Ashwath Narayan: ಮೃತ ಪ್ರವೀಣ್ ಕುಟುಂಬಕ್ಕೆ 10 ಲಕ್ಷ ರೂ. ವೈಯಕ್ತಿಕ ನೆರವು ನೀಡಿದ ಅಶ್ವತ್ಥ ನಾರಾಯಣ

ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕವಾಗಿ 10 ಲಕ್ಷ ರೂ. ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಸಚಿವ ಅಶ್ವತ್ಥ​ ನಾರಾಯಣ್

ಸಚಿವ ಅಶ್ವತ್ಥ​ ನಾರಾಯಣ್

  • Share this:
ಬೆಂಗಳೂರು (ಜು.28):  ಬಿಜೆಪಿ ಕಾರ್ಯಕಾರಿಣಿ ಸದಸ್ಯ ಪ್ರವೀಣ್ (Praveen) ಹತ್ಯೆಯಾಗಿದೆ ಈ ಹಿನ್ನೆಲೆ ಇವತ್ತು ನಡೆಯಬೇಕಿದ್ದ ಜನೋತ್ಸವವನ್ನು ರದ್ದು ಮಾಡಿದ್ದೀವಿ ಎಂದು ಸಚಿವ ಅಶ್ವತ್ಥ ನಾರಾಯಣ (Ashwath Narayan) ಹೇಳಿದ್ದಾರೆ.  ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಹಲವಾರು ಜನಪರ ಯೋಜನೆ ಗಳ‌‌ ಬಗ್ಗೆ ವಿವರ ನೀಡಿದ್ದಾರೆ. ಪ್ರವೀಣ್ ಹತ್ಯೆ ಪ್ರಕರಣವನ್ನು  ಸರ್ಕಾರ (Government) ಗಂಭೀರವಾಗಿ ತೆಗೆದುಕೊಂಡಿದೆ. ಅಲ್ಲದೇ ಗಂಭೀರವಾಗಿ ಕ್ರಮ ತೆಗೆದುಕೊಳ್ಳುವ ಬಗ್ಗೆ ಸರ್ಕಾರ ತಿಳಿಸಿದೆ ಎಂದ್ರು. ಇನ್ನು ಮೃತ ದುರ್ದೈವಿ ಪ್ರವೀಣ್​ ಕುಟುಂಬಕ್ಕೆ 25 ಲಕ್ಷ ಪರಿಹಾರ (Solution) ನೀಡಲು ಹಾಗೂ ಅವರಿಗೆ ಮನೆ ಕಟ್ಟಿಕೊಡುವ ಜವಾಬ್ದಾರಿ ರಾಜ್ಯಾಧ್ಯಕ್ಷರು ತೆಗೆದುಕೊಂಡಿದ್ದಾರೆ. ಪ್ರವೀಣ್ ಮನೆಗೆ ನಾಯಕರ (Leaders) ಭೇಟಿಗೂ ನಿರ್ಧಾರ ಮಾಡಿದ್ದೇವೆ. ಕೇಸ್​ನಲ್ಲಿ ಬೇರೆ ರಾಜ್ಯಗಳ ದುಷ್ಟ ಶಕ್ತಿಗಳ ಪಾತ್ರ ಏನಾದರೂ ಇದೆಯಾ ಎಂಬುದರ ಬಗ್ಗೆ ಪರಿಶೀಲಿಸಿ, ಇದನ್ನು NIAಗೆ ಕೊಡಬೇಕು ಎಂದು ಆಗ್ರಹ ಮಾಡುತ್ತೇವೆ ಎಂದು ಸಚಿವ ಅಶ್ವತ್ಥ​ ನಾರಾಯಣ್ ಹೇಳಿದ್ದಾರೆ.

10 ಲಕ್ಷ ರೂ.ಗಳ ಚೆಕ್ ಕುಟುಂಬಕ್ಕೆ ತಲುಪಿಸುವೆ

ಸಮಾಜವಿರೋಧಿ ಶಕ್ತಿಗಳ ಅಮಾನುಷ ಕ್ರೌರ್ಯಕ್ಕೆ ಬಲಿಯಾದ ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕವಾಗಿ 10 ಲಕ್ಷ ರೂ. ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದನ್ನು ನೆರವು ಎಂದು ಹೇಳಲು ಇಷ್ಟ ಪಡುವುದಿಲ್ಲ. ಇದು ನನ್ನ ಕರ್ತವ್ಯವಾಗಿದೆ ಎಂದರು. 10 ಲಕ್ಷ ರೂ.ಗಳ ಚೆಕ್ ಅನ್ನು ಪ್ರವೀಣ್ ಅವರ ಕುಟುಂಬಕ್ಕೆ ತಲುಪಿಸಲಾಗುವುದು. ಅವರ ಬಲಿದಾನಕ್ಕೆ ನಾವು ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಅಶ್ವತ್ಥ ನಾರಾಯಣ ಭಾವುಕರಾದ್ರು.

ಇದನ್ನೂ ಓದಿ: Praveen Murder: ಕಂಡೋರ ಮಕ್ಕಳನ್ನು ಸಾವಿನ ದವಡೆಗೆ ನೂಕಿ ಮತ ಫಸಲು ತೆಗೆಯುವ ನರಹಂತಕ ರಾಜಕಾರಣ ನಿಲ್ಲಲಿ; HDK

ಹಂತಕರಿಗೆ ತಕ್ಕ ಶಿಕ್ಷೆ ನೀಡಲಾಗುತ್ತದೆ

ಪ್ರವೀಣ್ ಅವರ ಹಂತಕರು ಎಲ್ಲೇ ಇದ್ದರೂ ಕಠಿಣ ಕ್ರಮ ಜರುಗಿಸಲಾಗುವುದು. ಪಕ್ಷದ ಕಾರ್ಯಕರ್ತರ ಆಕ್ರೋಶ ನನಗೆ ಅರ್ಥವಾಗುತ್ತದೆ. ಅಪರಾಧಿಗಳ ಹೆಡೆಮುರಿ ಕಟ್ಟುವ ಶಕ್ತಿ ಬಿಜೆಪಿ ಸರಕಾರಕ್ಕಿದೆ ಎಂದು ಸಚಿವರು ಪ್ರತಿಕ್ರಿಯಿಸಿದರು. ಕೆಲ ತಿಂಗಳ ಹಿಂದೆ ಶಿವಮೊಗ್ಗದಲ್ಲಿ ಹೀಗೆಯೇ ಹತ್ಯೆಯಾದ ಹರ್ಷನ ಕುಟುಂಬಕ್ಕೂ ಸಚಿವರು ಮಾನವೀಯವಾಗಿ ಸ್ಪಂದಿಸಿದ್ದರು.

ಇಬ್ಬರು ಪ್ರಮುಖ ಆರೋಪಿಗಳ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯು ಪ್ರಗತಿಯಲ್ಲಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮತ್ತು ಪೊಲೀಸ್​ ವರಿಷ್ಠಾಧಿಕಾರಿ ರಿಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಝಕೀರ್ ಮತ್ತು ಮಹಮ್ಮದ್ ಶಫಿಕ್ ಎಂಬವರನ್ನು ಬಂಧಿಸಿರುವ ಬಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:  Praveen Murder: ಏಳು SDPI ಕಾರ್ಯಕರ್ತರು ವಶಕ್ಕೆ; ಆತ್ಮೀಯ ಗೆಳೆಯ ಪ್ರವೀಣ್ ಬಗ್ಗೆ ಆರೀಫ್ ಹೇಳಿದ್ದು ಹೀಗೆ

ಆರೋಪಿಗಳಲ್ಲಿ ಶಫಿಕ್ ಬೆಳ್ಳಾರೆ ಮತ್ತು ಝಕೀರ್ ಸವಣೂರು ನಿವಾಸಿ ಎನ್ನಲಾಗ್ತಿದೆ. ಝಕೀರ್ ಮೇಲೆ ಈ ಹಿಂದೆ ಒಂದು ಕ್ರಿಮಿನಲ್ ಕೇಸ್ ಇದೆ. ಈ ಇಬ್ಬರ ಸಂಘಟನೆ ಹಿನ್ನೆಲೆಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಕೊಲೆಗೆ ಸ್ಪಷ್ಟ ಕಾರಣದ ಬಗ್ಗೆ, ಇನ್ನೂ ಯಾರಾದರೂ ಇದ್ದಾರಾ ಎಂಬ ಬಗ್ಗೆ ಕೂಲಂಕಶವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಎಸ್​ಪಿ ತಿಳಿಸಿದ್ದಾರೆ.ಇದೇ ವೇಳೆ ಮಾತನಾಡಿದ ಕಾನೂನು ಸುವ್ಯಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್, ಈಗಾಗಲೇ ಸುಮಾರು 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಅವರಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಹತ್ಯೆಯ ಬಗ್ಗೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ವಿವರಿಸಿದರು.
Published by:Pavana HS
First published: