ಬೆಂಗಳೂರು(ಜು.28): ಕೊರೋನಾ ಸಂದರ್ಭದಲ್ಲಿ ಸರ್ಕಾರ ಹಾಗೂ ಆಶಾ ಕಾರ್ಯಕರ್ತೆಯರ ನಡುವಿನ ಸಮರ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಯಾಕೆಂದರೆ ವಿವಿಧ ಬೇಡಿಕೆ ಈಡೇರಿಸುವಂತೆ ಇಂದು ಸಿಎಂ ಯಡಿಯೂರಪ್ಪ ಭೇಟಿ ಮಾಡಿದ್ದ ಆಶಾ ಕಾರ್ಯಕರ್ತೆಯರ ಮಾತುಕತೆ ವಿಫಲವಾಗಿದೆ.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿದ್ದ ಕಾರ್ಯಕರ್ತೆಯರು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಸಿಎಂ ಬಳಿ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಸಿಎಂ ಯಡಿಯೂರಪ್ಪ, ಬೇಡಿಕೆ ಈಡೇರಿಸುವ ಬಗ್ಗೆ ಭರವಸೆ ನೀಡಿದರು. ಆ ಮೂಲಕ ಈ ಬಗ್ಗೆ ಪರಿಶೀಲಿಸಿ ನಿರ್ಧಾರ ಕೈಗೊಳ್ಳುವಂತೆ ಆರೋಗ್ಯ ಸಚಿವ ಬಿ ಶ್ರೀರಾಮುಲುಗೆ ಸೂಚನೆ ನೀಡಿದರು.
ಬೆಂಗಳೂರಿನಲ್ಲಿ ತಲೆ ಎತ್ತಿದ ಇ-ಸಿಮ್ ವಂಚನೆ ಜಾಲ; ನಿಮ್ಮ ಬ್ಯಾಂಕ್ ಖಾತೆಗೂ ಕನ್ನ ಹಾಕಬಹುದು ಎಚ್ಚರ..!
ಬಳಿಕ ಆಶಾ ಕಾರ್ಯಕರ್ತೆಯರ ಜೊತೆ ಚರ್ಚಿಸಿದ ಶ್ರೀರಾಮುಲು, ಬರೀ ಬೇಡಿಕೆ ಈಡೇರಿಸುವ ಭರವಸೆಯನ್ನು ಮಾತ್ರ ನೀಡಿದರು. ಆದರೆ ಯಾವಾಗ ಈಡೇರಿಸುತ್ತೇವೆ ಎಂಬ ಸಮಯದ ಬಗ್ಗೆ ಮಾತ್ರ ತಿಳಿಸಿಲ್ಲ. ಇದರಿಂದ ಆಶಾ ಕಾರ್ಯಕರ್ತೆಯರು ಇದೀಗ ಮತ್ತೊಮ್ಮೆ ಚರ್ಚಿಸಿ, ಹೋರಾಟ ಮುಂದುವರೆಸುವ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ.
ನಾಳೆ ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಬೆಳಿಗ್ಗೆ 11.30ಕ್ಕೆ ಸಾವಿರಾರು ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಆದರೆ ಸಿಎಂ ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕುವುದಾಗಲಿ, ಯಾವುದೇ ರ್ಯಾಲಿ ಆಗಲಿ ನಡೆಸದೆ ಇರಲು ತೀರ್ಮಾನ ಮಾಡಿದ್ದಾರೆ. ಬರೀ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದರ ಮೂಲಕ ತಮ್ಮ ಬೇಡಿಕೆ ಈಡೇರಿಸಿಕೊಳ್ಳಲು ಗುರಿ ಹೊಂದಿದ್ದಾರೆ.
ಇನ್ನೂ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಕಾಂಗ್ರೆಸ್ ಕೂಡ ಬೆಂಬಲ ನೀಡಿದ್ದು, ಇವರ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದೆ. ಇದೀಗ ಇವರ ರಾಜ್ಯ ಸರ್ಕಾರಕ್ಕೆ ತಲೆ ನೋವಾಗಿ ಪರಿಣಮಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ