ಯಾರೂ ಇಲ್ಲದ ವೇಳೆ ವಿದ್ಯಾರ್ಥಿನಿ ಮನೆಗೆ ಶಿಕ್ಷಣಾಧಿಕಾರಿ ಭೇಟಿ; ಸ್ಥಳೀಯರಿಂದ ಹಲ್ಲೆ

ಗಾಯಗೊಂಡ ಬಿಇಒ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಪ್ರಕರಣ ಸಂಬಂಧ ಮುಂಡರಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

 • Share this:
  ಗದಗ(ಫೆ.21): ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಿಇಒ(ಕ್ಷೇತ್ರ ಶಿಕ್ಷಣಾಧಿಕಾರಿ)  ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ ಆರೋಪದಲ್ಲಿ ಅವರ ಮೇಲೆ ಪೋಷಕರು ಹಾಗೂ ಸ್ಥಳೀಯರು ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆ ಮುಂಡರಗಿಯಲ್ಲಿ ನಡೆದಿದೆ.

  ಮುಂಡರಗಿಯ ಕ್ಷೇತ್ರ ಶಿಕ್ಷಣಾಧಿಕಾರಿ(ಬಿಇಒ) ಎಸ್.ಎನ್​.ಹಳ್ಳಿಗುಡಿ ಹಲ್ಲೆಗೊಳಗಾದ ಅಧಿಕಾರಿ. ಯಾರೂ ಇಲ್ಲದ ಸಮಯದಲ್ಲಿ ವಿದ್ಯಾರ್ಥಿನಿ ಮನೆಗೆ ನುಗ್ಗಿದ್ದಾರೆ ಎಂದು ಆರೋಪಿಸಿ ಆಕೆಯ ಪೋಷಕರು ಹಾಗೂ ಸ್ಥಳೀಯರು ಆಕ್ರೋಶಗೊಂಡಿದ್ದಾರೆ. ಬಳಿಕ ಆರು ಮಂದಿ ಮುಂಡರಗಿ ಪಟ್ಟಣದ ಎಡಿ ನಗರದಲ್ಲಿರುವ ಬಿಇಒ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ.

  Sedition Case: ಪಾಕಿಸ್ತಾನ ಜಿಂದಾಬಾದ್​​ ಎಂದ ಅಮೂಲ್ಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

  "ಬಿಇಒ ಎಸ್ ಎನ್ ಹಳ್ಳಿಗುಡಿ ನಿನ್ನೆ ಮುಂಡರಗಿ ತಾಲೂಕಿನ ಹಳ್ಳಿಕೆರೆ ಸರಕಾರಿ ಶಾಲೆಗೆ ಭೇಟಿ ನೀಡಿದ್ದರು. ಈ ವೇಳೆ ವಿದ್ಯಾರ್ಥಿನಿ ಬಿಇಒ ಅವರನ್ನು ತಮ್ಮ ಮನೆಗೆ ಕರೆದಿದ್ದಳು. ಬಿಇಒ ಮನೆಗೆ ಹೋಗಿ ಚಹಾ ಕುಡಿದು ಬಂದಿದ್ದರು. ಆ ಸಮಯದಲ್ಲಿ ಮನೆಯಲ್ಲಿ ಯಾರು ಇರಲಿಲ್ಲವಂತೆ.  ಹೀಗಾಗಿ ಪೋಷಕರು ಬಿಇಒ ಮೇಲೆ ಹಲ್ಲೆ ಮಾಡಿದ್ದಾರೆ" ಎಂದು ಪೊಲೀಸರು ತಿಳಿಸಿದ್ದಾರೆ.

  ಗಾಯಗೊಂಡ ಬಿಇಒ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಪ್ರಕರಣ ಸಂಬಂಧ ಮುಂಡರಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  ಮೋದಿ-ಶಾ ಎಲ್ಲಾ ಚುನಾವಣೆಯಲ್ಲೂ ಗೆಲ್ಲಲು ಸಾಧ್ಯವಿಲ್ಲ, ದೆಹಲಿಯಲ್ಲಿ ಬಿಜೆಪಿಯನ್ನು ಬಲಪಡಿಸಿ; ಮೋಹನ್ ಭಾಗವತ್​
  First published: