ಬಿಜೆಪಿಯ ಭರವಸೆಯಂತೆ ಮುನಿರತ್ನಗೆ ಟಿಕೆಟ್- ಉಪ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ : ಸಚಿವ ಕೆ.ಸುಧಾಕರ್

ಉಪಚುನಾವಣೆಗಿಂತ ಕೊರೋನಾ ನಿಯಂತ್ರಣ ಅವಶ್ಯವಾದ್ದರಿಂದ ಉಪಚುನಾವಣೆ ಪ್ರಚಾರದ ವೇಳೆ ಎಲ್ಲಾ ಪಕ್ಷಗಳು ಜಾಗೃತಿ ವಹಿಸಿ, ಡಿಜಿಟಲ್‌ ಮೂಲಕ‌ ಪ್ರಚಾರ ನಡೆಸಿದರೆ ಉತ್ತಮ

news18-kannada
Updated:September 29, 2020, 6:49 PM IST
ಬಿಜೆಪಿಯ ಭರವಸೆಯಂತೆ ಮುನಿರತ್ನಗೆ ಟಿಕೆಟ್- ಉಪ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ : ಸಚಿವ ಕೆ.ಸುಧಾಕರ್
ಸಚಿವ ಕೆ.ಸುಧಾಕರ್
  • Share this:
ಬೆಂಗಳೂರು(ಸೆಪ್ಟೆಂಬರ್​. 29): ಪಕ್ಷದ ಭರವಸೆಯಂತೆ ಮುನಿರತ್ನ ಅವರಿಗೆ ಟಿಕೆಟ್‌ ಸಿಗುವ ವಿಶ್ವಾಸವಿದ್ದು, ಯಾವುದೇ ಪ್ರತಿರೋಧವಿಲ್ಲದೇ ಅವರು ಉಪಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುನಿರತ್ನ ಅವರು ಶಾಸಕ‌ ಸ್ಥಾನವನ್ನು ತ್ಯಜಿಸಿ ಸರ್ಕಾರ ರಚನೆಗಾಗಿ ಕೊಡುಗೆ ನೀಡಿದ್ದಾರೆ. ಆ ವೇಳೆ ನೀಡಿದ ಭರವಸೆಯಂತೆ ಹಿರಿಯ ನಾಯಕರು ಖಂಡಿತ ನ್ಯಾಯಯುತವಾದ ತೀರ್ಮಾನ ಮಾಡುತ್ತಾರೆ ಎಂಬ ವಿಶ್ವಾಸವಿದೆ. ಉಪ ಚುನಾವಣೆಯಲ್ಲಿ ಗೆದ್ದ ನಮ್ಮೆಲ್ಲರಿಗೂ ಭರವಸೆಯಂತೆ ನಡೆದುಕೊಂಡಿದ್ದಾರೆ. ಹೀಗಾಗಿ ಮುನಿರತ್ನ ಅವರಿಗೂ ಸಹ ಈ ಬಾರಿ ಯಾವುದೇ ಅನ್ಯಾಯವಾಗುವುದಿಲ್ಲ. ಯಾರಿಗೆ ಆದ್ಯತೆ ನೀಡಬೇಕು ಎಂಬುದು ಪಕ್ಷದ‌ ನಾಯಕರಿಗೆ ತಿಳಿದಿದೆ. ಪಕ್ಷದ ವರಿಷ್ಠರು ತಿರ್ಮಾನ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಸುಧಾಕರ್, ನಮ್ಮ‌ ನಾಯಕರು ಸದೃಢರಾಗಿದ್ದಾರೆ, ನಾಯಕತ್ವ ಬದಲಾವಣೆ ಹೇಳಿಕೆಯ ಊಹಾಪೋಹಗಳಿಗೆ ಕಿವಿಗೊಡಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.

ಇತ್ತೀಚೆಗಷ್ಟೆ ಅಗಲಿದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರನ್ನು ರಾಜಕೀಯವಾಗಿ ಎಳೆದು ತರುವುದು ಸರಿಯಲ್ಲ. ಅವರ ಕುಟುಂಬಸ್ಥರು ಈ ನೋವಿನಿಂದ ಇನ್ನೂ ಹೊರಬಂದಿಲ್ಲ, ಹೀಗಿರುವಾಗ ಅವರ ಹೆಸರನ್ನು ರಾಜಕೀಯವಾಗಿ ಬಳಸಬೇಡಿ ಎಂದರು.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು‌ ನೀಡಿದ ಸಚಿವ ಸುಧಾಕರ್, ಉಪ ಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ, ಮುಂದಿನ‌ 10 ವರ್ಷ ಕಾಂಗ್ರೆಸ್‌‌ ಪಕ್ಷವನ್ನು ವಿರೋಧ ಪಕ್ಷದಲ್ಲೇ ಕೂರಿಸುತ್ತೇವೆ ಎಂದು ಯಡಿಯೂರಪ್ಪ ಅವರು ದಿಟ್ಟ ಉತ್ತರ ನೀಡಿದ್ದರೂ ನಾಯಕತ್ವ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಅವರು ಹೇಳಿಕೆ ನೀಡುವರೆ ಎಂದರು.

ಉಪ ಚುನಾವಣೆ ದಿನಾಂಕ ಘೋಷಣೆ :

ಕೇಂದ್ರ ಚುನಾವಣೆ ಆಯೋಗ ಶಿರಾ ಹಾಗೂ ಆರ್‌. ಆರ್‌ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಿಸಿದೆ. ಮುಂದಿನ ನವೆಂಬರ್‌ 3ನೇ ತಾರೀಕಿನಂದು ಈ ಎರಡು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇದಕ್ಕಾಗಿ ಅಕ್ಟೋಬರ್‌ 9ರಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಬಳಿಕ 17ನೇ ತಾರೀಕಿನಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಇದಾದ ನಂತರ ನವೆಂಬರ್ 10ರಂದು ಎರಡು ಕ್ಷೇತ್ರದ ಫಲಿತಾಂಶ ಪ್ರಕಟಗೊಳ್ಳಲಿದೆ.

ಇದನ್ನೂ ಓದಿ : ಮುಂದಿನ ನಾಲ್ಕು ತಿಂಗಳಲ್ಲಿ ಸುರೇಶ್ ಅಂಗಡಿ ಸಿಎಂ ಆಗುತ್ತಿದ್ದರು ; ಸೋದರ ಮಾವ ಲಿಂಗರಾಜ್ ಪಾಟೀಲ್ ಹೇಳಿಕೆ

ಸಿಎಂ ಬಿಎಸ್​ ಯಡಿಯೂರಪ್ಪನವರು ಸಚಿವ ಸಂಪುಟ ವಿಸ್ತರಣೆಯನ್ನು ಬಹುತೇಕ ಮುಂದೂಡಲು ಚಿಂತಿಸಿದ್ದಾರೆ. ಹೇಗಿದ್ದರೂ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್​​​ ಗ್ರೀನ್​​ ಸಿಗ್ನಲ್​​ ನೀಡೋದಿಲ್ಲ. ಹಾಗಾಗಿ ಸದ್ಯ ಉಪಚುನಾವಣೆ ನಂತರ ಸಂಪುಟ ವಿಸ್ತರಣೆ ಮಾಡೋಣ. ಈಗ ಬೇಡ ಎಂದು ಸಿಎಂ ಯಡಿಯೂರಪ್ಪ ನಿರ್ಧರಿಸಿದ್ದಾರೆನ್ನಲಾಗಿದೆ. ಇದರಿಂದ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ.

ಉಪಚುನಾವಣೆಗಿಂತ ಕೊರೋನಾ ನಿಯಂತ್ರಣ ಅವಶ್ಯವಾದ್ದರಿಂದ ಉಪಚುನಾವಣೆ ಪ್ರಚಾರದ ವೇಳೆ ಎಲ್ಲಾ ಪಕ್ಷಗಳು ಜಾಗೃತಿ ವಹಿಸಿ, ಡಿಜಿಟಲ್‌ ಮೂಲಕ‌ ಪ್ರಚಾರ ನಡೆಸಿದರೆ ಉತ್ತಮ ಎಂದು ಸಲಹೆ ನೀಡಿದರು.
Published by: G Hareeshkumar
First published: September 29, 2020, 6:38 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading