Covid Guidelines: ಕೋವಿಡ್‌ ಕಂಟ್ರೋಲ್‌ಗೆ ಮುಂದಾದ ಆರೋಗ್ಯ ಇಲಾಖೆ, ಗೌರಿಗಣೇಶ ಹಬ್ಬದ ಹೊಸ್ತಿಲಲ್ಲೇ ಟಫ್ ರೂಲ್ಸ್ ಫಿಕ್ಸ್!

ಗೌರಿ ಗಣೇಶ ಹಬ್ಬ ಸೇರಿದಂತೆ ಸಾಲು ಸಾಲು ಹಬ್ಬಗಳು ಬರುತ್ತಿವೆ. ಈ ಸಂದರ್ಭದಲ್ಲಿ ಕೋವಿಡ್ ಸೋಂಕು ಮತ್ತಷ್ಟು ಹೆಚ್ಚಾಗುವ ಆತಂಕವನ್ನು ತಜ್ಞರು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮುನ್ನೆಚ್ಚರಿಕೆ ಕೈಗೊಂಡಿರುವ ಆರೋಗ್ಯ ಇಲಾಖೆ, ಬೆಂಗಳೂರು ಸೇರಿದಂತೆ  ರಾಜ್ಯಾದ್ಯಂತ ಮತ್ತೆ ಟಫ್ ರೂಲ್ಸ್ ಜಾರಿಗೆ ತರಲು ಯೋಚಿಸುತ್ತಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು: ವಿಶ್ವದಾದ್ಯಂತ ಮತ್ತೆ ಕೋವಿಡ್ (Covid) ಅಬ್ಬರಿಸುತ್ತಿದೆ. ಚೀನಾದಲ್ಲಂತೂ (China) ಲ್ಯಾಂಗ್ಯಾ ಹೆನಿಪಾವೈರಸ್ (Langya Henipavirus) ಎಂಬ ಸೋಂಕು ಕಾಣಿಸಿಕೊಂಡಿದೆ. ಇತ್ತ ಭಾರತದಲ್ಲೂ (India) ಕೊರೋನಾ ವೈರಸ್ ಸೋಂಕು (Corona Vorus Infection) ಜಾಸ್ತಿಯಾಗುತ್ತಿದೆ. ಇದರ ನಡುವೆಯೇ ಗೌರಿ ಗಣೇಶ ಹಬ್ಬ (Gowri Ganesha Festival) ಸೇರಿದಂತೆ ಸಾಲು ಸಾಲು ಹಬ್ಬಗಳು ಬರುತ್ತಿವೆ. ಈ ಸಂದರ್ಭದಲ್ಲಿ ಕೋವಿಡ್ ಸೋಂಕು ಮತ್ತಷ್ಟು ಹೆಚ್ಚಾಗುವ ಆತಂಕವನ್ನು ತಜ್ಞರು (Experts) ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮುನ್ನೆಚ್ಚರಿಕೆ ಕೈಗೊಂಡಿರುವ ಆರೋಗ್ಯ ಇಲಾಖೆ, ಬೆಂಗಳೂರು (Bengaluru) ಸೇರಿದಂತೆ  ರಾಜ್ಯಾದ್ಯಂತ ಮತ್ತೆ ಟಫ್ ರೂಲ್ಸ್ (Tough Rules) ಜಾರಿಗೆ ತರಲು ಯೋಚಿಸುತ್ತಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಆಯುಕ್ತ ಡಿ. ರಂದೀಪ್‌ ಈ ಬಗ್ಗೆ ಸುಳಿವು ನೀಡಿದ್ದಾರೆ.

ರಾಜ್ಯಕ್ಕೆ ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರ

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಕೇಂದ್ರ ಸರ್ಕಾರ ಆತಂಕ ವ್ಯಕ್ತಪಡಿಸಿದೆ. ಕರ್ನಾಟಕ, ಕೇರಳ, ದೆಹಲಿ, ಒಡಿಶಾ, ತಮಿಳುನಾಡು, ತೆಲಂಗಾಣ ಸೇರಿದಂತೆ 7 ರಾಜ್ಯಗಳಿಗೆ ಎಚ್ಚರಿಕೆ ವಹಿಸುವಂತೆ ಪತ್ರ ಬರೆದು, ಸೂಚಿಸಿದೆ. ಈ ಬಗ್ಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಮುಂಬರುವ ಹಬ್ಬದ ದಿನಗಳು ಮತ್ತು ಜನರ ಗುಂಪುಗೂಡುವಿಕೆಯು ದೇಶದ ಅನೇಕ ಭಾಗಗಳಲ್ಲಿ ಕೋವಿಡ್ 19 ಸೇರಿದಂತೆ ಸಾಂಕ್ರಾಮಿಕ ಕಾಯಿಲೆಗಳ ಹರಡುವಿಕೆಗೆ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತೆ ಕಡ್ಡಾಯವಾಗುತ್ತಾ ಮಾಸ್ಕ್?

ಸಾರ್ವಜನಿಕ ಜಾಗಗಳಲ್ಲಿ ಮಾಸ್ಕ್‌ ಧರಿಸದವರಿಗೆ ದಂಡ ವಿಧಿಸುವಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿತ್ತು. ಆದರೆ ರಾಜ್ಯ ಸರ್ಕಾರ ದಂಡ ವಿಧಿಸುವುದರಿಂದ ವಿನಾಯಿತಿ ನೀಡಿತ್ತು. ಆದರೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮಾಸ್‌್ಕ ಧರಿಸದವರಿಗೆ ದಂಡ ವಿಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಡಿ. ರಂದೀಪ್‌ ಹೇಳಿದ್ದಾರೆ.

ಇದನ್ನೂ ಓದಿ: Covid 19: ಕರ್ನಾಟಕದಲ್ಲಿ ಹೆಚ್ಚಾಗುತ್ತಾ ಕೋವಿಡ್ ಅಬ್ಬರ? 7 ರಾಜ್ಯಗಳಿಗೆ ಕೇಂದ್ರದಿಂದ ಎಚ್ಚರಿಕೆ!

ಪ್ರಾಥಮಿಕ ಸಂಪರ್ಕಿತರಿಗೂ ಟೆಸ್ಟ್ ಕಡ್ಡಾಯ?

ಸದ್ಯ ಕೋವಿಡ್‌ ಸೋಂಕಿತರ ಪ್ರಾಥಮಿಕ ಸಂಪರ್ಕಿತರಲ್ಲಿ ಸೋಂಕಿನ ಗುಣಲಕ್ಷಣಗಳಿದ್ದರೆ ಮಾತ್ರ ಅವರಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿತ್ತು. ಆದರೆ ಇನ್ನು ಮುಂದೆ ಪ್ರಾಥಮಿಕ ಸಂಪರ್ಕಿತರೆಲ್ಲರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸುವ ನಿಯಮ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಸೋಂಕು ಹರಡುವುದನ್ನು ತಡೆಯುವಲ್ಲಿ ಸಂಪರ್ಕಿತರ ಪರೀಕ್ಷೆ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಪರೀಕ್ಷೆಗೆ ಒಳಗಾಗಲು ಜನರು ಹಿಂದೇಟು ಹಾಕುತ್ತಿರುವುದರಿಂದ ಕಡ್ಡಾಯ ಮಾಡುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಗೌರಿ ಗಣೇಶ ಹಬ್ಬಕ್ಕೆ ಪ್ರತ್ಯೇಕ ಮಾರ್ಗಸೂಚಿ?

ಗೌರಿ ಗಣೇಶ ಹಬ್ಬ ಬರುತ್ತಿರುವುದರಿಂದ ಜನ ಸಾಮಾನ್ಯವಾಗಿ ಗುಂಪು ಗೂಡುತ್ತಾರೆ. ಈ ವೇಳೆ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಣೇಶ ಹಬ್ಬಕ್ಕೆ ಪ್ರತ್ಯೇಕ ಮಾರ್ಗಸೂಚಿ ಜಾರಿಗೆ ತರುವ ಚಿಂತನೆ ನಡೆದಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Booster Dose Corbevax: ಕೊವ್ಯಾಕ್ಸಿನ್, ಕೊವಿಶೀಲ್ಡ್ ಪಡೆದವರೇ ಗಮನಿಸಿ; ಕೊರೊನಾ ಬೂಸ್ಟರ್ ಡೋಸ್ ಆಗಿ ಕೊರ್ಬೆವ್ಯಾಕ್ಸ್

ಗಣೇಶೋತ್ಸವದ ಮೇಲೆ ಹದ್ದಿನಕಣ್ಣು?

ಗಣೇಶೋತ್ಸವಕ್ಕೆ ಟಫ್ ರೂಲ್ಸ್ ಜಾರಿ ಮಾಡುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ. ಸಾರ್ವಜನಿಕ ಗಣೇಶೋತ್ಸವಕ್ಕೆ ಹೆಚ್ಚು ಜನಸಂದಣಿ ಸೇರುವಂತಿಲ್ಲ, ಸಾಮಾಜಿಕ ಅಂತರ ಪಾಲನೆ, ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ, ಬೂಸ್ಟರ್ ಡೋಸ್ ಕಡ್ಡಾಯಗೊಳಿಸುವ ಸಾಧ್ಯತೆ ಇದೆ. ಇನ್ನು ಮೈದಾನದಲ್ಲಿ ಅದ್ಧೂರಿ ಗಣೇಶೋತ್ಸವ ಸಂದರ್ಭದಲ್ಲಿ ಫೀವರ್ ಚೆಕ್ ಕಡ್ಡಾಯಗೊಳಿಸುವ ಸಾಧ್ಯತೆ, ಹೆಚ್ಚು ಜನಸಂದಣಿ ಜಾಗದಲ್ಲಿ ಟೆಸ್ಟಿಂಗ್ ಕ್ಯಾಂಪ್, ಸಿಮೀತ ಜನರನ್ನ ನಿಗಧಿಗೊಳಿಸುವ ಸಾಧ್ಯತೆ, ಮಾರ್ಕೆಟ್ ಹಾಗೂ ಜನದಟ್ಟಣೆ ಪ್ರದೇಶಗಳಲ್ಲಿ ಹೆಚ್ಚಿನ ಜನರಿಗೆ ನಿರ್ಬಂಧ ವಿಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎನ್ನಲಾಗುತ್ತಿದೆ.
Published by:Annappa Achari
First published: