಆಗಲಿ ಅಂತ ಪ್ರಾರ್ಥಿಸಿದರು.
Published by:Annappa Achari
First published: