ಮುನಿರತ್ನ ಅವರಿಗೆ ನಟನಾಗಿ ಶುಭಕೋರಿದ್ದೇನೆ, ಜೆಡಿಎಸ್‌ ನಾಯಕನಾಗಿ ಅಲ್ಲ; ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟನೆ

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದ ಅವಧಿಯಲ್ಲಿ ಹೆಚ್‌.ಡಿ. ಕುಮಾರಸ್ವಾಮಿ ಅವರ ಸರ್ಕಾರವನ್ನು ಉರುಳಿಸುವಲ್ಲಿ ರಾಜರಾಜೇಶ್ವರಿ ನಗರದ ಅಂದಿನ ಕಾಂಗ್ರೆಸ್ ಶಾಸಕ ಮುನಿರತ್ನ ಪ್ರಮುಖ ಪಾತ್ರ ವಹಿಸಿದ್ದರು. ಹೀಗಾಗಿ ಇವರ ಹುಟ್ಟುಹಬ್ಬಕ್ಕೆ ನಿಖಿಲ್‌ ಕುಮಾರಸ್ವಾಮಿ ಶುಭ ಕೋರಿದ ಪ್ರಸಂಗ ಅನೇಕ ಜೆಡಿಎಸ್ ‌ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು.

ನಿಖಿಲ್ ಕುಮಾರಸ್ವಾಮಿ.

ನಿಖಿಲ್ ಕುಮಾರಸ್ವಾಮಿ.

  • Share this:
ಬೆಂಗಳೂರು (ಜುಲೈ 25); ಅನರ್ಹ ಶಾಸಕ ಮುನಿರತ್ನ ಹೆಚ್‌.ಡಿ. ಕುಮಾರಸ್ವಾಮಿ ಅವರಿಗೆ ಏನೇ ದ್ರೋಹ ಬಗೆದಿರಬಹುದು. ಆದರೆ, ನಾನು ಅವರನ್ನು ಓರ್ವ ಚಿತ್ರ ನಿರ್ಮಾಪಕ ಎಂದು ಭಾವಿಸಿ ಅವರ ಹುಟ್ಟುಹಬ್ಬಕ್ಕೆ ಓರ್ವ ನಟನಾಗಿ ಶುಭ ಕೋರಿದ್ದೇವೆ ವಿನಃ ಜನತಾದಳದ ನಾಯಕನಾಗಿ ಅಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದ ಅವಧಿಯಲ್ಲಿ ಹೆಚ್‌.ಡಿ. ಕುಮಾರಸ್ವಾಮಿ ಅವರ ಸರ್ಕಾರವನ್ನು ಉರುಳಿಸುವಲ್ಲಿ ರಾಜರಾಜೇಶ್ವರಿ ನಗರದ ಅಂದಿನ ಕಾಂಗ್ರೆಸ್ ಶಾಸಕ ಮುನಿರತ್ನ ಪ್ರಮುಖ ಪಾತ್ರ ವಹಿಸಿದ್ದರು. ಹೀಗಾಗಿ ಇವರ ಹುಟ್ಟುಹಬ್ಬಕ್ಕೆ ನಿಖಿಲ್‌ ಕುಮಾರಸ್ವಾಮಿ ಶುಭ ಕೋರಿದ ಪ್ರಸಂಗ ಅನೇಕ ಜೆಡಿಎಸ್ ‌ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು.
ಈ ಕುರಿತು ಇಂದು ತಮ್ಮ ಫೇಸ್‌ಬುಕ್‌ ಬರವಣಿಗೆ ಮೂಲಕ ಸ್ಪಷ್ಟನೆ ನೀಡಿರುವ ನಿಖಿಲ್‌ ಕುಮಾರಸ್ವಾಮಿ‌, "ಮುನಿರತ್ನ ಅವರ ಹುಟ್ಟಹಬ್ಬಕ್ಕೆ ಶುಭ ಕೋರಿದ್ದಕ್ಕೆ ಹಲವರು ಆಕ್ಷೇಪಿಸಿರುವುದು ನನ್ನ ಗಮನಕ್ಕೆ ಬಂತು. 'ಕುಮಾರಸ್ವಾಮಿ ಅವರಿಗೆ ದ್ರೋಹ ಬಗೆದವರಿಗೆ ನೀವು ಶುಭಕೋರಬಾರದಿತ್ತು‘ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಎಲ್ಲರ ಅಭಿಪ್ರಾಯಗಳನ್ನೂ ಗೌರವಿಸುತ್ತೇನೆ. ನಿರ್ಮಾಪಕನಿಗೆ ನಟನಾಗಿ ನಾನು ಶುಭಕೋರಿದ್ದೇನೇ ಹೊರತು ಯುವ ಜನತಾದಳ ನಾಯಕನಾಗಿ ಅಲ್ಲ.

ರಾಜಕೀಯ ಸಂಘರ್ಷಗಳನ್ನು ಮೀರಿ ದೇವೇಗೌಡರು ಮೋದಿ ಅವರಿಗೆ ಶುಭ ಕೋರುತ್ತಾರೆ. ಮೋದಿ ದೇವೇಗೌಡರಿಗೆ ಶುಭ ಕೋರುತ್ತಾರೆ. ಯಡಿಯೂರಪ್ಪನವರು ಕುಮಾರಸ್ವಾಮಿ ಅವರಿಗೆ ಶುಭ ಆಶಿಸುತ್ತಾರೆ. ಕುಮಾರಸ್ವಾಮಿ ಅವರೂ ಶುಭಾರೈಕೆಗಳನ್ನು ತಿಳಿಸುತ್ತಾರೆ. ಇದು ಕರ್ನಾಟಕದ ರಾಜಕೀಯದ ಸತ್ಸಂಪ್ರದಾಯ. ಹೀಗಾಗಿ ನನ್ನ ಶುಭಕೋರಿಕೆಯಲ್ಲಿ ತಪ್ಪಿರದು ಎಂದು ಭಾವಿಸುತ್ತೇನೆ.

ಇದನ್ನೂ ಓದಿ : Karnataka Rain Report: ಈ ವರ್ಷ ಕೈಕೊಟ್ಟ ಮುಂಗಾರು ಮಳೆ; ರೈತರ ಪಾಲಿಗೆ ಈ ವರ್ಷ ಕಷ್ಟ ಕಷ್ಟಮುನಿರತ್ನ ರಾಜಕೀಯವಾಗಿ ಕುಮಾರಸ್ವಾಮಿ ಅವರಿಗೆ ಏನೇ ಮಾಡಿರಬಹುದು. ಅವುಗಳಿಗೆ ಕಣದಲ್ಲಿ ಉತ್ತರಿಸುವ ಪ್ರಯತ್ನ ಮಾಡೋಣ. ಅದರಲ್ಲಿ ಎರಡು ಮಾತಿಲ್ಲ. ಕಾರ್ಯಕರ್ತನಾಗಿ, ಯುವ ಜನತಾದಳದ ಮುಂದಾಳುವಾಗಿ ನನ್ನ ದುಡಿಮೆ ಪಕ್ಷಕ್ಕೆ ಮಾತ್ರ" ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಮುನಿರತ್ನ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಿದ ವಿವಾದಕ್ಕೂ ಈ ಮೂಲಕ ಇತಿಶ್ರೀ ಹಾಡಿದ್ದಾರೆ.
Published by:MAshok Kumar
First published: