Anti Conversion Bill: ಮತಾಂತರ ನಿಷೇಧ ವಿಧೇಯಕ ಮೇಲ್ಮನೆಯಲ್ಲಿ ಪಾಸ್! ಪ್ರತಿ ಹರಿದು ಹಾಕಿ ಕಾಂಗ್ರೆಸ್ ಆಕ್ರೋಶ

ಕರ್ನಾಟಕದಲ್ಲಿ ಮತಾಂತರ ನಿಷೇಧ ವಿಧೇಯಕ ಇವತ್ತು ಪರಿಷತ್​​ನಲ್ಲಿ ಮಂಡನೆ ಆಯ್ತು. ಗೃಹ ಸಚಿವ ಆರಗ ಜ್ಞಾನೇಂದ್ರ ಪರಿಷತ್‌ನಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಮಂಡಿಸಿದ್ದು, ಬಿಲ್ ಪಾಸ್ ಆಗಿದೆ. ಆದರೆ ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.

ಗೃಹಸಚಿವ ಆರಗ ಜ್ಞಾನೇಂದ್ರ

ಗೃಹಸಚಿವ ಆರಗ ಜ್ಞಾನೇಂದ್ರ

 • Share this:
  ವಿಧಾನ ಪರಿಷತ್: ರಾಜ್ಯದಲ್ಲಿ ಬಲವಂತದ ಮತಾಂತರಕ್ಕೆ ಬ್ರೇಕ್ ಬೀಳಲಿದೆ. ಯಾಕೆಂದ್ರೆ ವಿಧಾನ ಪರಿಷತ್‍ನಲ್ಲಿ (Legislative Assembly) ಇಂದು  ಮತಾಂತರ ನಿಷೇಧ ವಿಧೇಯಕಕ್ಕೆ (Anti Conversion Bill) ಗ್ರೀನ್ ಸಿಗ್ನಲ್ ಸಿಕ್ಕಿದೆ. ವಿಧಾನಸಭೆಯಿಂದ (Vidhana Sabhe) ಅಂಗೀಕಾರವಾದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ 2022ನ್ನು ಗೃಹ ಸಚಿವ (Home Minister) ಆರಗ ಜ್ಞಾನೇಂದ್ರ (Araga Jnanendra) ವಿಧಾನ ಪರಿಷತ್‌ನಲ್ಲಿ ಇಂದು ಮಂಡನೆ ಮಾಡಿದ್ರು. ಇದೀಗ ವಿಧೇಯಕ ಅಂಗೀಕಾರವಾಗಿದೆ. ಮತ್ತೊಂದೆಡೆ ಮತಾಂತರ ನಿಷೇಧ ವಿಧೇಯಕ್ಕೆ ಕಾಂಗ್ರೆಸ್ (Congress) ತೀವ್ರ ವಿರೋಧ ವ್ಯಕ್ತಪಡಿಸಿದೆ. ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ (BK Hariprasad) ಬಿಲ್‌ನ ಪ್ರತಿಯನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  ಮಂತಾಂತರ ನಿಷೇಧ ವಿಧೇಯಕ ಅಂಗೀಕಾರ

  ಕರ್ನಾಟಕದಲ್ಲಿ ಮತಾಂತರ ತಡೆ ಕಾಯ್ದೆ ವಿಧೇಯಕ ಇವತ್ತು ಪರಿಷತ್​​ನಲ್ಲಿ ಮಂಡನೆ ಆಯ್ತು. ಗೃಹ ಸಚಿವ ಆರಗ ಜ್ಞಾನೇಂದ್ರ ಪರಿಷತ್‌ನಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಮಂಡಿಸಿದ್ರು. ಬಹಳ ಮಹತ್ವದ ಕಾಯ್ದೆಯನ್ನ ಇದೀಗ ರಾಜ್ಯ ಸರ್ಕಾರ ತಂದಿದೆ. 2013ರಲ್ಲಿ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿತ್ತು. ಈಗ ಬಿಜೆಪಿ ಸರ್ಕಾರ ಜಾರಿಗೆ ತರುತ್ತಿದೆ.

  ವಿಧೇಯಕ ಮಂಡಿಸಿದ ಆರಗ ಜ್ಞಾನೇಂದ್ರ

  ಇಂದು ಬಹಳ ಮಹತ್ವದ ಕಾಯ್ದೆಯನ್ನ ಸರ್ಕಾರ ತಂದಿದೆ. 2013 ರಲ್ಲಿ ಕಾಂಗ್ರೆಸ್‌ ಸರ್ಕಾರ ಇದ್ದಾಗಲು ಇದರ ಬಗ್ಗೆ ಚಿಂತನೆ ನಡೆಸಿತ್ತು. ಎಲ್ಲರಿಗೂ ಅವರವರ ಧಾರ್ಮಿಕ ಹಕ್ಕಿನಲ್ಲಿ ಬದುಕುವ ಅವಕಾಶ ವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಲವಂತದಿಂದ, ಆಮೀಷದ ಮತಾಂತರ ನಡೆಯುತ್ತಿದೆ. ನಮ್ಮ ಶಾಸಕರೇ ಕಳೆದ ಬಾರಿ ವಿಧಾನ ಸಭೆಯಲ್ಲಿ ಹೇಳಿದ್ರು ನನ್ನ ತಾಯಿಯನ್ನೆ ಮತಾಂತರ ಮಾಡಲಾಗಿದೆ ಎಂದು ಹೇಳಿದ್ರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಧಿವೇಶನದಲ್ಲಿ ಪ್ರಸ್ತಾಪಿಸಿದರು.

  ಇದನ್ನೂ ಓದಿ: Multispeciality Hospital: ಉತ್ತರ ಕನ್ನಡದ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆಗೆ ಎಳ್ಳುನೀರು! ಅನುಮೋದನೆಯನ್ನೇ ನೀಡದ ಆರ್ಥಿಕ ಇಲಾಖೆ!

  ಮತಾಂತರ ನಿಷೇಧ ವಿಧೇಯಕದಲ್ಲಿ ಏನಿದೆ?

  ಮತಾಂತರ ಅಗಬಯಸುವ ವ್ಯಕ್ತಿ 60 ದಿನಗಳ ಮೊದಲು ಫಾರ್ಮ್ 1 ಅನ್ನು ಭರ್ತಿ ಮಾಡಿ ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿ ಬಳಿ ಮಾಹಿತಿ ನೀಡಬೇಕಿದೆ. ಮತಾಂತರ ಮಾಡಿಸುವ ವ್ಯಕ್ತಿಯೂ ಕೂಡ ಒಂದು ತಿಂಗಳ ಮೊದಲು ಈಗಾಗಲೇ ಫಾರ್ಮ್ 2 ಅನ್ನು ಭರ್ತಿಮಾಡಿ ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿಗೆ ಮಾಹಿತಿ ನೀಡಬೇಕು. ಇನ್ನು ಮತಾಂತರವಾದ ಒಂದು ತಿಂಗಳ ಬಳಿಕ ಡಿಕ್ಲರೇಷನ್ ಫಾರ್ಮ್ ಅಥವಾ ಘೋಷಣಾಪತ್ರವನ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಭರ್ತಿ ಮಾಡಿ ನೀಡಬೇಕು, ಜೊತೆಗೆ ಡಿಕ್ಲರೇಷನ್ ಮಾಡಿದ 21 ದಿನಗಳ ಬಳಿಕ ಮತಾಂತರ ಹೊಂದಿದ ವ್ಯಕ್ತಿ ಖುದ್ದು ಹಾಜರಾಗಿ ಗುರುತು ನೀಡಬೇಕಿದೆ.

  ದಂಡಾಧಿಕಾರಿಗಳಿಂದ ದೃಢೀಕರಣ

  ಈ ವೇಳೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತಾಂತರೊತ್ತರ ಘಟನೆಯ ಸಂಪೂರ್ಣ ಘಟನೆಯನ್ನು ದಾಖಲಿಸತಕ್ಕದ್ದು. ತಕರಾರುಗಳಿದ್ದಲ್ಲಿ ತಕರಾರು ಎತ್ತಿದ ವ್ಯಕ್ತಿ ಹಾಗೂ ತಕರಾರಿನ ಸ್ವರೂಪವನ್ನ ದಾಖಲಿಸಬೇಕು. ಮತಾಂತರ ಹೊಂದಿದವರಿಗೆ ಜಿಲ್ಲಾ ದಂಡಾಧಿಕಾರಿಗಳು ದೃಢೀಕರಿಸಿದ ಪ್ರತಿಗಳನ್ನು ನೀಡಬೇಕಾಗುತ್ತದೆ. ತಕರಾರುಗಳಿದ್ದ ಪಕ್ಷದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಬಂಧ ಪಟ್ಟ ಇಲಾಖೆಗಳಾದ ಕಂದಾಯ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಸೇರಿದಂತೆ ಇತರ ಸಂಬಂಧ ಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಬೇಕು.

  ಇದನ್ನೂ ಓದಿ: Basangouda Patil Yatnal: ಸಿಎಂಗೆ ಧಮ್ ಇದ್ದರೆ ಎನ್​​ಕೌಂಟರ್ ಮಾಡಲಿ; ಶಾಸಕ ಯತ್ನಾಳ್

  ಮತಾಂತರ ವಿಧೇಯಕಕ್ಕೆ ಕಾಂಗ್ರೆಸ್ ಗರಂ

  ಇನ್ನು ಮತಾಂತರ ನಿಷೇಧ ವಿಧೇಯಕಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಬಿಕೆ ಹರಿಪ್ರಸಾದ್ ವಿಧೇಯಕದ ಪ್ರತಿ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. 2011ರ ಜನಗಣತಿ, ಜಾತಿಗಣತಿ ವರದಿ ಪ್ರಸ್ತಾಪಿಸಿದ ಬಿ.ಕೆ.ಹರಿಪ್ರಸಾದ್​ ದೇಶದಲ್ಲಿ ಕ್ರೈಸ್ತರ ಸಂಖ್ಯೆ ಕುಸಿದಿದ್ದು ಮತಾಂತರ ಆಗುತ್ತಿದ್ದರೆ ಕ್ರೈಸ್ತ ಮತ್ತು ಮುಸ್ಲಿಂ ಜನಸಂಖ್ಯೆ ಜಾಸ್ತಿ ಆಗಬೇಕಿತ್ತು ಅಂದ್ರು. ಆಮೇಲೆ ಮಾಧುಸ್ವಾಮಿ ಮತ್ತು ಹರಿಪ್ರಸಾದ್​ ಮದ್ಯೆ ಜಟಾಪಟಿನೂ ನಡೀತು.
  Published by:Annappa Achari
  First published: