ಬೆಂಗಳೂರು (ಡಿ. 9): ರಾಜ್ಯ ಸರ್ಕಾರದ ಅತ್ಯಂತ ಮಹಾತ್ವಕಾಂಕ್ಷೆಯ ಗೋ ಹತ್ಯೆ ನಿಷೇಧ ಮಸೂದೆಯನ್ನು ವಿಧಾನಸಭೆಯಲ್ಲಿ ಪಶು ಸಚಿವ ಪ್ರಭು ಚೌಹಣ್ ಇಂದು ಮಂಡಿಸಿದರು. ವಿರೋಧ ಪಕ್ಷಗಳ ಗದ್ದಲದ ನಡುವೆಯೇ ಪಶು ಸಚಿವ ಪ್ರಭು ಚೌಹಣ್ಗೆ ವಿಧಾನಸಭಾ ಮಸೂದೆ ಮಂಡಿಸಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವಕಾಶ ನೀಡಿದರು. ಏಕಾಏಕಿ ಮಸೂದೆ ಮಂಡನೆಗೆ ಅವಕಾಶ ನೀಡಿದ ಕ್ರಮಕ್ಕೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಘೋಷಣೆ ಕೂಗಿದರು. ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾನೂನು ತರಬಾರದು ಎಂದು ಹೇಳಿದ್ದೇವು. ಇದಕ್ಕೆ ಸರ್ಕಾರ ಕೂಡ ಒಪ್ಪಿಗೆ ಸೂಚಿಸಿತ್ತು. ಆದರೆ ಈಗ ಹೇಳದೇ, ಕೇಳದೇ ಮಸೂದೆ ಮಂಡನೆಗೆ ಮುಂದಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
2020 ನೇ ಸಾಲಿನ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕವನ್ನು ಸಚಿವ ಪ್ರಭು ಚೌಹ್ಹಾಣ್ ಮಂಡಿಸಿದರು. ಕಾಂಗ್ರೆಸ್, ಜೆಡಿಎಸ್ ಸದಸ್ಯರ ಗದ್ದಲದ ನಡುವೆಯೇ ವಿಧೇಯಕಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ವಿಪಕ್ಷಗಳ ಗದ್ದಲ ಹೆಚ್ಚಳವಾದ ಹಿನ್ನಲೆ ಸದನವನ್ನು 10 ನಿಮಿಷ ಮುಂದೂಡಲಾಯಿತು.
ಮಸೂದೆ ಮಂಡನೆ ಮುನ್ನ ಗೋ ಪೂಜೆ
ಐತಿಹಾಸಿಕ ಗೋ ಹತ್ಯೆ ನಿಷೇಧ ಮಸೂದೆ ಮಂಡನೆಗೆ ಮುನ್ನ ವಿಧಾನಸೌಧದಲ್ಲಿ ಬಿಜೆಪಿ ನಾಯಕರು ಗೋವು ಪೂಜೆ ನಡೆಸಿ, ಗಮನ ಸೆಳೆದರು. ವಿಧಾನಸೌಧದ ಪೂರ್ವ ಬಾಗಿಲಿನಲ್ಲಿ ಎರಡು ಹಸುಗಳಿಗೆ ಸಿ.ಟಿ.ರವಿ , ಕೆಎಸ್.ಈಶ್ವರಪ್ಪ, ಪ್ರಭು ಚೌಹ್ಹಾಣ್ ಬಸನಗೌಡ ಪಾಟೀಲ್ ಪೂಜೆ ನೆರವೇರಿಸಿದರು.
ಗೋಹತ್ಯೆ ತಡೆ ಮಸೂದೆಯ ಪ್ರಮುಖ ಅಂಶಗಳು
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ