• Home
  • »
  • News
  • »
  • state
  • »
  • Siddaramaiah: ಮೂರು ಕ್ಷೇತ್ರಗಳ ಮೇಲೆ ಸಿದ್ದು ಕಣ್ಣು! ಅಲ್ಲಿ ಬಿಟ್, ಇಲ್ಲಿ ಬಿಟ್ ಸಿದ್ದರಾಮಯ್ಯ ಸ್ಪರ್ಧಿಸೋದೆಲ್ಲಿ?

Siddaramaiah: ಮೂರು ಕ್ಷೇತ್ರಗಳ ಮೇಲೆ ಸಿದ್ದು ಕಣ್ಣು! ಅಲ್ಲಿ ಬಿಟ್, ಇಲ್ಲಿ ಬಿಟ್ ಸಿದ್ದರಾಮಯ್ಯ ಸ್ಪರ್ಧಿಸೋದೆಲ್ಲಿ?

ಸಿದ್ದರಾಮಯ್ಯ

ಸಿದ್ದರಾಮಯ್ಯ

ಮೈಸೂರಿನಲ್ಲಿ ಈ ಬಗ್ಗೆ ಮಾತಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯದ ಹಲವು ಕ್ಷೇತ್ರಗಳಿಂದ ಸ್ಪರ್ಧೆಗೆ ಒತ್ತಾಯ ಬಂದಿದೆ. ನಾನು 3 ಕ್ಷೇತ್ರಗಳನ್ನ ಶಾರ್ಟ್ ಲಿಸ್ಟ್ ಮಾಡಿದ್ದೇನೆ ಎಂದ್ರು. 

  • News18 Kannada
  • Last Updated :
  • Karnataka, India
  • Share this:

ಮೈಸೂರು (ನ.18): 2023ರ ವಿಧಾನಸಭೆ ಚುನಾವಣೆಗೆ (Assembly Election) ಕ್ಷೇತ್ರ ಹುಡುಕಾಟದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಮುಂದಿನ ಚುನಾವಣೆಯಲ್ಲಿ ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ ಮಾತಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯದ ಹಲವು ಕ್ಷೇತ್ರಗಳಿಂದ ಸ್ಪರ್ಧೆಗೆ (Competition) ಒತ್ತಾಯ ಬಂದಿದೆ. ನಾನು 3 ಕ್ಷೇತ್ರಗಳನ್ನ ಶಾರ್ಟ್ ಲಿಸ್ಟ್ ಮಾಡಿದ್ದೇನೆ ಎಂದ್ರು. ಕೋಲಾರ, (Kolara) ಬಾದಾಮಿ (Badami) ಹಾಗೂ ವರುಣ (Varuna) ಕ್ಷೇತ್ರ ಶಾರ್ಟ್ ಲಿಸ್ಟ್​ನಲ್ಲಿದೆ. ಚುನಾವಣೆ ಘೋಷಣೆ ನಂತರ ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ತಿಳಿಸುತ್ತೇನೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಸರ್ವೆ ಮಾಡಿಸಿದ್ರೆ ತಪ್ಪೇನು? ಮೋದಿ ಮಾಡಿಸಿಲ್ವಾ?


ಸೋಲಿನ ಭಯದಲ್ಲಿ ಸರ್ವೆ ಮೊರೆ ಹೋಗಿದ್ದಾರೆ ಎಂಬ ಆರೋಪ ವಿಚಾರಕ್ಕೆ ಮಾತಾಡಿದ ಸಿದ್ದರಾಮಯ್ಯ, ಸರ್ವೆ ಮಾಡಿಸಿದ್ರೆ ತಪ್ಪೇನು, ನರೇಂದ್ರ ಮೋದಿ 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿರಲಿಲ್ವ. ಹಾಗಾದ್ರೆ ಅವ್ರು ಸರ್ವೆ  ಮಾಡಿಸಿರಲಿಲ್ವ. ನಾವು ರಾಜ್ಯವ್ಯಾಪಿ ಪ್ರವಾಸ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


siddaramaiah visits kolar today mrq
ಮಾಜಿ ಸಿಎಂ ಸಿದ್ದರಾಮಯ್ಯ


ನಾನು ಸರ್ವೆ ಮಾಡಿಸಿಲ್ಲ, ಪಕ್ಷ ಸರ್ವೆ ಮಾಡಿಸಿದೆ


ಸುರಕ್ಷಿತ ಕ್ಷೇತ್ರಕ್ಕಾಗಿ ಸರ್ವೆ ಮಾಡಿಸ್ತಾರೆ. ನಾನು ಸರ್ವೆ ಮಾಡಿಸಿಲ್ಲ, ಪಕ್ಷ ಸರ್ವೆ ಮಾಡಿಸಿದೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜೆಡಿಎಸ್ ಪಕ್ಷದ ಪಂಚರತ್ನ ಯಾತ್ರೆ ಆರಂಭಕ್ಕೆ ಸಂಬಂಧಿಸಿದಂತೆ ಮಾತಾಡಿದ ಸಿದ್ದರಾಮಯ್ಯ, ಯಾವ ಯಾತ್ರೆ ಮಾಡಿದ್ರು ಪರವಾಗಿಲ್ಲ. ಪಂಚರತ್ನ, ಅಷ್ಟರತ್ನ, ದಶರತ್ನ ಬೇಕಾದರೆ ಮಾಡಲಿ ಅವರ ಸಂಘಟನೆ ಅವರಿಗೆ ನಾನು ಯಾರಿಗೂ ತಲೆ ಕೆಡೆಸಿಕೊಳ್ಳಲ್ಲ ಎಂದು ಜೆಡಿಎಸ್ ಪಂಚರತ್ನ ಯಾತ್ರೆಯನ್ನ ವಿಪಕ್ಷ ನಾಯಕ ಸಿದ್ದರಾಮಯ್ಯ  ಲೇವಡಿ ಮಾಡಿದ್ದಾರೆ.


ನಾಳೆ ಚುನಾವಣಾ ಆಯೋಗದ ಮುಂದೆ ಪ್ರತಿಭಟನೆ


ಮತದಾರರ ಪಟ್ಟಿ ಪರಿಷ್ಕರಿಣೆ ವೇಳೆ ಮಾಹಿತಿ ಕಳ್ಳತನ ಆಗಿದ್ದು, ಈ ಬಗ್ಗೆ ದೂರು ನೀಡಲಾಗಿದೆ. ನಾಳೆ ಚುನಾವಣಾ ಆಯೋಗದ ಮುಂದೆ ಧರಣಿ ಮಾಡುತ್ತೇವೆ ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬಿಬಿಎಂಪಿ ಆಯುಕ್ತರು ಖಾಸಗಿ ಕಂಪನಿಗೆ ಇದನ್ನ ವಹಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಸಚಿವರು ಆಗಿರುವ ಬಸವರಾಜ ಬೊಮ್ಮಾಯಿಗೆ ಗೊತ್ತಿದ್ದೇ ಆಗಿದೆ ಎಂದ್ರು.


ಬಿಜೆಪಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ


ಚುನಾವಣಾ ಆಯೋಗ ಸ್ವೀಪ್ ಹೆಸರಿನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಇವರು ಕಾಂಪಿಟೇಟಿವ್ ಬಿಡ್ ಕರಿಯಬೇಕಿತ್ತು. ಉಚಿತವಾಗಿ ಪರಿಷ್ಕರಣೆ ಮಾಡುತ್ತೇವೆ ಎಂದಿದ್ದಕ್ಕೆ ಚಿಲುಮೆ ಮತ್ತು ಹೊಂಬಾಳೆ ಕಂಪನಿಗೆ ಕೊಟ್ಟಿದ್ದಾರೆ. ಇದಕ್ಕೆ ಕೋಟ್ಯಾಂತರ ಖರ್ಚಾಗುತ್ತದೆ. ಆ ಕಂಪನಿ ಲಾಭ ಇಲ್ಲದೆ ಇದನ್ನು ಮಾಡುತ್ತದೆಯೇ. ಅಲ್ಪಸಂಖ್ಯಾತ, ದಲಿತರು, ಹಿಂದುಳಿದವರು ಕಾಂಗ್ರೆಸ್ ಪರ ಇರುತ್ತಾರೆ. ಅಂತಹ ಮತದಾರರ ಮಾಹಿತಿ ಡಿಲೀಟ್ ಮಾಡಿ ಬಿಜೆಪಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಕಾನೂನು ಬಾಹಿರವಾಗಿ ಬಿಎಲ್‌ಒಗಳ ನೇಮಕ


ನಾವು ಆರೋಪ ಮಾಡಿದ ಮೇಲೆ ಬಿಬಿಎಂಪಿ ಆಯುಕ್ತರು ರಕ್ಷಣಾತ್ಮಕವಾಗಿ ಹೇಳಿಕೆ ನೀಡುತ್ತಿದ್ದಾರೆ. ಇಲ್ಲಿ ಮಾಹಿತಿ ಕಳ್ಳತನ ಆಗಿದೆ. ಬಿಎಲ್‌ಓಗಳು ಯಾವಾಗಲೂ ಸರ್ಕಾರಿ ಅರೆ ಸರ್ಕಾರಿ ನೌಕರರಾಗಬೇಕು. ಇವರು ತಮಗೆ ಬೇಕಾದವರನ್ನು ಬಿಎಲ‌್‌ಒ ಮಾಡಿಕೊಂಡಿದ್ದಾರೆ. ಇದು ಕಾನೂನು ಬಾಹಿರವಾಗಿ ಹಾಗೂ ಖಾಸಗಿಯವರನ್ನ ಬಿಎಲ್‌ಒಗಳ ನೇಮಕಕ್ಕೆ ನಿಮಗೆ ಅಧಿಕಾರ ಕೊಟ್ಟವರು ಯಾರು ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.


ಇದನ್ನೂ ಓದಿ: Karnataka Elections: ಹಳೇ ಗಂಡನ ಪಾದವೇ ಗತಿ: 'ಅನರ್ಹ'ರನ್ನು ಪಕ್ಷಕ್ಕೆ ಆಹ್ವಾನಿಸಿದ ಡಿಕೆಶಿಗೆ ಸಚಿವನ ತಿರುಗೇಟು!


ಸಂತೋಷ್ ಲಾರ್ಡ್ ಹೇಳಿಕೆಗೆ ಸಿದ್ದು ಪ್ರತಿಕ್ರಿಯೆ


ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಸ್ಪರ್ಧೆ ಬೇಡ ಎಂದ ಮಾಜಿ ಸಚಿವ ಸಂತೋಷ್ ಲಾರ್ಡ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅದನ್ನು ಪರಿಗಣನೆಗೆ ತೆಗೆದುಕೊಳ್ಳೋಣ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Published by:ಪಾವನ ಎಚ್ ಎಸ್
First published: