Murder: ಮಂಗಳೂರಲ್ಲಿ ಮತ್ತೊಂದು ಮರ್ಡರ್​; ವ್ಯಕ್ತಿಯ ಬರ್ಬರ ಹತ್ಯೆ

ಮಂಗಳೂರು ಹೊರವಲಯದ‌ ಸುರತ್ಕಲ್ ಬಳಿ ಅಪರಿಚಿತ ತಂಡ ಫಾಜೀಲ್ ಎಂಬಾತನ ಮೇಲೆ ದಾಳಿ ನಡೆಸಿ ಹತ್ಯೆಗೈದಿದೆ. ಮತ್ತೆ ಮಂಗಳೂರು ಬೆಚ್ಚಿಬಿದ್ದಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಮಂಗಳೂರು ( ಜು.28): ಮಾರಕಾಸ್ತ್ರಗಳಿಂದ ವ್ಯಕ್ತಿಯ ಮೇಲೆ ದಾಳಿ ನಡೆಸಿ ಕೊಲೆಗೈದಿರುವ (Murder) ಘಟನೆ ಮಂಗಳೂರು ಹೊರವಲಯದಲ್ಲಿ ನಡೆದಿದೆ. ಮಂಗಳೂರಿನ (Mangaluru) ಸುರತ್ಕಲ್ ಬಳಿ ಅಪರಿಚಿತ ತಂಡ ಫಾಜೀಲ್ ಎಂಬಾತನ ಮೇಲೆ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಸಾಮಾನ್ಯ ಜನರ ಓಡಾಟದ ಮಧ್ಯೆಯೇ ದುಷ್ಕರ್ಮಿಗಳು ದಾಳಿ ಮಾಡಿದ್ದು, ಸಿಸಿಟಿವಿಯಲ್ಲಿ ಈ ಭೀಕರ ದೃಶ್ಯ ಸೆರೆಯಾಗಿದೆ. ಬಟ್ಟೆ ಅಂಗಡಿಗೆ ನುಗ್ಗಿ ಫಾಜಿಲ್ (Fazil) ಎಂಬ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು (Police),  ಸುರತ್ಕಲ್ ಸುರತ್ಕಲ್ ಪೇಟೆಯಲ್ಲಿ ಅಂಗಡಿ ಬಂದ್ (Shop Closed) ಎಲ್ಲಾ ಅಂಗಡಿಯನ್ನು ಬಂದ್​ ಮಾಡಿಸಿದ್ದಾರೆ.

Another murder in Mangalore; Brutal killing of a perso
ಕೊಲೆಯಾದ ಫಾಜಿಲ್​


ಮಂಗಳೂರು ನಗರದಾದ್ಯಂತ ಭಾರೀ ಕಟ್ಟೆಚ್ಚರ

ಸಂಜೆ ಸುಮಾರು 6 ಗಂಟೆಗೆ ಈ ಘಟನೆ ನಡೆದಿದೆ. ಸ್ನೇಹಿತನ ಜತೆ ಮಾತನಾಡುತ್ತಿದ್ದ ವೇಳೆ ಫಾಜಿಲ್ ಮೇಲೆ ಹಲ್ಲೆ ಮಾಡಲಾಗಿದೆ. ಪ್ರವೀಣ್‌ ಹತ್ಯೆ ಬೆನ್ನಲ್ಲೇ ನಡೆದ ಮತ್ತೊಂದು ಹತ್ಯೆಗೆ ಮಂಗಳೂರು ಬೆಚ್ಚಿಬಿದ್ದಿದೆ.  ಮಂಗಳೂರು ನಗರದಾದ್ಯಂತ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.  ನಾಡಿದ್ದು ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸುರತ್ಕಲ್, ಪಣಂಬೂರು, ಮುಲ್ಕಿ, ಬಜ್ಪೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿರೋದಾಗಿ ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಹೇಳಿದ್ದಾರೆ.

ಬಿಜೆಪಿ ಯುವ ಮೋರ್ಚಾ ಮುಖಂಡ  ಪ್ರವೀಣ್​  ಹತ್ಯೆಗೆ 

ಇನ್ನು ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್‌ ಹತ್ಯೆಗೆ ಹಿಂದೂ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಪ್ರವೀಣ್‌ ಪಾರ್ಥಿವ ಶರೀರದ ಮೆರವಣಿಗೆ, ಅಂತಿಮ ದರ್ಶನ ವೇಳೆ ಮೂರು ಅಂಗಡಿ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ್ದಲ್ಲದೆ, ಸರ್ಕಾರಿ ಬಸ್ಸೊಂದರ ಗಾಜಿಗೂ ಹಾನಿ ಮಾಡಿದ್ದಾರೆ. ದ್ವಿಚಕ್ರ ವಾಹನವೊಂದನ್ನು ಪುಡಿ ಪುಡಿ ಮಾಡಿದ್ದು, ಉದ್ರಿಕ್ತರ ನಿಯಂತ್ರಣ ವೇಳೆ ಪೊಲೀಸರು ನಡೆಸಿದ ಲಾಠಿ ಚಾರ್ಜ್​ ನಲ್ಲಿ ನಾಲ್ಕೈದು ಮಂದಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: Ashwath Narayan: ಮೃತ ಪ್ರವೀಣ್ ಕುಟುಂಬಕ್ಕೆ 10 ಲಕ್ಷ ರೂ. ವೈಯಕ್ತಿಕ ನೆರವು ನೀಡಿದ ಅಶ್ವತ್ಥ ನಾರಾಯಣ

ಇದೇ ವೇಳೆ, ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದ್ದರೂ ಸಾಲು ಸಾಲು ಹಿಂದೂ ಕಾರ್ಯಕರ್ತರ ಹತ್ಯೆ ಆಗುತ್ತಿರುವುದಕ್ಕೆ ಇದೀಗ ಪಕ್ಷದ ನಾಯಕರ ಮೇಲೆಯೇ ಕಾರ್ಯಕರ್ತರು ತಿರುಗಿ ಬಿದ್ದಿದ್ದು, ಸುಳ್ಯದ ಬೆಳ್ಳಾರೆಯಲ್ಲಿ ಪ್ರವೀಣ್‌ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌, ಸಚಿವರಾದ ಸುನಿಲ್‌ ಕುಮಾರ್‌, ಅಂಗಾರ ಅವರಿಗೆ ಧಿಕ್ಕಾರ ಕೂಗಿ ಬಿಸಿ ಮುಟ್ಟಿಸಿದ್ದಾರೆ. ಕಟೀಲ್‌ ಕಾರಿಗೆ ಘೇರಾವ್‌ ಹಾಕಿ ಪಲ್ಟಿಮಾಡಲೆತ್ನಿಸಿದ ಘಟನೆಯೂ ನಡೆದಿತ್ತು.

ಇಬ್ಬರು ಆರೋಪಿಗಳ ಬಂಧನ

ಕಾಸರಗೋಡಿನಲ್ಲಿ ಈ ಇಬ್ಬರನ್ನು ಬಂಧಿಸಲಾಗಿದ ಎಂದು ದಕ್ಷಿಣ ಕನ್ನಡ ಎಸ್‌ಪಿ ರಿಷಿಕೇಶ್‌ ಹೇಳಿದ್ದಾರೆ. ಈ ಇಬ್ಬರೇ ಮಾಸ್ಟರ್‌ ಮೈಂಡ್‌ಗಳು ಎನ್ನಲಾಗಿದ್ದು, ಇವರ ನಿರ್ದೇಶನದ ಮೇರೆಗೆ ಕೊಲೆ ನಡೆದಿದೆ ಎಂದು ಹೇಳಲಾಗಿದೆ. ಬಂಧಿತ ಇಬ್ಬರೂ ಆರೋಪಿಗಳು ಬೆಳ್ಳಾರೆ ಹಾಗೂ ಸವಣೂರಿನವರು ಎಂದು ಗೊತ್ತಾಗಿದೆ. ಆದ್ರೆ ಕೊಲೆ ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ. ಬಂಧಿಸಲಾಗಿರುವ ಇಬ್ಬರು ಆರೋಪಿಗಳು ಅಪರಾಧಿ ಹಿನ್ನೆಲೆಯವರಾಗಿದ್ದಾರೆ ಎಂದು ತಿಳಿದುಬಂದಿವೆ.

ಇದನ್ನೂ ಓದಿ: BJP Program: ಜನೋತ್ಸವಕ್ಕೆ ಮಾಡಿ ಉಳಿದ ಊಟ ಅನಾಥಾಶ್ರಮಕ್ಕೆ, ಇದು ನಿಯಮ ಬಾಹಿರ; ಆ ಮಕ್ಕಳಿಗೆ ಮಿಕ್ಕ ಆಹಾರ ಕೊಡ್ಬೇಡಿ!

ಇನ್ನು ಈ ಬಗ್ಗೆ ಮಾತನಾಡಿರುವ ಎಡಿಜಿಪಿ ಅಲೋಕ್‌ ಕುಮಾರ್‌, ಇದುವರೆಗೆ 21 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದೇವೆ. ಬೇರೆ ಬೇರೆ ಸಂಘಟನೆಗಳಿಗೆ ಸೇರಿದವರಾಗಿದ್ದಾರೆ. ಅವರನ್ನು ತೀವ್ರ ವಿಚಾರಣೆಗೊಳಪಡಿಸಲಾಗಿದ್ದು, ತಪ್ಪಿತಸ್ಥರನ್ನು ಪತ್ತೆ ಹಚ್ಚುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕೋರ್ಟ್ ನ್ಯಾಯಾಂಗ ವಿಧಿಸಿದೆ.ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳಾದ ಜಾಕೀರ್ ಮತ್ತು ಶಫೀಕ್ ನನ್ನು ಪೊಲೀಸರು ನ್ಯಾಯಾಲಕಕ್ಕೆ ಹಾಜರುಪಡಿಸಿದ್ದು, ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪೊಲೀಸ್ ವಶಕ್ಕೆ ಕೇಳದ ಹಿನ್ನೆಲೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ತನಿಖೆ ಅಗತ್ಯವಿದ್ದಲ್ಲಿ ಆರೋಪಿಗಳನ್ನ ಪೊಲೀಸ್ ಕಸ್ಟಡಿಗೆ ಮನವಿ ಮಾಡುವುದಾಗಿ ವಕೀಲರು ಸ್ಪಷ್ಟಪಡಿಸಿದರು.
Published by:Pavana HS
First published: