ಅಂಬರೀಶ್ ಇರುವವರೆಗೂ ಯಾರಿಗೂ ಮಾತನಾಡುವ ಧೈರ್ಯ ಇರಲಿಲ್ಲ; ಪ್ರತಾಪ್ ಸಿಂಹ ಹೇಳಿಕೆಗೆ ಸುಮಲತಾ ತಿರುಗೇಟು

ಇತ್ತೀಚೆಗೆ ಫೋನ್​ನಲ್ಲಿ ಸಂಸದ ಪ್ರತಾಪ್ ಸಿಂಹ ಅಧಿಕಾರಿಯೊಂದಿಗೆ ಮಾತನಾಡುತ್ತಾ, ಸುಮಲತಾ ವಿರುದ್ಧ ಲಘುವಾಗಿ ಮಾತನಾಡಿದ್ದರು. ಆ ಯಮ್ಮ ಕೆಲಸ ಮಾಡುವುದಿಲ್ಲ. ಮಂಡ್ಯದ ಯಾವುದೇ ಕೆಲಸ ಇದ್ದರೆ ನನ್ನ ಬಳಿ ಬನ್ನಿ ಎಂದು ಹೇಳಿದ್ದ ವಿಡಿಯೋ ವೈರಲ್ ಆಗಿತ್ತು. ಆ ಹೇಳಿಕೆ ಸಂಬಂಧ ಇಂದು ಸುಮಲತಾ ತಿರುಗೇಟು ನೀಡಿದ್ದಾರೆ. 

ಸುಮಲತಾ ಅಂಬರೀಶ್​

ಸುಮಲತಾ ಅಂಬರೀಶ್​

 • Share this:
  ಬೆಂಗಳೂರು; ಪ್ರತಾಪ್ ಸಿಂಹ ಒಬ್ಬ ಸಂಸದನಾಗಿ ಹೇಳಿಕೆ ಕೊಟ್ಟಿಲ್ಲ. ಸಂಸದರ ರೀತಿ ಮಾತನಾಡಿದಿದ್ದರೆ ನಾನು ಉತ್ತರ ಕೊಡುತ್ತಿದ್ದೆ. ಪೇಟೆ ರೌಡಿ ರೀತಿ ಹೇಳಿಕೆ ಕೊಟ್ಟರೆ ನಾನು ಉತ್ತರ ಕೊಡಲ್ಲ. ಚುನಾವಣೆ ಸಮಯದಲ್ಲಿ ನಾನು ಇಂತಹ ಹೇಳಿಕೆಗಳನ್ನು ಎದುರಿಸಿದ್ದೇನೆ ಎಂದು ಮಂಡ್ಯ ಸಂಸದೆ ಸುಮಲತಾ ಅವರು ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ಹೊರಹಾಕಿದರು.

  ಅಂಬರೀಶ್ ಇರುವವರೆಗೂ ಯಾರಿಗೂ ಮಾತನಾಡುವ ಧೈರ್ಯ ಇರಲಿಲ್ಲ. ಅವರು ಹೋದ ಬಳಿಕ ಇಂತಹ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಒಬ್ಬ ಸಂಸದರು ಬಂದಾಗ ಸ್ವತಃ ಜನ ಹೇಳ್ತಾರೆ. ಕೆ.ಆರ್ ಪೇಟೆ ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಬರುತ್ತೆ. ಮಂಡ್ಯಗೆ ಹೋದಾಗ ನನ್ನ ಬಳಿಯೂ ಜನ ಬಂದು ಹೇಳುತ್ತಾರೆ. ಇದು ಸರ್ವೇ ಸಾಮಾನ್ಯ. ಇದನ್ನು ಈ ರೀತಿ ಪ್ರಚಾರ ಮಾಡುವುದು ಸರಿಯಲ್ಲ. ನನಗೂ ಅಲ್ಲಿಯ ಜನ ರಸ್ತೆ ಸರಿಯಿಲ್ಲ, ಚರಂಡಿ ಇಲ್ಲ ಅಂತ ಹೇಳಿದ್ದಾರೆ. ಆದರೆ ನಾನು ಸಂಸದರ ಬಗ್ಗೆ ಎಂದೂ ಮಾತನಾಡಿಲ್ಲ. ಜನ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಉತ್ತರ ಕೊಡುತ್ತಿದ್ದಾರೆ. ಇದನ್ನು ಅರ್ಥ ಮಾಡಿಕೊಂಡು ಪ್ರತಾಪಸಿಂಹ ಹೇಳಿಕೆ ಕೊಡಲಿ ಎಂದರು.

  ಇದನ್ನು ಓದಿ: 4ನೇ ಅವಧಿಗೆ ಬಿಹಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾವಚನ ಸ್ವೀಕಾರ; ಸುಶೀಲ್ ಮೋದಿಗಿಲ್ಲ ಡಿಸಿಎಂ ಸ್ಥಾನ

  ಇತ್ತೀಚೆಗೆ ಫೋನ್​ನಲ್ಲಿ ಸಂಸದ ಪ್ರತಾಪ್ ಸಿಂಹ ಅಧಿಕಾರಿಯೊಂದಿಗೆ ಮಾತನಾಡುತ್ತಾ, ಸುಮಲತಾ ವಿರುದ್ಧ ಲಘುವಾಗಿ ಮಾತನಾಡಿದ್ದರು. ಆ ಯಮ್ಮ ಕೆಲಸ ಮಾಡುವುದಿಲ್ಲ. ಮಂಡ್ಯದ ಯಾವುದೇ ಕೆಲಸ ಇದ್ದರೆ ನನ್ನ ಬಳಿ ಬನ್ನಿ ಎಂದು ಹೇಳಿದ್ದ ವಿಡಿಯೋ ವೈರಲ್ ಆಗಿತ್ತು. ಆ ಹೇಳಿಕೆ ಸಂಬಂಧ ಇಂದು ಸುಮಲತಾ ತಿರುಗೇಟು ನೀಡಿದ್ದಾರೆ.

  ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆ ವಿಚಾರವಾಗಿ ನಾನು, ರಾಜಕೀಯ, ಜೆಡಿಎಸ್ ಮೈತ್ರಿ ವಿಚಾರ ಪ್ರಸ್ತಾಪ ಮಾಡಲ್ಲ. ಪಕ್ಷದ ವಿಚಾರ ಮಾತನಾಡಲ್ಲ. ಏನೇನು ಬೆಳವಣಿಗೆ ಆಗುತ್ತಿದೆ ಅಂತ ನನಗೂ ಗೊತ್ತು. ಆದರೆ ನಾನು ಹೇಳೋದಿಷ್ಟೇ, ರೈತರ ಪರ ಕೆಲಸ ಮಾಡೋರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಲಿ.  ಇದನ್ನೇ ಸಿಎಂ ಬಳಿಯೂ ಮನವಿ ಮಾಡಿದ್ದೇನೆ ಎಂದು ಹೇಳಿದರು.
  Published by:HR Ramesh
  First published: