ಸಿಎಎ, ಎನ್​ಆರ್​ಸಿ ವಿರೋಧಿಸಿ ಇಂದು ಚಿಕ್ಕಬಳ್ಳಾಪುರ ಬಂದ್​; ರಾಮನಗರದಲ್ಲೂ ಬೃಹತ್​ ಪ್ರತಿಭಟನೆ

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್, ಕ್ಷೇತ್ರದ ಶಾಸಕಿ ಅನಿತಾಕುಮಾರಸ್ವಾಮಿ, ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

  • Share this:
ಬೆಂಗಳೂರು(ಡಿ.24): ರಾಷ್ಟ್ರೀಯ ಪೌರತ್ವ ಕಾಯ್ದೆ(ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ(ಎನ್​ಆರ್​​ಸಿ) ವಿರೋಧಿಸಿ ಕಳೆದ ಕೆಲ ದಿನಗಳಿಂದ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯದಲ್ಲೂ ಪ್ರತಿಭಟನೆಯ ಕಿಚ್ಚು ಹೆಚ್ಚಾಗಿದ್ದು, ಇಂದು ಸಹ ಹಲವೆಡೆ ಪ್ರತಿಭಟನೆಗಳು ನಡೆಯುವ ಸಾಧ್ಯತೆ ಇದೆ.

ಸಿಎಎ ಮತ್ತು ಎನ್​ಆರ್​​ಸಿ ವಿರೋಧಿಸಿ ಇಂದು ಚಿಕ್ಕಬಳ್ಳಾಪುರ ಬಂದ್​ಗೆ ಕರೆ ನೀಡಲಾಗಿದೆ. ಬಂದ್​​ಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿವೆ ಎನ್ನಲಾಗಿದೆ. ಸಿಎಎ ಮತ್ತು ಎನ್​ಆರ್​​ಸಿ ವಿರೋಧಿಸಿ ಸಾವಿರಾರು ಜನರು ಇಂದು ಬೀದಿಗೆ ಇಳಿಯಲಿದ್ದಾರೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.

ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜೊತೆಗೆ ಶಾಂತಿಯುತ ಪ್ರತಿಭಟನೆ ನಡೆಸುವಂತೆ ಸೂಚಿಸಲಾಗಿದೆ. 4 ಕೆಎಸ್​​ಆರ್​​ಪಿ, 9 ಡಿಎಆರ್​​ ತುಕಡಿ ಹಾಗೂ 200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಪ್ರತಿಭಟನಾಕಾರರು ನಗರದಾದ್ಯಂತ ಮೆರವಣಿಗೆ ನಡೆಸಿ ಬಳಿಕ ಜಿಲ್ಲಾಧಿಕಾರಿ ಕಚೇರಿ ಬಳಿ ತೆರಳಿ ಡಿಸಿಗಳಿಗೆ ಮನವಿ ಪತ್ರ ನೀಡಲಿದ್ದಾರೆ.

ಜಾರ್ಖಂಡ್ ಚುನಾವಣೆ: ಬಿಜೆಪಿಗೆ ಮುಖಭಂಗ; ಜೆಎಂಎಂ ಹಾಗೂ ಮಿತ್ರರಿಗೆ ಗೆಲುವಿನ ನಗೆ

ಇನ್ನು, ರೇಷ್ಮೆ ನಗರಿ ರಾಮನಗರದಲ್ಲೂ ಸಹ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್​ ಮಟ್ಟದಲ್ಲಿ ಪ್ರತಿಭಟನೆ ನಡೆಯಲಿದೆ. ಮುಸ್ಲಿಮರು ನಗರದ ರೈಲ್ವೆ ಸ್ಟೇಷನ್​​ ಸರ್ಕಲ್​​ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಜಾಥ ಹೊರಡಲಿದ್ದಾರೆ. ಪ್ರತಿಭಟನೆಯಲ್ಲಿ ಮೂರು ಸಾವಿರಕ್ಕೂ ಅಧಿಕ ಜನರು ಭಾಗಿಯಾಗುವ ಸಾಧ್ಯತೆ ಇದೆ. ಮಧ್ಯಾಹ್ನ ಮೂರು ಗಂಟೆಗೆ ಪ್ರತಿಭಟನಾ ಜಾಥಾ ಆರಂಭವಾಗಲಿದೆ.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್, ಕ್ಷೇತ್ರದ ಶಾಸಕಿ ಅನಿತಾಕುಮಾರಸ್ವಾಮಿ, ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಯಾವುದೇ ಗಲಾಟೆ, ಗಲಭೆ ನಡೆಯದಂತೆ ಶಾಂತಿಯುತ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ.  ರಾಮನಗರದಾಂದ್ಯತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸಿಎಎ ವಿರೋಧಿಸಿ ಬಳ್ಳಾರಿಯಲ್ಲೂ ಸಹ ಇಂದು ಪ್ರತಿಭಟನೆ ನಡೆಯಲಿದೆ. ಜಿಲ್ಲಾ ನಾಗರಿಕರ ಸಮನ್ವಯ ಸಮಿತಿ ವತಿಯಿಂದ ರಾಯಲ್ ಸರ್ಕಲ್​​​​​​ರವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಶಾಸಕರು, ಜೆಡಿಎಸ್​​ ಮುಖಂಡರು, ವಿವಿಧ ಸಂಘಟನೆಗಳು ಭಾಗಿಯಾಗುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಮಹದಾಯಿ ಮತ್ತು ಕಳಸಾ-ಬಂಡೂರಿ ವಿವಾದ; ಡಿ.29ಕ್ಕೆ ಜನಪ್ರತಿನಿಧಿಗಳ ಸಭೆ ಸೇರಿಸಲು ನಿರ್ಧಾರ

 
Published by:Latha CG
First published: