ರಾಮನಗರ(ಜ. 20): ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಭೂ ಕಬಳಿಕೆ ಆರೋಪ ಮಾಡಿದ್ದ ಎಸ್.ಆರ್. ಹಿರೇಮಠ ಅವರ ಮೇಲೆ ಇಂದು ಹಲ್ಲೆ ಯತ್ನ ನಡೆದಿದೆ. ರಾಮನಗರ ಜಿಲ್ಲೆಯ ಬಿಡದಿಯ ಕೇತಗಾನಹಳ್ಳಿಯಲ್ಲಿ ಕುಮಾರಸ್ವಾಮಿ ಬೆಂಬಲಿಗರೆನ್ನಲಾದ ವ್ಯಕ್ತಿಗಳು ಹಿರೇಮಠ ಮತ್ತು ಅವರ ಸಂಗಡಿಗರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಜಿ ಸಿಎಂ ಎಚ್ಡಿಕೆ ರಾಮನಗರದ ಕೇತಗಾನಹಳ್ಳಿಯಲ್ಲಿ ಸುಮಾರು 200 ಎಕರೆ ಭೂಮಿ ಕಬಳಿಸಿದ್ದಾರೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಗಂಭೀರ ಆರೋಪ ಮಾಡಿದ್ದರು. ಜೊತೆಗೆ ಎಚ್ಡಿಕೆ ವಿರುದ್ಧ ಲೋಕಾಯುಕ್ತಕ್ಕೆ ದೂರನ್ನು ಕೂಡ ನೀಡಿದ್ದರು.
ಈ ಸಂಬಂಧ ಎಸ್.ಆರ್. ಹಿರೇಮಠ ಇಂದು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದ್ದರು. ಸ್ವರಾಜ್ ಇಂಡಿಯಾ ಪಕ್ಷದ ರವಿ ಕೃಷ್ಣಾರೆಡ್ಡಿ ಸೇರಿದಂತೆ ಇತರರೊಂದಿಗೆ ಬಿಡದಿಯ ಕೇತಗಾನಹಳ್ಳಿಗೆ ಎಸ್.ಆರ್. ಹಿರೇಮಠ್ ತೆರಳಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿಗಳು ಎಸ್.ಆರ್. ಹಿರೇಮಠ ಹಾಗೂ ಅವರ ಸಂಗಡಿಗರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ನಡೆಸಲು ಯತ್ನಿಸಿದ್ದಾರೆ ಎನ್ನಲಾಗಿದೆ.
ಮಂಗಳೂರು ಏರ್ಪೋರ್ಟ್ನಲ್ಲಿ ಪತ್ತೆಯಾಯ್ತು ಸಜೀವ ಬಾಂಬ್; ಭದ್ರತಾ ವೈಫಲ್ಯ, ವಿಮಾನ ನಿಲ್ದಾಣ ಕೆಲಕಾಲ ಬಂದ್
ದುಷ್ಕರ್ಮಿಗಳು ಹಲ್ಲೆಗೆ ಯತ್ನಿಸುವ ಮುನ್ನ ಹಿರೇಮಠರ ಕಾರಿನ ಚಕ್ರದ ಗಾಳಿ ತೆಗೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೆ ಯತ್ನಿಸಿದ ಅಪರಿಚಿತ ವ್ಯಕ್ತಿಗಳು ಕುಮಾರಸ್ವಾಮಿ ಬೆಂಬಲಿಗರಿರಬಹುದೆಂಬ ಶಂಕೆ ಇದೆ.
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ದೇವೇಗೌಡರ ಪತ್ನಿಯ ಸಹೋದರಿ ಸಾವಿತ್ರಮ್ಮ, ಸಂಬಂಧಿ ಡಿ.ಸಿ. ತಮ್ಮಣ್ಣ ಹಾಗೂ ತಮ್ಮಣ್ಣ ಸೋದರ ನಂಜುಡಯ್ಯರಿಂದ ಭೂ ಕಬಳಿಕೆಯಾಗಿದೆ. ನೂರಾರು ಕೋಟಿ ರೂಪಾಯಿ ಬೆಲೆಬಾಳುವ ಜಮೀನು ಕಬಳಿಸಿದ್ದಾರೆ. ಈ ಬಗ್ಗೆ ಕರ್ನಾಟಕ ಹೈ ಕೋರ್ಟ್ನಲ್ಲಿ 131 ಪುಟಗಳ ರಿಟ್ ಪೆಟಿಷನ್ ಹಾಕಿದ್ದೇವೆ ಎಂದು ಎಸ್.ಆರ್. ಹಿರೇಮಠ್ ಈ ಹಿಂದೆ ಹೇಳಿದ್ದರು.
‘ಪರೀಕ್ಷಾ ಪೇ ಚರ್ಚಾ’: ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ಆರಂಭ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ