• Home
  • »
  • News
  • »
  • state
  • »
  • BJP Leaders: ಯತ್ನಾಳ್ ನಮ್ಮ ಪಕ್ಷದ ನಾಯಕರಲ್ಲ, ಆದ್ರೂ ಬಿಜೆಪಿಗೆ ಡ್ಯಾಮೇಜ್ ತಪ್ಪಿಲ್ಲಎಂದ್ರು ಅರುಣ್ ಸಿಂಗ್

BJP Leaders: ಯತ್ನಾಳ್ ನಮ್ಮ ಪಕ್ಷದ ನಾಯಕರಲ್ಲ, ಆದ್ರೂ ಬಿಜೆಪಿಗೆ ಡ್ಯಾಮೇಜ್ ತಪ್ಪಿಲ್ಲಎಂದ್ರು ಅರುಣ್ ಸಿಂಗ್

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​

ಮಾಜಿ ಸಚಿವ ಯತ್ನಾಳ್ ನಮ್ಮ ಪಕ್ಷದ ನಾಯಕರಲ್ಲ, ಆದ್ರೂ ಅವರ ಹೇಳಿಕೆಯಿಂದ ಬಿಜೆಪಿಗೆ ಡ್ಯಾಮೇಜ್ ತಪ್ಪಿಲ್ಲ ಎಂದಿರೋ ಅರುಣ್ ಸಿಂಗ್, ಅವರ ಸ್ವಭಾವವೇ ಹಾಗಿರೋದ್ರಿಂದ ಏನೂ ಮಾಡೋಕೆ ಆಗಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

  • News18 Kannada
  • Last Updated :
  • Karnataka, India
  • Share this:

ಹುಬ್ಬಳ್ಳಿ  (ಅ.16): ಬಸನಗೌಡ ಪಾಟೀಲ ಯತ್ನಾಳ್ (Basanagowda Patila Yatnal) ನಮ್ಮ ಪಕ್ಷದ ನಾಯಕರಲ್ಲಾ, ಆದ್ರೂ ಅವರ ಹೇಳಿಕೆಗಳಿಂದ ಬಿಜೆಪಿಗೆ ಡ್ಯಾಮೇಜ್ ಆಗುತ್ತೆ. ಅವರ ಸ್ವಭಾವವೇ ಹಾಗಿರೋದ್ರಿಂದ ಏನೂ ಮಾಡೋಕೆ ಆಗಲ್ಲ ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ (Arun Singh) ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಯತ್ನಾಳ್ ಬಿಜೆಪಿ ಕೋರ್ ಕಮಿಟಿಯಲ್ಲಿ (BJP Core Committee) ಇಲ್ಲ, ಅವರ ಹೇಳಿಕೆ ಪಕ್ಷದ ಹೇಳಿಕೆಯಲ್ಲ. ನಾವು ಯತ್ನಾಳ್ ನೋಟೀಸ್ ಜಾರಿ ಮಾಡಿ ಉತ್ತರ ಪಡೆದಿದ್ದೇವೆ, ಯತ್ನಾಳ್​ ಸ್ವಭಾವವೇ ಆಗಿದೆ, ಏನೂ ಮಾಡಲು ಆಗಲ್ಲ, ನೋಡೋಣ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.


ಜಗದೀಶ್​ ಶೆಟ್ಟರ್​ರನ್ನು ಸೈಡ್​ ಲೈನ್ ಮಾಡಿಲ್ಲ


ಯತ್ನಾಳ್ ಹೇಳಿಕೆಯಿಂದ ಬಿಜೆಪಿಗೆ ಡ್ಯಾಮೇಜ್ ಆಗೋದು ಖಚಿತ ಎಂದು ಅರುಣ್​ ಸಿಂಗ್ ಹೇಳಿದ್ದಾರೆ. ಅಲ್ಪಸಂಖ್ಯಾತ ಮೀಸಲಾತಿ ಕೊಡಬಾರದೆಂದು ಶಾಸಕ ಅರವಿಂದ ಬೆಲ್ಲದ್ ಮತ್ತು ಯತ್ನಾಳ್ ಹೇಳಿದ್ದು ಅವರ ವೈಯಕ್ತಿಕ ಅಭಿಪ್ರಾಯ. ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರನ್ನು ಪಕ್ಷ ಸೈಡ್‌ಲೈನ್ ಮಾಡಿಲ್ಲ, ಅವರು ಕೋರ್ ಕಮಿಟಿಯಲ್ಲಿದ್ದಾರೆ. ಅವರಿಗೂ ಟಿಕೆಟ್ ಸಿಗಲಿದೆ. ನಮ್ಮ ಪಕ್ಷದ ನಾಯಕರಲ್ಲಿ ಯಾವುದೇ ಕಿತ್ತಾಟಗಳಿಲ್ಲ ಎಂದು ಅರುಣ್ ಸಿಂಗ್ ಸಮಜಾಯಿಷಿ ನೀಡಿದರು.


ರಾಹುಲ್ ಫ್ಲಾಪ್ ಜೋಡೋ


ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಭಾರತ್ ಜೋಡೋ ಫ್ಲಾಪ್ ಯಾತ್ರೆ ಎಂದು ಅರುಣ್ ಸಿಂಗ್ ಇದೇ ಸಂದರ್ಭದಲ್ಲಿ ಲೇವಡಿ ಮಾಡಿದ್ದಾರೆ. ಭಾರತ್ ಜೋಡೋ ಯಾತ್ರೆ ಅಲ್ಲ ನಾಯಕರ ಜೋಡು ಯಾತ್ರೆ ಸಾಗಿದೆ. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಪರಸ್ಪರ ಮುಖ ನೋಡಿಕೊಳ್ಳಲಾರದ ಸ್ಥಿತಿಗೆ ತಲುಪಿದ್ದಾರೆ. ಹೀಗಾಗಿ ಅವರನ್ನು ಜೋಡಿಸೋಕೆ ಅಂತ ರಾಹುಲ್ ಭಾರತ್ ಜೋಡೋ ಆರಂಭಿಸಿದ್ದಾರೆ. ರಾಹುಲ್ ಗಾಂಧಿ ವಾಯುವಿಹಾರಕ್ಕೆ  ಈ ಯಾತ್ರೆ ಸೀಮಿತವಾಗಿದೆ.


ಇದನ್ನೂ ಓದಿ: Murugha Mutt: ಮುರುಘಾಮಠದ ಪ್ರಭಾರ ಪೀಠಾಧ್ಯಕ್ಷರ ನೇಮಕ; ಬಸವಪ್ರಭು ಶ್ರೀಗಳಿಗೆ ಪೂಜಾ ಕೈಂಕರ್ಯದ ಉಸ್ತುವಾರಿ


ಇದು ಡಿಕೆ, ಸಿದ್ದು ಜೋಡಿಸೋ ಯಾತ್ರೆ


ಸಿದ್ದರಾಮಯ್ಯ, ಡಿಕೆಶಿ ಅಧಿಕಾರದಲ್ಲಿ ಇದ್ದಾಗ ಸಾಕಷ್ಟು ಹಗರಣಗಳಾಗಿವೆ. ಕಾಂಗ್ರೆಸ್‌ನ ಪಾದಯಾತ್ರೆ ಕೇವಲ ಡಿಕೆಶಿ ಮತ್ತು ಸಿದ್ದರಾಮಯ್ಯನವರನ್ನು ಜೋಡಿಸುವ ಯಾತ್ರೆಯಾಗಿದೆ. ರಾಹುಲ್ ಗಾಂಧಿ ಇಬ್ಬರನ್ನೂ ಬಲವಂತವಾಗಿ ಕೂಡಿಸಲು ಹೊರಟಿದ್ದಾರೆ. ಡಿಕೆಶಿ ಮತ್ತು ಸಿದ್ದರಾಮಯ್ಯ ಪರಸ್ಪರ ಐದು ನಿಮಿಷ ಕಣ್ಣಲ್ಲಿ ಕಣ್ಣಿಟ್ಟು ಮತಾಡಲ್ಲಾ, ಪರಸ್ಪರ ಕಚ್ಚಾಟ ಮಾಡಿಕೊಂಡಿದ್ದಾರೆ. ರಾಹುಲ್ ಗಾಂಧಿ ಯಾತ್ರೆ ಪ್ಲಾಫ್ ಶೋ ಆಗಿದೆ ಎಂದು ಅರುಣ್ ಸಿಂಗ್ ಅಭಿಪ್ರಾಯಪಟ್ಟರು.


ಬಿಜೆಪಿ ಸರ್ಕಾರದ ರಚನೆಗೆ ಟ್ರೆಂಡ್


ದೇಶದಲ್ಲಿ ಬಿಜೆಪಿಯಿಂದ ಪುನಃ ಸರ್ಕಾರ ರಚಿಸುವ ಟ್ರೆಂಡ್ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಂಪೂರ್ಣ ಶಕ್ತಿಯೊಂದಿಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ರಾಜ್ಯದ ಪ್ರತಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾರ್ಯಕರ್ತರು ಸಂಕಲ್ಪ‌ ಮಾಡಿದ್ದಾರೆ. ರಾಜ್ಯದಲ್ಲಿ 150 ಸೀಟುಗಳೊಂದಿಗೆ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ.


ಇದನ್ನೂ ಓದಿ: Siddaramaiah Vs Sriramulu: ದಾಖಲೆ ಇಟ್ಕೊಂಡು ಡಿಕೆಶಿಗೆ ಸಿದ್ದರಾಮಯ್ಯ ಬ್ಲ್ಯಾಕ್​ಮೇಲ್; ಶ್ರೀರಾಮುಲು ಸ್ಫೋಟಕ ಹೇಳಿಕೆ


ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ


ಯಡಿಯೂರಪ್ಪ ಮಾರ್ಗದರ್ಶನದಲ್ಲಿ, ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದ್ದೇವೆ. ದೇಶದ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಕಚ್ಚಾಡುವ ಸರ್ಕಾರ ನಡೆಸುತ್ತಿದೆ. ಬಿಜೆಪಿ ಎಸ್‌ಎಸಿಎಸ್‌ಟಿ ಕಲ್ಯಾಣಕ್ಕೆ ಸಮರ್ಪಿತವಾಗಿ ಕೆಲಸ ಮಾಡುತ್ತಿದೆ. ಡಬಲ್ ಎಂಜಿನ್ ಸರ್ಕಾರಕ್ಕೆ ಜನತೆಯ ಸಂಪೂರ್ಣ ಬೆಂಬಲ ಸಿಗಲಿದೆ ಎಂದು ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.

Published by:ಪಾವನ ಎಚ್ ಎಸ್
First published: