Crime News| ಮಲತಾಯಿ ಮಾತು ಕೇಳಿ ಅಪ್ರಾಪ್ತ ಮಕ್ಕಳ ಮೇಲೆ ಕ್ರೌರ್ಯ ಮೆರೆದ ಪಾಪಿ ತಂದೆ ಅರೆಸ್ಟ್
ಪೊಲೀಸರು ಇದೀಗ ಆರೋಪಿ ಸೆಲ್ವಾನನ್ನು ಬಂಧಿಸಿ ಸೆಕ್ಷನ್ 307 ಅಡಿಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಮಾರಣಾಂತಿಕ ಹಲ್ಲೆಗೆ ಒಳಗಾದ ಮಕ್ಕಳನ್ನು ರಕ್ಷಿಸಿ ಬಾಲ ಭವನದಲ್ಲಿ ಆಶ್ರಯ ನೀಡಲಾಗಿದೆ.
ಬೆಂಗಳೂರು (ಜೂನ್ 23); ಮಕ್ಕಳು ಹಠ ಮಾಡುತ್ತಾರೆ ಎಂಬ ಮಲತಾಯಿಯ ಮಾತು ಕೇಳಿ ಮೂವರು ಅಪ್ರಾಪ್ತ ಮಕ್ಕಳ ಮೇಲೆ ತಂದೆಯೇ ಚಾಕುವಿನಿಂದ ಹಲ್ಲೆ ಮಾಡಿರುವ ಕ್ರೌರ್ಯ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ಆರೋಪಿ ಸೆಲ್ವಾ ಕ್ರೂಸರ್ ಡ್ರೈವರ್ ಆಗಿದ್ದು, ಆತನ ಎರಡನೇ ಹೆಂಡತಿ ಮಾತು ಕೇಳಿ ತನ್ನ ಸ್ವಂತ ಮಕ್ಕಳ ಭುಜ, ಮೊಣಕೈ ಮತ್ತು ಪಾದಗಳಿಗೆ ಚಾಕುವಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ನೋವನ್ನು ತಡೆಯಲಾರದೆ ಮಕ್ಕಳು ಕಿರುಚುತ್ತಾ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಈ ವೇಳೆ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿ ಮಕ್ಕಳನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ.
ಮೂರು ತಿಂಗಳ ಹಿಂದಷ್ಟೇ ಸೆಲ್ವನ ಮೊದಲ ಪತ್ನಿ ಅಂಜಲಿ ಮೃತಪಟ್ಟಿದ್ದರು. ಹೀಗಾಗಿ ಸೆಲ್ವ ಮೊದಲ ಪತ್ನಿಯ ಮೂವರು ಮಕ್ಕಳನ್ನು ಎರಡನೇ ಪತ್ನಿ ಸತ್ಯಾ ಮನೆಗೆ ಕರೆತಂದಿದ್ದ. ಆದರೆ, ಸತ್ಯಾಗೆ ಇದು ಇಷ್ಟವಿರಲಿಲ್ಲ. ಸೆಲ್ವ ಕೆಲಸಕ್ಕೆ ಹೋಗಿ ವಾಪಸ್ ಮನೆಗೆ ಬರುತ್ತಿದ್ದಂತೆ ಮಕ್ಕಳ ಮೇಲೆ ದೂರು ನೀಡುತ್ತಿದ್ದಳು. ಹೀಗಾಗಿ ಎರಡನೇ ಪತ್ನಿ ಸತ್ಯಾಳ ಮಾತನ್ನ ಕೇಳಿ ಸ್ವಂತ ತಂದೆಯೇ ಮಕ್ಕಳ ಮೇಲೆ ಕ್ರೌರ್ಯ ಮೆರೆದಿರೋ ಘಟನೆ ಕಳವಳಕ್ಕೆ ಕಾರಣವಾಗಿದೆ.
ಪೊಲೀಸರು ಇದೀಗ ಆರೋಪಿ ಸೆಲ್ವಾನನ್ನು ಬಂಧಿಸಿ ಸೆಕ್ಷನ್ 307 ಅಡಿಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಮಾರಣಾಂತಿಕ ಹಲ್ಲೆಗೆ ಒಳಗಾದ ಮಕ್ಕಳನ್ನು ರಕ್ಷಿಸಿ ಬಾಲ ಭವನದಲ್ಲಿ ಆಶ್ರಯ ನೀಡಲಾಗಿದೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ