ರೈತರ ಪ್ರತಿಭಟನೆ ಜೊತೆಗೆ ಬೆಂಗಳೂರಿನಲ್ಲಿ ಇಂದು ಆಶಾ ಕಾರ್ಯಕರ್ತೆಯರಿಂದಲೂ ಮುಷ್ಕರ

ಜುಲೈನಲ್ಲಿ ಸರ್ಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ ಮಾಡಿದ್ದ, ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 12 ಸಾವಿರ ಗೌರವಧನ ನಿಗದಿ ಮಾಡುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಈ ಭರವಸೆ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಈ ಹಿನ್ನಲೆಯಲ್ಲಿ ರಾಜಧಾನಿಯಲ್ಲಿ ಮತ್ತೊಮ್ಮೆ ಪ್ರತಿಭಟನೆಗೆ ಆಶಾ ಕಾರ್ಯಕರ್ತೆಯರು ಸಜ್ಜಾಗಿದ್ದಾರೆ. 

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು(ಸೆ. 23): ಕೃಷಿ ಮಸೂದೆ ವಿರೋಧಿಸಿ  ರೈತರು ಕಳೆದ ಮೂರು ದಿನಗಳಿಂದ  ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಆಶಾ ಕಾರ್ಯಕರ್ತರು ಕೂಡ ಇವತ್ತಿನಿಂದ ಸರ್ಕಾರದ ವಿರುದ್ಧ ಮುಷ್ಕರ ನಡೆಸಲು ಸಿದ್ಧತೆ ನಡೆಸಿದ್ದಾರೆ. ಈ ಹಿಂದೆ ಸರ್ಕಾರ ನೀಡಿದ ಭರವಸೆ ಸುಳ್ಳಾದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಅವರು ಪ್ರತಿಭಟನೆಗೆ ಸಜ್ಜಾಗುತ್ತಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ನಾಳೆ ಫ್ರೀಡಂ ಪಾರ್ಕ್​ ಸೇರಲಿರುವ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ. ಜುಲೈನಲ್ಲಿ ಸರ್ಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ ಮಾಡಿದ್ದ, ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 12 ಸಾವಿರ ಗೌರವಧನ ನಿಗದಿ ಮಾಡುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಈ ಭರವಸೆ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಹೀಗಾಗಿ ರಾಜಧಾನಿಯಲ್ಲಿ ಮತ್ತೊಮ್ಮೆ ಪ್ರತಿಭಟನೆಗೆ ಆಶಾ ಕಾರ್ಯಕರ್ತೆಯರು ಸಜ್ಜಾಗಿದ್ದಾರೆ. 

ಜುಲೈನಲ್ಲಿ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತರ ಸಂಘದ ನೇತೃತ್ವದಲ್ಲಿ ರಾಜ್ಯದ ಆಶಾ ಕಾರ್ಯಕರ್ತರು 20 ದಿನಗಳ ಕಾಲ ಮುಷ್ಕರ ನಡೆಸಿದ್ದರು. ಕೊರೋನಾ ಸಂಕಷ್ಟ ಕಾಲದಲ್ಲಿ ಸೇರಿದಂತೆ ಎಲ್ಲಾ ಸಮಯದಲ್ಲಿಯೂ ಜೀವ ಪಣಕ್ಕಿಟ್ಟು ನಾವು ಕಾರ್ಯನಿರ್ವಹಿಸಿದ್ದೇವೆ. ವೇತನಕ್ಕಿಂತ ಹೆಚ್ಚಿನ ಕಾರ್ಯವನ್ನು ನಾವು ನಿರ್ವಹಿಸುತ್ತಿದ್ದು,  ತಮಗೆ 12 ಸಾವಿರ ಗೌರವ ಧನ ನೀಡಬೇಕು. ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಇದರತ್ತ ಗಮನಹರಿಸಬೇಕು ಎಂದು ಮನವಿ ಮಾಡಿದ್ದರು. ಈ ವೇಳೆ ಆಶಾ ಕಾರ್ಯಕರ್ತರಿಗೆ ಹಲವು ಸಂಘಟನೆಗಳು ಕೂಡ ಬೆಂಬಲ ನೀಡಿದ್ದವು. ಬಳಿಕ ಸಿಎಂ ನೀಡಿದ ಭರವಸೆ ಹಿನ್ನಲೆ ಪ್ರತಿಭಟನೆ ಕೈ ಬಿಟ್ಟಿದ್ದರು.

Asha workers Strikes begins from tomorrow , Asha activist, Asha workers, Asha workers protest, Farmers protest, Karnataka Farmers protest, Protest in Bangalore, Farmers protest in bengaluru, protest against government, karnataka government, land reform act, APMC, Kurubur shanthakumar, Farmers leader, Sangolli Rayanna railway station, Vidhan souda,

ಇದೀಗ ಪ್ರತಿಭಟನೆ ನಡೆಸಿ ಎರಡು ತಿಂಗಳು ಕಳೆದರೂ ಮಾಸಿಕ ಗೌರವಧನದಲ್ಲಿ ಹೆಚ್ಚಳವಾಗಿಲ್ಲ. ಈ ಹಿನ್ನಲೆಯಲ್ಲಿ ಮತ್ತೊಮ್ಮೆ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಅಸಮಾಧಾನ ಹೊರ ಹಾಕಿದ್ದಾರೆ. ಅನೇಕ ಬಾರಿ ನಾವು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರೂ ವ್ಯರ್ಥವಾಗಿದೆ ಎಂಬ ಬೇಸರ ಹೊರ ಹಾಕಿದ್ದಾರೆ.

ಮೂರನೇ ದಿನ ಕೂಡ ಮುಂದುವರೆಯಲಿದೆ ರೈತ ಪ್ರತಿಭಟನೆ

ಭೂಸುಧಾರಣಾ ಕಾಯ್ದೆ, ಎಪಿಎಂಎಸಿ ಕಾಯ್ದೆ, ವಿದ್ಯುತ್ ಕಾಯ್ದೆ ವಿರೋಧಿಸಿ ರೈತರು, ಕಾರ್ಮಿಕರು ಮತ್ತು ದಲಿತರ ಸಂಘಟನೆಗಳು  ನಡೆಸುತ್ತಿರುವ ಪ್ರತಿಭಟನೆ ನಾಳೆ ಕೂಡ ಮುಂದುವರೆಯಲಿದೆ. ರೈತರ ಪ್ರತಿಭಟನೆಗೆ ಇದುವರೆಗೆ ಸರ್ಕಾರದಿಂದ ಯಾವುದೇ ಸ್ಪಂದನೆ ವ್ಯಕ್ತವಾಗಿಲ್ಲ. ಈ ಹಿನ್ನೆಲೆ ನಾಳೆ ಮುಷ್ಕರ ತೀವ್ರ ಸ್ವರೂಪ ಪಡೆಯಲಿದೆ.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನ ವಿರೋಧಿಸಿ ಸೆಪ್ಟೆಂಬರ್ 25ಕ್ಕೆ ಪಂಜಾಬ್ ಮತ್ತು ಹರಿಯಾಣದ ರೈತ ಸಂಘಟನೆಗಳು ಬಂದ್​ಗೆ ಕರೆ ಕೊಟ್ಟಿವೆ. ಕರ್ನಾಟಕದಲ್ಲೂ ಅದೇ ದಿನ ಬಂದ್ ಆಚರಿಸಲು ಚಿಂತನೆ ನಡೆದಿದೆ. ಈ ಕುರಿತು ನಾಳೆ ವಿವಿಧ ಸಂಘಟನೆಗಳ ಮುಖಂಡರು ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ.

ಕಬ್ಬು ಪಾವತಿ ಭರವಸೆ: 

ಇಂದು ಸಂಜೆ ಬಾಗಲಕೋಟೆ ರೈತ ಮುಖಂಡರು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕಬ್ಬ ಪಾವತಿ ಬಗ್ಗೆ ಮನವಿ ಮಾಡಿದರು.  ಸಾವರಿನ್ ಶುಗರ್ ಕಾರ್ಖಾನೆ ಯಿಂದ ರೈತರಿಗೆ ಬಾಕಿ ಹಣ ನೀಡಬೇಕಿದ್ದು, ಇದನ್ನು ಕೊಡಿಸುವಂತೆ ಮನವಿ ಮಾಡಿದರು. ಇದಕ್ಕೆ ಸಿಎಂ ಕೂಡ ಸಕಾರತ್ಮಕ ಭರವಸೆ ನೀಡಿದರು. ಈ ಹಿನ್ನೆಲೆ ಅವರು ಫ್ರೀಡಂ ಪಾರ್ಕ್​ನಲ್ಲಿ ನಡೆಸುತ್ತಿರುವ ಪ್ರತಿಭಟನೆ ಕೈ ಬಿಡುತ್ತೇವೆ. ಆದರೆ ಸೆ.25 ರಂದು ಭೂ ಸುಧಾರಣೆ ಕಾಯ್ದೆ ವಿರೋಧಿಸಿ ಕರೆ ನೀಡಲಾಗಿರುವ  ಭಾರತ್ ಬಂದ್ ಗೆ ಬೆಂಬಲ ನೀಡುತ್ತೇವೆ ಎಂದರು. 
Published by:Seema R
First published: